ರಾಮಮಂದಿರ ನಿರ್ಮಾಣ ನಮ್ಮೆಲ್ಲರ ಸಂತೋಷದ ಘಳಿಗೆ: ಹೆಚ್.ಡಿ.ಕುಮಾರಸ್ವಾಮಿ

By Suvarna NewsFirst Published Aug 5, 2020, 1:41 PM IST
Highlights

ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ, ಭಾರತದ ಹೆಗ್ಗುರುತಾಗಲಿ| ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ: ಹೆಚ್.ಡಿ.ಕುಮಾರಸ್ವಾಮಿ| 
 

ಬೆಂಗಳೂರು(ಆ.05): ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಬುಧವಾರ) ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಸುಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಬರೆದುಕೊಂಡಿರುವ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು ಹೇಳಿಕೊಂಡಿದ್ದಾರೆ.

 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
1/4

— H D Kumaraswamy (@hd_kumaraswamy)

ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ ಎಂದು ಹೇಳಿದ್ದಾರೆ.

 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
1/4

— H D Kumaraswamy (@hd_kumaraswamy)

ರಾಮಲಲ್ಲಾನಿಗೆ ದೀರ್ಘದಂಡ ನಮಸ್ಕಾರ, ರಾಮ ಮಂದಿರಕ್ಕೆ ಮೋದಿ ಶಿಲಾನ್ಯಾಸ!

ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ ಎಂದು ಆಶಿಸಿದ್ದಾರೆ. 


 

ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.
3/4

— H D Kumaraswamy (@hd_kumaraswamy)

 

click me!