ಮಾದಪ್ಪನ ಬೆಟ್ಟ ದುರಂತ ಬಳಿಕ ಸರ್ಕಾರ ಮಹತ್ವದ ನಿರ್ಧಾರ! ಹೊಸ ರೂಲ್ಸ್‌ನಿಂದ ಚಾರಣಿಗರಿಗೆ ಬಿಗ್ ಶಾಕ್

Kannadaprabha News   | Kannada Prabha
Published : May 13, 2026, 05:53 AM IST
Forest Minister Ishwar Khandre issues temporary ban on trekking in wildlife-prone areas

ಸಾರಾಂಶ

ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಹಿನ್ನೆಲೆಯಲ್ಲಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ವನ್ಯಜೀವಿಗಳ ಸಂಚಾರವಿರುವ ಚಾರಣ ಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚಿಸಿದ್ದಾರೆ. 

ಬೆಂಗಳೂರು (ಮೇ.13): ಮಲೆಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರೆ ವೇಳೆ 10 ವರ್ಷದ ಬಾಲಕ ಚಿರತೆ ದಾಳಿಯಿಂದ ಸಾವಿಗೀಡಾದ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರವಿರುವ ಚಾರಣ ಪಥ ಮತ್ತು ಸಂಚಾರ ಪಥಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಮೇ 10ರಂದು ಚಾಮರಾಜನಗರ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿದ್ದು, ಅದರಿಂದ ಅರಣ್ಯ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ಚಾರಣಿಗರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಹುಲಿ, ಚಿರತೆ, ಆನೆ, ಕರಡಿ ಸೇರಿ ಇನ್ನಿತರ ವನ್ಯಜೀವಿಗಳು ಸಂಚರಿಸುವ ಮತ್ತು ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಿರುವ ಕಡೆ ಚಾರಣ ಮತ್ತು ಸಂಚಾರ ಪಥಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಬೇಕು. ಈ ಸಂಬಂಧ ಅಧಿಕೃತ ಸುತ್ತೋಲೆ ಹೊರಡಿಸಬೇಕು ಎಂದು ಈಶ್ವರ್ ಖಂಡ್ರೆ ನಿರ್ದೇಶಿಸಿದ್ದಾರೆ.

ಮಲೆಮಹದೇಶ್ವರದಲ್ಲಿ ಕಾಲ್ನಡಿಗೆ ಸ್ಥಗಿತ:

ಅದಕ್ಕೆ ಸಂಬಂಧಿಸಿ ಮಂಗಳವಾರ ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಚಾಮರಾಜನಗರ ಅರಣ್ಯಾಧಿಕಾರಿಗಳೊಂದಿಗೆ ಈಶ್ವರ್ ಖಂಡ್ರೆ ವರ್ಚ್ಯುವಲ್‌ ಸಭೆ ನಡೆಸಿದರು. ಈ ವೇಳೆ ಮಲೆಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆಯಲ್ಲಿ ಮಾತ್ರ ಕಾಲ್ನಡಿಗೆ ಮೂಲಕ ಸಾಗಲು ಅವಕಾಶ ನೀಡುವಂತೆ ಸೂಚಿಸಿದರು.

ಸದ್ಯ ನಾಗಮಲೆಗೆ 14 ಕಿ.ಮೀ. ನಡೆದು ಹೋಗಲು ಅವಕಾಶವಿದೆ. ಅದನ್ನು ಕಡಿತಗೊಳಿಸಿ, ಕೇವಲ 3 ಕಿ.ಮೀ. ಮಾತ್ರ ಕಾಲ್ನಡಿಗೆ ಮೂಲಕ ಹೋಗಲು ಅವಕಾಶ ನೀಡಬೇಕು. ಹೀಗೆ ನಡಿಗೆದಾರರಿಗೆ ವಾಕಿಟಾಕಿ, ಅಗತ್ಯ ಸುರಕ್ಷತಾ ಸಲಕರಣೆ ಹೊಂದಿದ ಮಾರ್ಗದರ್ಶಕ ಸೇವೆ ಒದಗಿಸಬೇಕು. ಟಿಕೆಟ್‌ ಕೌಂಟರ್‌ ಬಳಿಯಿಂದ ನಾಗಮಲೆ ಭಕ್ತರು ಜೀಪ್‌ನಲ್ಲಿ ಹೋಗುವುದನ್ನು ಕಡ್ಡಾಯಗೊಳಿಸಬೇಕು. ಉಳಿದ 3 ಕಿ.ಮೀ. ದುರ್ಗಮ ಅರಣ್ಯ ಸಂಚಾರ ಪಥದ ಎರಡೂ ಬದಿಯಲ್ಲಿ ವನ್ಯಜೀವಿಗಳು ಕಾಣುವಂತೆ ಕಳೆ ತೆಗೆಯಬೇಕು ಎಂದು ಹೇಳಿದರು.

ಸಿಬ್ಬಂದಿ ನಿಯೋಜಿಸಬೇಕು:

ಹಾಗೆಯೇ, ಮಾದಪ್ಪನ ದರ್ಶನಕ್ಕೆ 7 ಕಿ.ಮೀ. ಬೆಟ್ಟ ಹತ್ತಿ ಹೋಗಲು ವರ್ಷವಿಡೀ ಅವಕಾಶ ನೀಡದೆ ಶಿವರಾತ್ರಿ ಮತ್ತು ಯುಗಾದಿಯಲ್ಲಿ ಮಾತ್ರ ಅವಕಾಶ ನೀಡಬೇಕು. ಈ ಸಂದರ್ಭದಲ್ಲಿ ಹೆಚ್ಚಿನ ಅರಣ್ಯ ಸಿಬ್ಬಂದಿಯನ್ನು ಭಕ್ತರ ಸುರಕ್ಷತೆಗಾಗಿ ನಿಯೋಜಿಸಬೇಕು ಎಂದರು.

ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್‌ ಕುಮಾರ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್‌ ಪುಷ್ಕರ್‌, ಎಪಿಸಿಸಿಎಫ್‌ (ವನ್ಯಜೀವಿ) ಬಿಸ್ವಜಿತ್‌ ಮಿಶ್ರಾ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಟಲಿಗಳಲ್ಲಿ ಪೆಟ್ರೋಲ್ ವಿತರಣೆ ನಿಷೇಧ; ಇಂಡಿಯನ್ ಆಯಿಲ್ ಸಂಸ್ಥೆಯಿಂದ ಬಂಕ್ ಮಾಲೀಕರಿಗೆ ಕಠಿಣ ಆದೇಶ!
ರಾಜ್ಯದಲ್ಲಿ ವರುಣನ ಅಬ್ಬರ: ಧಾರವಾಡ, ಬೆಳಗಾವಿ, ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ! ಎಲ್ಲೆಲ್ಲಿ ಎಷ್ಟು? ವಿವರ ನೋಡಿ