Latest Videos

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಗೆ ಪುತ್ರಿ ವಿಯೋಗ; ಅನಾರೋಗ್ಯದಿಂದ ಹಂಸ ಮೊಯ್ಲಿ ವಿಧಿವಶ

By Sathish Kumar KHFirst Published Jun 30, 2024, 5:08 PM IST
Highlights

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ  ವಿಧಿವಶರಾಗಿದ್ದಾರೆ.

ಬೆಂಗಳೂರು (ಜೂ.30): ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ (Veerappa Moily daughter ) ಹಂಸ ಮೊಯ್ಲಿ (Hamsa Moily) ವಿಧಿವಶರಾಗಿದ್ದಾರೆ. ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ರಿ ಹಂಸ ಮೊಯ್ಲಿ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ರಾಜಕೀಯ ಕಾರ್ಯದ ನಿಮಿತ್ತು ಛತ್ತೀಸ್‌ಘಡ ಪ್ರವಾಸಲ್ಲಿದ್ದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ರಾತ್ರಿಯೇ ಅಲ್ಲಿಂದ ವಾಪಾಸ್ ಆಗಿದ್ದಾರೆ.

ಇನ್ನು ಮೃತ ಹಂಸ ಮೊಯ್ಲಿ (46) ಭರತನಾಟ್ಯ ಕಲಾವಿದೆ ಆಗಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿದ್ದರು. ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳಿನ 'ಶೃಂಗಾರಂ'  ಸಿನಿಮಾದಲ್ಲಿಯೂ ನಟಿಸಿದ್ದರು. ಈ ಮೂಲಕ ಕೇವಲ ನೃತ್ಯಗಾರ್ತಿ ಮಾತ್ರವಲ್ಲದೇ ಚಲನಚಿತ್ರ ನಟಿ ಆಗಿಯೂ ಗುರುತಿಸಿಕೊಂಡಿದ್ದರು. ಆದರೆ, ಕನ್ನಡ ಚಿತ್ರೋದ್ಯಮಕ್ಕೆ ಇವರು ಕಾಲಿಟ್ಟಿಲ್ಲ. ಭರತ ನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ನಟ ದರ್ಶನ್ ವಿರುದ್ಧವೇ ಹೇಳಿಕೆ ನೀಡಿದ ನಟಿ ಪವಿತ್ರಾಗೌಡ

ಹಂಸ ಮೊಯ್ಲಿ ಅವರಿಗೆ ಅನಾರೋಗ್ಯದ ನಿಮಿತ್ತ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರೂ ಬದಲಾದ ಹವಾಗುಣದಿಂದ ಏಕಾಏಕಿ ಆರೋಗ್ಯದಲ್ಲಿ ದಿಢೀರನೇ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಮನೆಯವರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಕಲಾವಿದೆ ಆಗಿದ್ದು, ಹಲವು ಸಮಾಜ ಸೇವಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದರು. ಆದರೆ, ರಾಜಕೀಯ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರಲಿಲ್ಲ. ರಾಜಕೀಯದ ಹೊರತಾಗಿ ತಮ್ಮದೇ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಾ ಜನಾನುರಾಗಿ ಎಂದು ಗುರುತಿಸಿಕೊಂಡಿದ್ದರು.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ನಾಳೆ ಕರವೇ ಪ್ರತಿಭಟನೆ; ಈ ಸಿನಿ ತಾರೆಯರೂ ಸಾಥ್

ಹಂಸ ಮೊಯ್ಲಿ ಅವರು ಮಕ್ಕಳಿಗಾಗಿ ಹಿಂದಿ ನಾಟಕ ಕ್ಯುನ್ ಕ್ಯುನ್ ಲಡ್ಕಿ ಬರೆದಿದ್ದರು. ಇವರು ಅದೇ ಹೆಸರಿನ ಮಹಾಶ್ವೇತಾ ದೇವಿಯವರ ಪುಸ್ತಕದಿಂದ ಸ್ಫೂರ್ತಿ ಪಡೆದಿದ್ದಾರೆ, ಜೊತೆಗೆ ರವೀಂದ್ರನಾಥ ಟ್ಯಾಗೋರ್ ಅವರು ಬರೆದ ಮಕ್ಕಳಿಗಾಗಿ ಇಂಗ್ಲಿಷ್ ನಾಟಕವನ್ನು ನೃತ್ಯ ಸಂಯೋಜನೆ ಮಾಡಿದ್ದಾರೆ. ಮುಖ್ಯವಾಗಿ ಹಂಸ ಮೊಯ್ಲಿ ಅವರು ತಮ್ಮನ್ನು ತಾವು ಅನ್ವೇಷಕ ಮತ್ತು ಯೋಗದ ಅಭ್ಯಾಸಿ ಎಂದು ಹೇಳಿಕೊಂಡಿದ್ದರು. ಈಗ ತಮ್ಮ ಎಲ್ಲ ಕಾರ್ಯಗಳಿಗೆ ಇತಿಶ್ರೀ ಹಾಡಿದ್ದಾರೆ.

click me!