ಕಾವೇರಿ ಕಿಚ್ಚು: ಇಂಡಿಯಾ ಮೈತ್ರಿಕೂಟದ ಹಿತ ಕಾಪಾಡಲು ರಾಜ್ಯದ ರೈತರ ಹಿತ ಬಲಿ, ಬೊಮ್ಮಾಯಿ

By Kannadaprabha News  |  First Published Sep 27, 2023, 5:11 AM IST

ಬೆಂಗಳೂರು ಬಂದ್ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ಯಶಸ್ವಿಯಾಗಿದೆ. ಜನರ ಆಕ್ರೋಶ ಕಟ್ಟೆ ಒಡೆದಿದೆ. ಇಷ್ಟೆಲ್ಲ ಆದರೂ ಸರ್ಕಾರ ಎಚ್ಚೆತ್ತುಕೊಂಡತೆ ಕಾಣಿಸುತ್ತಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 


ಬೆಂಗಳೂರು(ಸೆ.27): ಇಂಡಿಯಾ ಮೈತ್ರಿಕೂಟದ ಡಿಎಂಕೆ ಹಿತ ಕಾಯಲು ರಾಜ್ಯ ಸರ್ಕಾರ ರಾಜ್ಯದ ಹಿತ ಬಲಿಕೊಡುತ್ತಿದ್ದು, ಕಾವೇರಿ ಸಮಸ್ಯೆ ಪರಿಹಾರಕ್ಕೆ ಮಾತುಕತೆಗೆ ತಮಿಳುನಾಡಿನ ಸರ್ಕಾರದ ಮನವೊಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಂದ್ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ಯಶಸ್ವಿಯಾಗಿದೆ. ಜನರ ಆಕ್ರೋಶ ಕಟ್ಟೆ ಒಡೆದಿದೆ. ಇಷ್ಟೆಲ್ಲ ಆದರೂ ಸರ್ಕಾರ ಎಚ್ಚೆತ್ತುಕೊಂಡತೆ ಕಾಣಿಸುತ್ತಿಲ್ಲ ಎಂದರು.

Tap to resize

Latest Videos

ಕಾವೇರಿ ನೀರು ಹರಿಸಲು ತಮಿಳುನಾಡು ರೈತರ ಪ್ರತಿಭಟನೆ, ಸಿಎಂ ಸಿದ್ದು ಭಾವಚಿತ್ರಕ್ಕೆ ಎಡೆ ಇಟ್ಟು ಪ್ರೊಟೆಸ್ಟ್!

ರಾಜ್ಯದಲ್ಲಿ ಹಲವಾರು ಬಾರಿ ಪ್ರತಿಭಟನೆಗಳು ನಡೆದಿವೆ. ನಾವು ಸರ್ಕಾರದಲ್ಲಿ ಇದ್ದಾಗ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿರಲಿಲ್ಲ. ಮುಖ್ಯಮಂತ್ರಿಗಳು ಪ್ರತಿಭಟನೆ ಹತ್ತಿಕ್ಕುವುದಿಲ್ಲ ಎಂದಿದ್ದರು. ಆದರೆ, ಎಲ್ಲ ಕಡೆ ಪ್ರತಿಭಟನಾಕಾರರನ್ನು ಬೆಳಿಗ್ಗೆಯಿಂದಲೇ ಬಂಧಿಸುವ ಕೆಲಸ ಮಾಡಿದ್ದಾರೆ. ಇದರ ನಡುವೆ ಹೋರಾಟಗಾರರೂ ಯಶಸ್ವಿಯಾಗಿ ಬಂದ್ ಮಾಡಿದ್ದಾರೆ ಎಂದು ಹೇಳಿದರು.

ಕೊವಿಡ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನವರು ರಾಜಕಾರಣಕ್ಕಾಗಿ ಮೆಕೆದಾಟು ಪಾದಯಾತ್ರೆ ಮಾಡಿದ್ದರು, ಆಗ ನಾವು ನಿಮಗೆ ಸಮಾವೇಶ ಮಾಡಲು ಅವಕಾಶ ಕೊಟ್ಟಿದ್ದೆವು . ಈಗ ಹೊರಾಟಗಾರರು ಫ್ರೀಡಂ ಪಾರ್ಕ್ ವರೆಗೂ ಜಾಥಾ ನಡೆಸಲು ಬಿಡುತ್ತಿಲ್ಲ. ಸರ್ಕಾರ ಪೊಲೀಸರ ಮೂಲಕ ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

click me!