
ಬೆಂಗಳೂರು (ಜು.11): ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟರ್‌ನಲ್ಲಿ, 'ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ' ಎಂದು ಟ್ವೀಟ್ ಮಾಡಿದ್ದಾರೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್‌ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಅವರಿಗೆ ಸೂಚಿಸಿದ್ದಾರೆ.
‘ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ’ ಎಂಬುದಾಗಿ ಕುಮಾರಸ್ವಾಮಿಯವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ಕಳೆದ ಒಂದು ವಾರದಿಂದ 'ಜನತಾ ಮಿತ್ರ' ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಿದ್ದರು. ಬೆಂಗಳೂರಿನ ವಿವಿಧ ಬಾಗಗಳಲ್ಲಿ ಜನತಾ ಮಿತ್ರ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ನೂರಾರು ಜನ ಭಾಗಿಯಾಗಿದ್ದರು. ಇದೀಗ ಈ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಸಂಪರ್ಕಕ್ಕೆ ಬಂದಿದ್ದವರೆಲ್ಲರಿಗೂ ಕೋವಿಡ್ ಭೀತಿ ಎದುರಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ