ಸುಹಾಸ್‌ ಶೆಟ್ಟಿ ಕೊಲೆಗೆ ವಿದೇಶಿ ಹಣ?: ತನಿಖೆ, ಪೊಲೀಸರಿಂದ ಬ್ಯಾಂಕ್‌ ಖಾತೆ ಪರಿಶೀಲನೆ

Published : May 06, 2025, 05:39 AM IST
ಸುಹಾಸ್‌ ಶೆಟ್ಟಿ ಕೊಲೆಗೆ ವಿದೇಶಿ ಹಣ?: ತನಿಖೆ, ಪೊಲೀಸರಿಂದ ಬ್ಯಾಂಕ್‌ ಖಾತೆ ಪರಿಶೀಲನೆ

ಸಾರಾಂಶ

ಮೇ 1ರಂದು ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶದಿಂದ ಹಣ ಹರಿದು ಬಂದಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.   

ಮಂಗಳೂರು (ಮೇ.06): ಮೇ 1ರಂದು ಮಂಗಳೂರಿನಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶದಿಂದ ಹಣ ಹರಿದು ಬಂದಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುಹಾಸ್ ಶೆಟ್ಟಿಯ ಹತ್ಯೆ ಹಿಂದೆ ಹಲವಾರು ಕಾಣದ ಕೈಗಳ ಕೈವಾಡವಿರುವ ಶಂಕೆ ಹೆಚ್ಚಾಗಿದೆ. ಈ ಕುರಿತು ತನಿಖೆ ಮುಂದುವರಿಸುತ್ತಿರುವ ಪೊಲೀಸರು ಅನೇಕ ಬ್ಯಾಂಕ್ ಖಾತೆಗಳ ಪರಿಶೀಲನೆ ಆರಂಭಿಸಿದ್ದಾರೆ. ಕೇವಲ 5 ಲಕ್ಷ ರು.ಗೆ ಸುಹಾಸ್‌ರನ್ನು ಹತ್ಯೆ ಮಾಡಲಾಯಿತಾ? ಹತ್ಯೆಗೆ ವಿದೇಶದಿಂದ ಹಣ ಹರಿದು ಬಂದಿದೆಯಾ ಎಂಬುದೂ ಸೇರಿದಂತೆ ಎಲ್ಲಾ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶರಣ್ ಪಂಪ್‌ವೆಲ್‌, ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ: ಹಿಂದು ಮುಖಂಡರಾದ ಶರಣ್‌ ಪಂಪ್‌ವೆಲ್‌ ಹಾಗೂ ಭರತ್‌ ಕುಮ್ಡೇಲುಗೆ ಜಾಲತಾಣಗಳಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್‌ವೆಲ್‌ ಎಂದು ಪೋಸ್ಟ್ ಮಾಡಲಾಗಿದ್ದು, ಪೊಲೀಸ್ ಇಲಾಖೆಯ ಕ್ರಮದ ನಡುವೆ ದ್ವೇಷ ಕಾರುವ ಪೋಸ್ಟ್ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಮುಂದಿನ ಟಾರ್ಗೆಟ್ ಶರಣ್ ಪಂಪ್‌ವೆಲ್‌.. ಶರಣ್ ಹತ್ಯೆಯಾಗಲು ತಯಾರಾಗು’ ಎಂದು ಬೆದರಿಕೆ ಹಾಕಲಾಗಿದ್ದು, ಬಜರಂಗದಳ ಮುಖಂಡ ಭರತ್ ಕುಮ್ಡೆಲ್‌ಗೂ ಇದೇ ರೀತಿ ಬೆದರಿಕೆಯ ಪೋಸ್ಟ್‌ ಹಾಕಲಾಗಿದೆ.

ಸುಹಾಸ್ ಶೆಟ್ಟಿ ಹ*ತ್ಯೆಯಲ್ಲಿ ಬಜ್ಪೆ ಪೊಲೀಸ್ ಮುಖ್ಯ ಪೇದೆ ರಶೀದ್ ಭಾಗಿ, ಹಿಂದೂ ಮುಖಂಡನ ಆರೋಪ

ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ಆರೋಪಿಯಾಗಿದ್ದ ಭರತ್ ಕುಮ್ಡೆಲ್‌ ಬಗ್ಗೆ ಜಾಲತಾಣದಲ್ಲಿ ‘ನೆಕ್ಸ್ಟ್ ಟಾರ್ಗೆಟ್ ಭರತ್ ಕುಮ್ಡೆಲ್.. ಇಂ ಅಲ್ಲಾ’ ಎಂದು ಪೋಸ್ಟ್ ಮಾಡಲಾಗಿದೆ. 2017 ಜೂನ್ 21ರಂದು ಹತ್ಯೆಯಾಗಿದ್ದ ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಆರೋಪ ಈತನ ಮೇಲಿದೆ ಭರತ್‌ ಕುಮ್ಡೇಲ್‌ ಬಗ್ಗೆ ಸಝಿನ್ ಹಾಗೂ ಸಜೊವ್ ಕಾಂಟ್ ಹೆಸರಿನ ಖಾತೆಗಳಿಂದ ಪೋಸ್ಟ್ ಮಾಡಲಾಗಿದೆ. ಸುಹಾಸ್‌ ಹತ್ಯೆ ಬಳಿಕ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಈಗಾಗಲೇ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.

ಬಶೀರ್‌ ಕೊಲೆ ಆರೋಪಿಗೂ ಜೀವ ಬೆದರಿಕೆ: 2018 ರ ಜನವರಿಯಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರತಿಕಾರಕ್ಕೆ ಬಶೀರ್ ಕೊಲೆ ಘಟನೆ ಮಂಗಳೂರಿನ ಹೊರವಲಯ ಕೊಟ್ಟಾರ ಚೌಕಿ ಬಳಿ ನಡೆದಿತ್ತು. ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಶ್ರೀಜು ಈ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ‘ಶ್ರೀಜು ನೆಕ್ಸ್ಟ್ ಟಾರ್ಗೆಟ್’ ಎಂದು ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿತ್ತು. ಕಿಲ್ಲರ್ಸ್‌ ಟಾರ್ಗೆಟ್‌ ಹೆಸರಿನ ಪೇಜ್‌ನಿಂದ ಪೋಸ್ಟ್ ಆಗಿತ್ತು. ಭಾನುವಾರ ಮತ್ತೆ ಕಿಡಿಗೇಡಿಗಳು ವೈಯಕ್ತಿಕವಾಗಿ ಮೆಸೇಜ್ ಕಳುಹಿಸಿದ್ದಾರೆ.

ಪ್ರತೀಕಾರದ ಕಿಚ್ಚು!: ಜಾಲತಾಣಗಳಲ್ಲಿ ರಿವೆಂಜ್ ಪೋಸ್ಟ್‌ಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಹಿಂದೂ ಮುಖಂಡರ ಬಳಿಕ ಮುಸ್ಲಿಂ ನಾಯಕರಿಗೂ ಕೊಲೆ ಬೆದರಿಕೆ ಹಾಕಲಾಗಿದೆ. ಎಸ್‌ಡಿಪಿಐ ಮುಖಂಡರಿಗೂ ಸ್ಕೆಚ್‌ ಹಾಕಲಾಗಿದೆ. ರಿಯಾಜ್ ಫರಂಗಿಪೇಟೆ, ರಿಯಾಜ್ ಕಡಂಬು, ಶಾಫಿ ಬೆಳ್ಳಾರೆಗೆ ಕೊಲೆ ಬೆದರಿಕೆ ಹಾಕಲಾಗಿದ್ದು, ನೆಕ್ಸ್ಟ್ ಹಿಟ್ ಲಿಸ್ಟ್ ಎಂದು ಪೋಸ್ಟ್ ಮಾಡಲಾಗಿದೆ. ಯೂಟ್ಯೂಬ್ ವಿಡಿಯೋ ಒಂದರಲ್ಲಿ ಕೊಲೆ ಬೆದರಿಕೆಯ ಪೋಸ್ಟ್ ಮಾಡಲಾಗಿದ್ದು,ಇದರಲ್ಲಿ ಬಹುತೇಕ ವಿದೇಶದಿಂದಲೇ ನಿಯಂತ್ರಿಸಲ್ಪಡುತ್ತಿರುವ ಫೇಕ್ ಅಕೌಂಟ್‌ಗಳಾಗಿವೆ ಎಂದು ಹೇಳಲಾಗಿದೆ.

ಬಿಜೆಪಿಯವರು ಹೊಸದನ್ನು ಹಳೆಯದನ್ನಾಗಿ ಮಾಡ್ತಾರೆ: ಸಚಿವ ಸತೀಶ್ ಜಾರಕಿಹೊಳಿ

ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಸುಹಾಸ್‌ ಹತ್ಯೆ ಸುಪಾರಿಗೆ ವಿದೇಶಿ ಹಣ ಬಳಕೆಯಾಗಿದೆಯೇ ಅಥವಾ ಇಲ್ಲವೇ ಎಂಬ ವಿಚಾರದ ಸತ್ಯಾಂಶ ತನಿಖೆಯಿಂದ ಪತ್ತೆಯಾಗಲಿದೆ.
- ಡಾ। ಜಿ. ಪರಮೇಶ್ವರ್‌, ಗೃಹ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಚಿವ ಬೈರತಿ ಸುರೇಶ್ ವಿಧಾನಸೌಧದ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಕಳ್ಳತನ
ಮಲೆನಾಡಲ್ಲಿ ನಿಗೂಢ ವಿಮಾನದ ಹಾರಾಟ: ಬೆಚ್ಚಿಬಿದ್ದ ಕಾಫಿನಾಡು ಮಂದಿ, ಪೊಲೀಸರಿಗೂ ಸಿಗದ ಸುಳಿವು!