ಹೃದಯ ಶಸ್ತ್ರಚಿಕಿತ್ಸೆಗಾಗಿ ಇಂದು ಕುಮಾರಸ್ವಾಮಿ ಚೆನ್ನೈಗೆ

Published : Mar 19, 2024, 05:58 AM IST
ಹೃದಯ ಶಸ್ತ್ರಚಿಕಿತ್ಸೆಗಾಗಿ ಇಂದು ಕುಮಾರಸ್ವಾಮಿ ಚೆನ್ನೈಗೆ

ಸಾರಾಂಶ

25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ಬೆಂಗಳೂರಿಗೆ ಬಂದ ಬಳಿಕ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆರೋಗ್ಯದ ದೃಷ್ಟಿ ಯಿಂದ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆಯಾದರೂ ಶಸ್ತ್ರಚಿಕಿತ್ಸೆ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. 

ಬೆಂಗಳೂರು(ಮಾ.19): ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಲಿದ್ದಾರೆ.

ಇದೇ 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮಂಗಳವಾರ ಚೆನ್ನೈಗೆ ತೆರಳಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಮಂಗಳವಾರ ಆರೋಗ್ಯ ತಪಾಸಣೆ ನಡೆಸಲಾಗುವುದು. ಕೆಲವು ಪರೀಕ್ಷೆ ನಡೆಸಿದ ಬಳಿಕ 21ರಂದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಇದೇ 24ರವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.

ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ: ಅಮಿತ್‌ ಶಾ, ಕುಮಾರಸ್ವಾಮಿ ಚರ್ಚೆ

25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ಬೆಂಗಳೂರಿಗೆ ಬಂದ ಬಳಿಕ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆರೋಗ್ಯದ ದೃಷ್ಟಿ ಯಿಂದ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆಯಾದರೂ ಶಸ್ತ್ರಚಿಕಿತ್ಸೆ ಬಳಿಕವೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ