ಟೇಲರ್‌ ಶಿರಚ್ಛೇದ ಮಾಡಿದವರಿಗೆ ಕಠಿಣ ಶಿಕ್ಷೆ: ಎಚ್‌ಡಿಕೆ ಆಗ್ರಹ

By Kannadaprabha News  |  First Published Jun 30, 2022, 4:15 AM IST

*  ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪೈಶಾಚಿಕ ಕೃತ್ಯ
*  ಯಾವ ಧರ್ಮವೂ ಹಿಂಸೆ ಒಪ್ಪಲ್ಲ
*  ರಕ್ಕಸರಷ್ಟೇ ಇಂತಹ ಕೃತ್ಯ ಎಸಗಲು ಸಾಧ್ಯ: ಎಚ್‌ಡಿಕೆ


ಬೆಂಗಳೂರು(ಜೂ.30): ರಾಜಸ್ಥಾನದಲ್ಲಿ ಟೇಲರ್‌ ಶಿರಚ್ಛೇದ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಇದು ಅತ್ಯಂತ ಹೇಯ ಕೃತ್ಯ. ಕೊಲೆಪಾತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು, ಕೊಲೆಯಾದ ಕನ್ಹಯ್ಯ ಲಾಲ್‌ ಕುಟುಂಬದ ಜತೆ ನಾವೆಲ್ಲರೂ ನಿಲ್ಲಬೇಕಿದೆ. ಶಿರಚ್ಛೇದ ಮಾಡಿರುವ ಘಟನೆಯು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೈಶಾಚಿಕ ಕೃತ್ಯ. ಹಿಂಸೆ ಯಾವುದಕ್ಕೂ ಉತ್ತರವಲ್ಲ, ಪರಿಹಾರವೂ ಅಲ್ಲ. ಯಾವ ಧರ್ಮವೂ ಹಿಂಸೆಯನ್ನು ಒಪ್ಪುವುದೂ ಇಲ್ಲ ಎಂದು ಹೇಳಿದ್ದಾರೆ.

Tap to resize

Latest Videos

ಆರ್‌ಎಸ್‌ಎಸ್‌, ಎಚ್‌ಡಿಕೆಗೆ ನನ್ನ ಕಂಡ್ರೆ ಭಯ: ಸಿದ್ದರಾಮಯ್ಯ

‘ಕನ್ಹಯ್ಯಾಲಾಲ್‌ ಅವರ ಕಿರಾತಕ ಹತ್ಯೆಯನ್ನು ಪಕ್ಷಾತೀತವಾಗಿ ಖಂಡಿಸಲೇಬೇಕು. ಆ ಪಾತಕಿಗಳಿಗೆ ಕಠಿಣಾತಿಕಠಿಣ ಶಿಕ್ಷೆ ವಿಧಿಸಬೇಕು. ಮತ್ತೊಮ್ಮೆ ಇಂತಹ ಘಟನೆಗಳು ಮರುಕಳಿಸಲೇಬಾರದು. ರಕ್ಕಸರಷ್ಟೇ ಇಂತಹ ಕೃತ್ಯ ಎಸಗಲು ಸಾಧ್ಯ. ಕಾನೂನು ಕಾಯ್ದೆ ಎನ್ನುವುದಕ್ಕಿಂತ ಮನಃಪರಿವರ್ತನೆಯಿಂದಲೇ ಇಂತಹ ಸ್ಥಿತಿಯಿಂದ ಎಲ್ಲರೂ ಹೊರಬೇಕಿದೆ. ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ. ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಸುತ್ತದೆ. ದರ್ಪ ಹೆಚ್ಚಿದಷ್ಟೂಧರ್ಮಗಳೂ ಅಳಿಯುತ್ತವೆ. ಕನ್ಹಯ್ಯಾ ಕೊಲೆ ಇಂತಹ ದರ್ಪವನ್ನು ನಾಮಾವೇಷ ಮಾಡಲಿ’ ಎಂದು ತಿಳಿಸಿದ್ದಾರೆ.
‘ಕನ್ಹಯ್ಯಾ ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಸಲಿ. ಕನ್ಹಯ್ಯಾ ಅವರ ಸಾವು ಕೊಂದು ವಿಜೃಂಭಿಸುವ ಕಿರಾತಕ ಮನಃಸ್ಥಿತಿಯನ್ನು ಬದಲಿಸಲಿ’ ಎಂದಿದ್ದಾರೆ.

ರಕ್ಕಸರಷ್ಟೇ ಇಂತಹ ಕೃತ್ಯ ಎಸಗಲು ಸಾಧ್ಯ: ಎಚ್‌ಡಿಕೆ

ಕನ್ಹಯ್ಯಾಲಾಲ್‌ ಅವರ ಕಿರಾತಕ ಹತ್ಯೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಪಾತಕಿಗಳಿಗೆ ಕಠಿಣಾತಿಕಠಿಣ ಶಿಕ್ಷೆ ವಿಧಿಸಬೇಕು. ರಕ್ಕಸರಷ್ಟೇ ಇಂತಹ ಕೃತ್ಯ ಎಸಗಲು ಸಾಧ್ಯ. ಕಾನೂನು ಕಾಯ್ದೆ ಎನ್ನುವುದಕ್ಕಿಂತ ಮನಃಪರಿವರ್ತನೆಯಿಂದಲೇ ಇಂತಹ ಸ್ಥಿತಿಯಿಂದ ಎಲ್ಲರೂ ಹೊರಬೇಕಿದೆ. ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ ಅಂತ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 
 

click me!