
ಬೆಂಗಳೂರು(ಅ.20): 'ಒಂದೇ ದೇಶ, ಒಂದೇ ಭಾಷೆ’(One Nation, One Language) ಎನ್ನುವ ಕರಾಳ ನೀತಿಯ ಮೂಲಕ ಹಿಂದಿ(Hindi) ಹೇರಿಕೆ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರವು ಈಗ ನಮ್ಮ ನಾಡಿನ ಗ್ರಾಮೀಣ, ಜಾನಪದ, ಸಾಂಸ್ಕೃತಿಕ ಸೊಗಡಿನ ದನಿಯಾಗಿರುವ ಆಕಾಶವಾಣಿ(Akashvani) ಮತ್ತು ದೂರದರ್ಶನದ(Doordarshan) ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಹಾಕುವ ಹೇಯ ಕೃತ್ಯಕ್ಕೆ ಕೈಹಾಕಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ.
ಮಂಗಳವಾರ ಈ ಸಂಬಂಧ ಟ್ವೀಟ್(Tweet) ಮಾಡಿರುವ ಅವರು, ವಿವಿಧತೆಯಲ್ಲಿ ಏಕತೆಯನ್ನು ಮೈದುಂಬಿಕೊಂಡು ಜಗತ್ತಿಗೆ ಬಹುತ್ವದ ಆದರ್ಶ ಆಗಿರುವ ಭಾರತದ(India) ಪ್ರಾದೇಶಿಕ ವೈವಿಧ್ಯಮಯ ಅನನ್ಯ ಸಾಂಸ್ಕೃತಿಕ(Cultural), ಜಾನಪದ(Folk) ಸಂಪತ್ತಿಗೆ ಕೇಂದ್ರ ಸರ್ಕಾರ(Central Government) ಕೊಳ್ಳಿ ಇಡಲು ಹೊರಟಿದೆ. ಈಗಾಗಲೇ ದೂರದರ್ಶನ, ಆಕಾಶವಾಣಿಯ ಒಂದೊಂದೇ ಪ್ರಾದೇಶಿಕ ಕಾರ್ಯಕ್ರಮ(Regional Program) ಸ್ಥಗಿತಗೊಳಿಸಿದ ನಂತರ ಪ್ರಾದೇಶಿಕ ಪ್ರಸಾರ ಕೇಂದ್ರಗಳನ್ನೂ ಮುಚ್ಚುವ ಹುನ್ನಾರ ನಡೆಸಿದೆ. ಅಕ್ಟೋಬರ್ 31ರಿಂದ ಕಲಬುರಗಿ ಪ್ರಾದೇಶಿಕ ಕೇಂದ್ರಕ್ಕೂ ಬೀಗ ಹಾಕಲು ಪ್ರಸಾರ ಭಾರತಿ(Prasar Bharati) ಹೊರಟಿದೆ. ಇದು ಕನ್ನಡ(Kannada) ವಿರೋಧಿ ನಡೆ, ಪ್ರಾದೇಶಿಕ ಭಾಷೆಗಳಿಗೆ(Regional Languages) ಚರಮಗೀತೆ ಹಾಡುವ ದಮನ ನೀತಿ ಎಂದು ಟೀಕಿಸಿದ್ದಾರೆ.
ಎಚ್‌ಡಿಕೆ 'ದ್ವಿಪತ್ನಿತ್ವ' ಕೆದಕಿದ ಕಮಲ ಪಾಳಯ: 'ಬೈಗಮಿ' ಅಪರಾಧ ಅಲ್ವಾ ಎಂದು ಕುಟುಕಿದ ಬಿಜೆಪಿ
ದೇಶ ಭಾಷೆಗಳಲ್ಲಿ ಒಂದಾದ ಹಿಂದಿಯನ್ನೇ ಉಳಿಸಿ ಬೆಳೆಸುವ ಹಾಗೂ ಅದನ್ನೇ ಕನ್ನಡಿಗರ(Kannadigas) ಮೇಲೆ ಹೇರುವ ಏಕೈಕ ದುರಾಲೋಚನೆಯಿಂದ ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ(History) ಅಭಿಜಾತ ಭಾಷೆ ಕನ್ನಡವನ್ನು ಕಡೆಗಣಿಸಿ, ಮೂಲೋತ್ಪಾಟನೆ ಮಾಡಲು ಕೇಂದ್ರ ಸರ್ಕಾರ ಈ ಮೂಲಕ ಹೊಂಚು ಹಾಕಿರುವುದು ಗೊತ್ತಾಗುತ್ತದೆ. ಯಾವುದೇ ಕಾರಣಕ್ಕೂ ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಪ್ರಸಾರ ಆಗುತ್ತಿರುವ ಪ್ರಾದೇಶಿಕ ಕಾರ್ಯಕ್ರಮಗಳು ನಿಲ್ಲಬಾರದು. ಕಲಬುರಗಿ(Kalaburagi) ಸೇರಿ ಯಾವುದೇ ಭಾಗದಲ್ಲಿರುವ ಪ್ರಾದೇಶಿಕ ಪ್ರಸಾರ ಕೇಂದ್ರಗಳನ್ನು ಮುಚ್ಚಬಾರದು ಎಂಬುದು ನನ್ನ ಒತ್ತಾಯವಾಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ