ಕೇಸರಿ ಪಾಳಯಕ್ಕೆ ಬಿಗ್ ಶಾಕ್; ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಇಂದು ಕಾಂಗ್ರೆಸ್ ಸೇರ್ಪಡೆ!

By Ravi Janekal  |  First Published Oct 20, 2023, 8:46 AM IST

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ,  ಪೂರ್ಣಿಮಾ ಶ್ರೀನಿವಾಸ್ ಅವರು ಇಂದು (ಅಕ್ಟೋಬರ್ 20) ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.  ಇಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿರುವ ಪೂರ್ಣಿಮಾ ಶ್ರೀನಿವಾಸ್. ಪೂರ್ಣಿಮಾ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ ಬೈ. 


ಬೆಂಗಳೂರು (ಅ.20): ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ,  ಪೂರ್ಣಿಮಾ ಶ್ರೀನಿವಾಸ್ ಅವರು ಇಂದು (ಅಕ್ಟೋಬರ್ 20) ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

 ಇಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿರುವ ಪೂರ್ಣಿಮಾ ಶ್ರೀನಿವಾಸ್. ಪೂರ್ಣಿಮಾ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ ಬೈ ಹೇಳಲಿದ್ದಾರೆ.

Tap to resize

Latest Videos

ಪತಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು 'ಕೈ' ಹಿಡಿದ ಬಿಜೆಪಿ ನಾಯಕಿ..!

ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಕ್ಕೆ ಕಾಡುಗೊಲ್ಲ ಸಮುದಾಯದಿಂದ ವಿರೋಧ ವ್ಯಕ್ತವಾಗಿದೆ. 'ಕಾಡುಗೊಲ್ಲ ವಿರೋಧಿ' ಎಂದು ಪೋಸ್ಟ್ ಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿರುವ ಸಮುದಾಯ. ಕಾಡುಗೊಲ್ಲ ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ಪಡೆಯದೇ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಕ್ಕೆ ಅಸಮಾಧಾನ. ಕಾಡುಗೊಲ್ಲ ಸಮುದಾಯದ ನಾಯಕರ ಅಸಮಾಧಾನ ನಡುವೆಯೂ ಪಕ್ಷ ಸೇರ್ಪಡೆಯಾಗುತ್ತಿರುವ ಪೂರ್ಣಿಮಾ ಶ್ರೀನಿವಾಸ.

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ‘ಆಪರೇಷನ್‌’ಗೆ ಡಿಕೆಶಿ ಪ್ರಯತ್ನ?

ಬಿಜೆಪಿ ವಿರುದ್ದ ಪದವೀಧರ ಚುನಾವಣೆಗೆ ಬಂಡಾಯ ಸ್ಪರ್ಧೆ ಮಾಡಿದ್ದ ಶ್ರೀನಿವಾಸ್. ನಾನು ಬಿಜೆಪಿಯಲ್ಲಿದ್ದೇನೆ ಎಂದು ಹೇಳುತ್ತಲೇ ಕಾಂಗ್ರೆಸ್ ಸೇರ್ಪಡೆಗೆ ಡಿಕೆ ಶಿವಕುಮಾರ ಅವರೊಂದಿಗೆ ಮಾತುಕತೆ ನಡೆಸಿದ್ದ ಮಾಜಿ ಶಾಸಕಿ. ಕಳೆದ ತಿಂಗಳು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಪೂರ್ಣಿಮಾ ಶ್ರೀನಿವಾಸ ಮನೆಗೆ ತೆರಳಿದ್ದ ಡಿಕೆ ಶಿವಕುಮಾರ. ಹಬ್ಬದ ಊಟ ಸವಿದು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮಾತುಕತೆ ನಡೆಸಿದ್ದರು. ಕಾಂಗ್ರೆಸ್ ಆಪರೇಷನ್ ಹಸ್ತ ಮಾಡಲ್ಲ ಎಂದು ಹೇಳುತ್ತಲೇ ಆಪರೇಷನ್ ಶುರು ಮಾಡಿದ್ದ ಡಿಕೆಶಿ. ಇತ್ತ ಶಾಸಕಿ ಸಹ ನಾನು ಬಿಜೆಪಿ ಬಿಡುವ ಬಗ್ಗೆ ಯೋಚನೆಯೇ ಮಾಡಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆಗೆ ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. 

click me!