ಮಂಗಳವಾರ ಮಧ್ಯಾಹ್ನ ಚೆನ್ನೈಗೆ ತೆರಳಿದ ಕುಮಾರಸ್ವಾಮಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದು, ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಕೆಲವು ಪರೀಕ್ಷೆಗಳನ್ನು ನಡೆಸಿದ್ದಾರೆ. ಗುರುವಾರ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದ್ದು, ಬಳಿಕ ಮೂರ್ನಾಲ್ಕು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. 25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಬೆಂಗಳೂರು(ಮಾ.20): ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಚೆನ್ನೈಯಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ಚೆನ್ನೈಗೆ ತೆರಳಿದ ಕುಮಾರಸ್ವಾಮಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದು, ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಕೆಲವು ಪರೀಕ್ಷೆಗಳನ್ನು ನಡೆಸಿದ್ದಾರೆ. ಗುರುವಾರ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದ್ದು, ಬಳಿಕ ಮೂರ್ನಾಲ್ಕು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. 25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಜೊತೆ ಯಾವುದೇ ಅಸಮಾಧಾನ ಇಲ್ಲ: ಎಚ್‌ಡಿ ಕುಮಾರಸ್ವಾಮಿ
ಸರ್ಜರಿ ಏಕೆ?:
ಶಸ್ತ್ರಚಿಕಿತ್ಸೆ ಕುರಿತು ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಹೃದಯ ಸಂಬಂಧಿ ಸಮಸ್ಯೆ ನನಗೆ ಹುಟ್ಟಿದ್ದಾಗಿನಿಂದಲೂ ಇದೆ. ಈ ಹಿನ್ನೆಲೆಯಲ್ಲಿ ಎರಡೂ ಬಾರಿ ಟಿಶ್ಯೂ ವಾಲ್ವ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎರಡು ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಇಂದು ಟಿಶ್ಯೂ ವಾಲ್ವ್, ಮತ್ತೊಂದು ಮೆಟಾಲಿಕ್ ವಾಲ್ವ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದರು.
ಮೆಟಾಲಿಕ್ ವಾಲ್ವ್ ಹಾಕಿದ್ದರೆ 20-25 ವರ್ಷ ಸಮಸ್ಯೆ ಇರುತ್ತಿರಲಿಲ್ಲ. ಆದರೆ, ನನ್ನ ರಾಜಕೀಯ ಜೀವನದಲ್ಲಿ ಬಿಡುವಿಲ್ಲದ ಜೀವನ ಶೈಲಿಯಿಂದಾಗಿ ಟಿಶ್ಯೂ ವಾಲ್ವ್ ಹಾಕಿದ್ದರು. ಈ ಜೀವನಶೈಲಿಯ ಒತ್ತಡದಿಂದಾಗಿ 6 ವರ್ಷಕ್ಕೆ ಹಾಳಾಗಿದೆ. ಈ ಬಾರಿ ಅಡ್ವಾನ್ಸ್ಡ್ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಅಮೆರಿಕದಿಂದ ವೈದ್ಯರೊಬ್ಬರು ಬಂದು ಚಿಕಿತ್ಸೆ ನೀಡಲಿದ್ದಾರೆ ಎಂದರು.
ಅವರ ಬಾವ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಬುಧವಾರ ಚೆನ್ನೈಗೆ ತೆರಳಲಿದ್ದು, ಕುಮಾರಸ್ವಾಮಿ ಆರೋಗ್ಯದ ಮೇಲೆ ನಿಗಾ ವಹಿಸಲಿದ್ದಾರೆ.