ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು: ಕೇಂದ್ರದ ವಿರುದ್ಧ HDK ಕೆಂಡಾಮಂಡಲ

By Kannadaprabha NewsFirst Published Jan 29, 2022, 12:47 PM IST
Highlights

*  ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ
*  ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೊರಟಿರುವುದು ಕೊಡಲಿ ಪೆಟ್ಟು ನೀಡುವ ಕೆಲಸ 
*  ಅಧಿ​ಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುತ್ತಿರುವುದು ಹೀನ ಕೆಲಸ
 

ಬೆಂಗಳೂರು(ಜ.29):  ಕನ್ನಡದ(Kannada) ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು(Karnataka) ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನು ಕೇಂದ್ರ ಸರ್ಕಾರ(Central Government) ಮಾಡುತ್ತಿದೆ ಎನ್ನುವುದಕ್ಕೆ ಇನ್ನೊಂದು ಸಾಕ್ಷಿ ಇಲ್ಲಿದೆ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್‌(Tweet) ಮಾಡಿರುವ ಅವರು ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ 101.3 ಎಫ್‌ಎಂ ರೇನ್‌ಬೋ ಕನ್ನಡ(FM Rainbow Kannada) ಕಾಮನಬಿಲ್ಲು ರೇಡಿಯೋ(Radio) ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೊರಟಿರುವುದು ಅಕ್ಷಮ್ಯ ಮತ್ತು ಕನ್ನಡಕ್ಕೆ ಕೊಡಲಿ ಪೆಟ್ಟು ನೀಡುವ ಕೆಲಸ. ರೇನ್‌ಬೋ ಕನ್ನಡ ಕಾಮನಬಿಲ್ಲು ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ(Kannadigas) ಹೃದಯ ಬಡಿತ. ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ. ಅಧಿ​ಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ. 

Karnataka Politics ಸಿದ್ದರಾಮಯ್ಯ ಭೇಟಿ ಮಾಡಿದ ಮಂಡ್ಯ ಜೆಡಿಎಸ್ ಶಾಸಕ, ಎಚ್‌ಡಿಕೆ ಪ್ರತಿಕ್ರಿಯಿಸಿದ್ದು ಹೀಗೆ

ಈ ಹಿಂದೆ ಕನ್ನಡಿಗರ ಮನೆ ಮನದಲ್ಲಿ ತುಂಬಿದ್ದ ‘ಅಮೃತವರ್ಷಿಣಿ’ಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ​ ಕೇಂದ್ರ ಸರ್ಕಾರ, ಕನ್ನಡದ್ರೋಹಿ ಅ​ಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ . ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಗುಡುಗಿದ್ದಾರೆ.

ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿ​ಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆಯಾದ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡ ನಾಡನ್ನು ಉದ್ಧಾರ ಮಾಡುತ್ತೇವೆ ಎಂದು ಗೆದ್ದು ಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯ ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ. ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ(Mother Tongue) ಕೊಳ್ಳಿ ಇಡುತ್ತಿರುವ ‘ಭಾಷಾಂತಕ’ರನ್ನು ನೋಡುತ್ತಾ ಸುಮ್ಮನೆ ಕೂರಲಾರರು ನೆನಪಿರಲಿ.

ಕಾಂಗ್ರೆಸ್‌ ಬಿಡುವೆ ಎಂದ ಇಬ್ರಾಹಿಂ ಜತೆ ಎಚ್‌ಡಿಕೆ ಚರ್ಚೆ

ಬೆಂಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಶುಕ್ರವಾರ ಸಂಜೆ ಇಬ್ರಾಹಿಂ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಇಬ್ರಾಹಿಂ ಅವರು ಇನ್ನೂ ತೀರ್ಮಾನ ತೆಗೆದುಕೊಳ್ಳಬೇಕಿದೆ. ಏನೂ ಒತ್ತಡ ಹಾಕಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಹಿಂದಿನ ಕೆಲವು ಘಟನೆಗಳನ್ನು ಇಬ್ರಾಹಿಂ ಮೆಲುಕು ಹಾಕಿದ್ದಾರೆ. ನೋವಿನಿಂದ ಹಿಂದಿನ ಘಟನೆಗಳನ್ನು ಹೇಳಿಕೊಂಡಿದ್ದಾರೆ ಎಂದರು.

Karnataka Politics ಎಚ್‌ಡಿಕೆ ಸರಿಯಾಗಿ ನಡೆಸಿಕೊಂಡಿದ್ರೆ ಯಾರು ಹೋಗ್ತಿರಲಿಲ್ಲ, ಜೆಡಿಎಸ್ ರೆಬೆಲ್ ಶಾಸಕ ಸಿಡಿಮಿಡಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜಕೀಯಕ್ಕೆ ಬರುವ ಮುಂಚಿನಿಂದಲೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಇಬ್ರಾಹಿಂ ಅವರಿಗೆ ನಂಟು ಇದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಜನ ತಿರಸ್ಕಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಯಾವಾಗ ತೀರ್ಮಾನ ಮಾಡಿದರೂ ತುಂಬು ಹೃದಯದ ಸ್ವಾಗತ. ತೀರ್ಮಾನ ತೆಗೆದುಕೊಳ್ಳಲು ಸೂಕ್ತ ಸಮಯ ಹತ್ತಿರದಲ್ಲಿದೆ. ಸಿದ್ದರಾಮಯ್ಯ ಹೋರಾಟ ಮಾಡಿ ಇಬ್ರಾಹಿಂಗೆ ಸೂಕ್ತ ಸ್ಥಾನಮಾನ ಕೊಡಿಸಬಹುದಿತ್ತು. ಆದರೆ ತಾವು ಬೆಳೆದರೇ ಹೊರತು ನಂಬಿಸಿ ಕಾಂಗ್ರೆಸ್‌ ಪಕ್ಷಕ್ಕೆ ಕರೆದುಕೊಂಡು ಹೋದವರನ್ನು ಬೆಳೆಸಲಿಲ್ಲ. ಇದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪುಟ್ಟರಾಜು ಹಾಗೂ ಸಿದ್ಧರಾಮಯ್ಯ ಭೇಟಿಗೆ ವಿಶೇಷ ಅರ್ಥ ಏನಿಲ್ಲ. ಅದಕ್ಕೆ ಬೇರೆ ಅರ್ಥ ಕಲಿಸುವುದು ಬೇಡ. 2023ಕ್ಕೆ ಜೆಡಿಎಸ್‌ ಸರ್ಕಾರ ಬರುತ್ತದೆ ಎಂದು ಇಬ್ರಾಹಿಂ ಅವರು ಸ್ಪಷ್ಟಮಾತುಗಳಲ್ಲಿ ಹೇಳಿದ್ದಾರೆ. ನಮ್ಮ ಪಕ್ಷ ತಪ್ಪದೇ ಅ​ಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
 

click me!