ಚಿಕ್ಕಮಗಳೂರು: ಚಿರತೆ ಇದ್ದ ಬೋನಿನ ಬಾಗಿಲು ತೆರೆದು ಅರಣ್ಯ ‌ಸಿಬ್ಬಂದಿ ಹುಚ್ಚಾಟ!

Kannadaprabha News, Ravi Janekal |   | Kannada Prabha
Published : Aug 17, 2025, 06:18 AM IST
Leopard trap

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯ ನಾರಾಯಣಪುರ ಗ್ರಾಮದಲ್ಲಿ ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹತ್ತಿರದಿಂದ ನೋಡಲು ಬೋನಿನ ಬಾಗಿಲು ತೆರೆದು ಹುಚ್ಚಾಟ ನಡೆಸಿದ್ದಾರೆ. 

ಚಿಕ್ಕಮಗಳೂರು (ಆ.17): ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದು ಹುಚ್ಚಾಟ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ನಾರಾಯಣಪುರ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ, ಭಯ ಹುಟ್ಟಿಸಿತ್ತು. ಸ್ಥಳೀಯರು ಹೊಲ, ಗದ್ದೆ, ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಲು ಭಯ ಪಡುತ್ತಿದ್ದರು. ಹಾಗಾಗಿ ಅರಣ್ಯ ಇಲಾಖೆಯವರು ನಾರಾಯಣಪುರ ಗ್ರಾಮದ ಶಿವಯ್ಯ ಅವರ ಮನೆ ಬಳಿ ಬೋನಿಟ್ಟಿದ್ದರು.

ಶುಕ್ರವಾರ ರಾತ್ರಿ 12ರ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಯಾಗಿದ್ದ ಬೋನಿನ ಬಾಗಿಲನ್ನು ಅರ್ಧ ತೆಗೆದು ಹುಚ್ಚಾಟ ಮೆರೆದಿದ್ದಾರೆ. ಚಿರತೆ ದಾಳಿಗೆ ಯತ್ನಿಸಿದಾಗ ತಕ್ಷಣ ಬಾಗಿಲು ಹಾಕಿದ್ದಾರೆ. ಅಧಿಕಾರಿಗಳ ಈ ಹುಚ್ಚಾಟದ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅಪಾಯಕಾರಿ ಪ್ರಾಣಿ ಜೊತೆ ಈ ರೀತಿ ಹುಚ್ಚಾಟ ಆಡುವ ಸಿಬ್ಬಂದಿ ವಿರುದ್ಧ ಸ್ಥಳೀಯರು ಕೂಡ ಅಸಮಾಧಾನ ಹೊರಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌