
ಬೆಂಗಳೂರು(ಅ.06): ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಬಾಬಾ ಬುಡನ್‌ಗಿರಿ ಗುರು ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ಅವರ ನೇಮಕ ಆದೇಶವನ್ನು ಹೈಕೋರ್ಟ್ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬಹುದಾದ ಮುಂದಿನ ನಿರ್ಣಯಗಳ ಬಗ್ಗೆ ಚರ್ಚಿಸಲು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ(JC Madhuswamy) ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.
ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕಂದಾಯ ಸಚಿವ ಆರ್.ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸಮಿತಿಯ ಸದಸ್ಯರಾಗಿರಲಿದ್ದಾರೆ.
ದತ್ತಪೀಠದಲ್ಲಿ ಏನಾಗ್ತಿದೆ? ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ದತ್ತಪೀಠದ ಪೂಜೆಗೆ ಮೌಲ್ವಿ ನೇಮಕ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಂದಿನ ನಡೆಯ ಬಗ್ಗೆ ಚರ್ಚಿಸುವ ಸಂಬಂಧ ನನ್ನ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ. ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಕೆ ಮಾಡುವುದು, ಮುಂದಿನ ರೂಪುರೇಷೆಗಳೇನು? ನ್ಯಾಯಾಲಯದ ಆದೇಶ ಉಲ್ಲಂಘನೆಯಾಗದಂತೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಸೇರಿದಂತೆ ಇತರೆ ಅಂಶಗಳ ಕುರಿತು ಸಮಿತಿಯು ಸಮಾಲೋಚನೆ ನಡೆಸಲಿದೆ. ಮುಂದೆ ಕೈಗೊಳ್ಳಬಹುದಾದ ಪ್ರಕ್ರಿಯೆಗಳ ಕುರಿತು ಚರ್ಚಿಸಿ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕ ಇನ್ನೂ ಕಾಯ್ದೆಯಾಗಿಲ್ಲ. ಸಭಾಪತಿ ಬಸವರಾಜ ಹೊರಟ್ಟಿಅವರು ಸಹಿ ಹಾಕಬೇಕಿದೆ. ಅವರ ಸಹಿ ಬಳಿಕ ರಾಜ್ಯಪಾಲರಿಗೆ ವಿಧೇಯಕ ಕಳುಹಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ಬಳಿಕ ಕಾಯ್ದೆಯಾಗಲಿದೆ. ನಂತರ ಸುಪ್ರೀಂಕೋರ್ಟ್‌ಗೆ ಕಾಯ್ದೆ ಕುರಿತು ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ