* ಮೊದಲಿನಿಂದಲೂ ಇದ್ದ ರಷ್ಯಾ- ಉಕ್ರೇನ್ ನಡುವೆ ಯುದ್ಧದ ಭೀತಿ
* ಯಾವುದೇ ಮಾಹಿತಿ ಇಲ್ಲದೆ ದೆಹಲಿಯಲ್ಲಿ ಮೋದಿ ಮತ್ತು ಪುಟಿನ್ ಭೇಟಿ
* ಯೋಜನೆಗಳು ಜಾರಿಯಾಗುವ ವಿಶ್ವಾಸ ಇಲ್ಲ
ರಾಮನಗರ(ಮಾ.04): ಪ್ರಧಾನಿ ಮೋದಿ(Narendra Modi) ಮತ್ತು ರಷ್ಯಾ ಅಧ್ಯಕ್ಷ ಪುಟಿನ್(Vladimir Putin) ಭೇಟಿ ವಿಚಾರವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಷ್ಯಾ- ಉಕ್ರೇನ್(Russia-Ukraine War) ನಡುವೆ ಯುದ್ಧ ಭೀತಿ ಮೊದಲಿನಿಂದಲೂ ಇತ್ತು. ಅದನ್ನು ದೇಶದ ಜನರಿಗೆ ನೆನಪಿಸಿಕೊಡುತ್ತೇನೆ. ಯಾವುದೇ ಮಾಹಿತಿ ಇಲ್ಲದೆ ದೆಹಲಿಯಲ್ಲಿ ಮೋದಿ ಮತ್ತು ಪುಟಿನ್ ತಡರಾತ್ರಿ 3 ಗಂಟೆಗೆ ಭೇಟಿ ಮಾಡಿದ್ದರು. ಇದರ ಉದ್ದೇಶ ಏನೆಂದು ಪ್ರಶ್ನಿಸಿದರು.
'ವಿಶ್ವಗುರು ಆಗಬೇಕೆಂದು ಹಾತೊರೆಯುವ ಭಾರತದ ಆತ್ಮ ಸಾಕ್ಷಿಗೆ ನವೀನ್ ಸಾವು ಪ್ರಶ್ನೆ'
ಯೋಜನೆಗಳು ಜಾರಿಯಾಗುವ ವಿಶ್ವಾಸ ಇಲ್ಲ
ಮುಂದಿನ ಒಂದು ವರ್ಷ ಚುನಾವಣಾ ವರ್ಷ ಆಗಿರುವುದರಿಂದ ಬಜೆಟ್‌ನಲ್ಲಿ ಘೋಷಣೆ ಮಾಡುವ ಯೋಜನೆಗಳು ಜಾರಿಯಾಗುವ ಬಗ್ಗೆ ವಿಶ್ವಾಸ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಅವರು, ನೀರಾವರಿ ಕ್ಷೇತ್ರದ ವಿಚಾರವಾಗಿ ಪಕ್ಕದ ರಾಜ್ಯಕ್ಕೆ ನೋಡಿದರೆ ನಾವು ತುಂಬಾ ಹಿಂದೆ ಇದ್ದೇವೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ರಾಜ್ಯದಲ್ಲಿ ಹಲವು ಯೋಜನೆಗೆ ಅನುಮತಿ ಕೊಡುತ್ತಾರೆ. ಆದರೆ ನಮ್ಮ ರಾಜ್ಯಕ್ಕೆ ಮಾತ್ರ ಕೇಂದ್ರ ಸರ್ಕಾರ ಸಹಕರಿಸಲ್ಲ ಎಂದು ಕಿಡಿಕಾರಿದರು.
ನವೀನ್ ಸಾವಿನ ಬೆನ್ನಲ್ಲೇ ನೀಟ್ ವಿರುದ್ಧ ಸಮರ ಸಾರಿದ ಕುಮಾರಸ್ವಾಮಿ
ನವೀನ್ ಶೇ. 97 ಅಂಕ ಗಳಿಸಿದ್ದರೂ (Merit Student) ನೀಟ್ ಪರೀಕ್ಷೆಯಲ್ಲಿ (NEET) ಉತ್ತಮ ಅಂಕ ಗಳಿಸಲು ವಿಫಲರಾಗಿ ಉಕ್ರೇನ್‌ಗೆ ಹೋಗಿ ಸಾವನ್ನಪ್ಪಿದ್ದಾರೆ. ಇದರಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಮಟ್ಟದ ನೀಟ್ ಪ್ರವೇಶ ಪರೀಕ್ಷೆ ಬಗ್ಗೆ ಅಸಮಾಧಾನ ಭುಗಿಲೆದ್ದಿದೆ.
ಉಕ್ರೇನ್‌ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಸಾವಿನ ಬಳಿಕ ನೀಟ್ (Neet) ವಿರುದ್ಧ ಮಾಜಿ ಮುಖ್ಯಂತ್ರಿ ಎಚ್. ಡಿ. ಕುಮಾರಸ್ವಾಮಿ(HD Kumaraswamy) ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 2023ರಲ್ಲಿ ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ ಎಂದಿದ್ದಾರೆ.
ಕುಮಾರಸ್ವಾಮಿ ಸರಣಿ ಟ್ವೀಟ್
ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್ ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
Mekedatu Politics: ನಾನು ಚಿಕ್ಕವನು ಕುಮಾರಸ್ವಾಮಿಗೆ ಹೊಡೆಯಲು ಆಗುತ್ತಾ? ಹೆಚ್ಡಿಕೆ ಬಗ್ಗೆ ಡಿಕೆಶಿ ವ್ಯಂಗ್ಯ
ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಇಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆ ಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ ಆದರೂ, ಉನ್ನತ ಶಿಕ್ಷಣ ಸಚಿವ ಮಾನ್ಯ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು ನಾಲಿಗೆ ಜಾರಿ, ತಮ್ಮ ಉನ್ನತ ಗುಣವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ..
ಕೇಂದ್ರದ ಒಬ್ಬ ಸಚಿವರು, ನೀಟ್ ಪರೀಕ್ಷೆ ಪಾಸ್ ಮಾಡಲಾಗದ ವಿಧ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಾರೆ ಎಂದು ಆ ಮಕ್ಕಳ ಸ್ವಾಭಿಮಾನವನ್ನು ಅಪಮಾನಿಸಿದ್ದರೆ, ಉನ್ನತ ಶಿಕ್ಷಣ ಸಚಿವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದ್ರೋಹದ ಹಣೆಪಟ್ಟಿ ಕಟ್ಟಿ ದೊಡ್ಡತನ ಮೆರೆದಿದ್ದಾರೆ ಅಶ್ವತ್ಥ್ ನಾರಾಯಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.