Latest Videos

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಜಾರಿ; ಪೋಕ್ಸೋ ಕೇಸ್‌ನಲ್ಲಿ ಬಂಧನ ಸಾಧ್ಯತೆ

By Sathish Kumar KHFirst Published Jun 13, 2024, 4:41 PM IST
Highlights

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೋಕ್ಸೋ ಕ್ಸೇಸ್‌ನಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್‌ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಬೆಂಗಳೂರು (ಜೂ.13): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೋಕ್ಸೋ ಕ್ಸೇಸ್‌ನಲ್ಲಿ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ, ವಿಚಾರಣೆಗೆ ಬರದೇ ಕಾಲಾವಕಾಶ ಕೋರಿದ್ದ ಜೊತೆಗೆ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿ ತಿರಸ್ಕರಿಸಿದ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಇದರಿಂದ ಯಡಿಯೂರಪ್ಪ ಬಂಧನವಾಗುವ ಸಾಧ್ಯತೆಯಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಅತ್ಯಾಚಾರ ಸಂತ್ರಸ್ತ ಅಪ್ರಾಪ್ತ ಬಾಲಕಿ ಮತ್ತು ಆಕೆಯ ಸಂಬಂಧಿಕರು ಸಹಾಯ ಕಾನೂನಾತ್ಮಕ ನೆರವು ಕೇಳಲು ಹೋಗಿದ್ದರು. ಈ ವೇಳೆ ಬಾಲಕಿಯೊಬ್ಬಳನ್ನೇ ಕೋಣೆಯೊಳಗೆ ಕರೆದುಕೊಂಡು ಹೋಗಿ ಮಾಹಿತಿ ಪಡೆಯುವುದಾಗಿ ಹೇಳಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್‌ ತಿಂಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ವಹಿಸಲಾಗಿತ್ತು. ಆದರೆ, ಪ್ರಕರಣ ವಿಚಾರಣೆಗೆ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಎರಡು ಬಾರಿ ನೊಟೀಸ್ ನೀಡಿದರೂ ಹಾಜರಾಗದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಯಡಿಯೂರಪ್ಪ ಬಂಧನಕ್ಕೆ ಅವಕಾಶ ನಿಡಬೇಕು ಎಂದು ಕೋರ್ಟ್ ಮೊರೆ ಹೋಗಿದ್ದರು. 

ಪೋಕ್ಸೋ ಪ್ರಕರಣ, ಸಿಐಡಿ ಅಧಿಕಾರಿಗಳಿಂದ ಯಡಿಯೂರಪ್ಪಗೆ ನೋಟಿಸ್

ಆದರೆ, ಮಾಜಿ ಸಿಎಂ ಯಡಿಯೂರಪ್ಪ ಅವರು ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲಿಯೇ ಕೇಂದ್ರ ಸರ್ಕಾರದ ರಚನೆ, ರಾಜ್ಯದ ಲೋಕಸಭಾ ಸಂಸದರಿಗೆ ಸಚಿವ ಸ್ಥಾನ ಹಂಚಿಕೆ ಹಾಗೂ ಇತರೆ ಜವಾಬ್ದಾರಿಗಳ ಹಂಚಿಕೆ ಸೇರಿದಂತೆ ರಾಜಕೀಯ ಸಭೆಗಳನ್ನು ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿಯ ಪೋಕ್ಸೋ ಕೇಸಿನ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಇದರಿಂದ ಕೇಸಿನ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲ ಕಾಲಾವಕಾಶವನ್ನು ಕೋರಿದ್ದರು. ಆದರೆ, ಇದಕ್ಕೆ ಒಪ್ಪದ ಸಿಐಡಿ ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದರು. 

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಮುಲಾಜಿಲ್ಲದೇ ನಟ ದರ್ಶನ್ ಅರೆಸ್ಟ್ ಮಾಡಿದ್ದ ತನಿಖಾಧಿಕಾರಿ ಟ್ರಾನ್ಸ್‌ಫರ್

ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗದೇ ಕಾಲಾವಕಾಶ ಕೇಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಂದುವರೆದು ಬಂಧನ ಸಾಧ್ಯತೆಯಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಫಾಸ್ಟ್ ಟ್ರ್ಯಾಕ್ ಕೋರ್ಟ್‌ ಮುಂದೆ ಸಿಐಡಿ ಪರ ವಕೀಲರು ಸಮರ್ಪಕ ವಾದ ಮಾಡಿ ಯಡಿಯೂರಪ್ಪ ಬಂಧನಕ್ಕೆ ಅವಕಾಶ ಕೊಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯದ ಮುಂದೆ ಸಿಐಡಿ ಪರ ವಕೀಲರು, ಈಗಾಗಲೇ ಪೋಕ್ಸೋ ಕೇಸಿನಲ್ಲಿ ಶೇ.90 ತನಿಖೆ ಮುಗಿದಿದ್ದು, ಯಡಿಯೂರಪ್ಪ ಅವರ ವಿಚಾರಣೆ ಮಾತ್ರ ಬಾಕಿ ಉಳಿದಿದ್ದು, ಅವರಿಗೆ ನೋಟೀಸ್ ನೀಡಿದರೂ ಹಾಜರಾಗುತ್ತಿಲ್ಲ. ಹೀಗಾಗಿ, ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡುವಂತೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ 1ನೇ ಫಾಸ್ಟ್ ಟ್ರಾಕ್ ಕೋರ್ಟ್ ನ್ಯಾಯಾಧೀಶರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

click me!