'ಡಿಕೆಶಿ ಮನೆ ಮೇಲೆ ಮೋದಿ ಸರ್ಕಾರದ ದಾಳಿ ರಾಜಕೀಯ ದುಷ್ಟತನದ ಪರಮಾವಧಿ'

By Suvarna NewsFirst Published Oct 5, 2020, 10:53 AM IST
Highlights

ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ| ಡಿಕೆಶಿ ನಿವಾಸದ ಮೇಲಿನ ದಾಳಿ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ಆಕ್ರೋಶ| ಡಿಕೆಶಿ ಮನೆ ಎದುರು ಅಭಿಮಾನಿಗಳ ದಂಡು

ಬೆಂಗಳೂರು(ಅ.05): ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸಗಳ ಮೇಲೆ ಸೋಮವಾರ ಬೆಳ್ಳಂ ಬೆಳಗ್ಗೆ ಸಿಬಿಐ ದಾಳಿ ನಡೆಸಿದೆ. ಕಾಮಗ್ರೆಸ್ ಪಕ್ಷ, ಕಾರ್ಯಕರ್ತರು ಹಾಗೂ ಬೆಂಬಲಿಗರು ಖಂಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಈ ದಾಳಿಯನ್ನು ಖಂಡಿಸಿದ್ದು, ಇದು ರಾಜಕೀಯ ದುಷ್ಟತನದ ಪರಮಾವಧಿ ಎಂದು ಕಿಡಿ ಕಾರಿದ್ದಾರೆ.

"

ಸಿಬಿಐ ದಾಳಿ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ 'ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ  ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ' ಎಂದು ಗುಡುಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಮನೆ ಮೇಲೆ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.

ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.

— Siddaramaiah (@siddaramaiah)

ಇನ್ನು ಡಿಕೆಶಿ ನಿವಾಸದ ಮೇಲೆ ದಾಳಿಯಾಗಿರುವ ಸುದ್ದಿ ಸಿಕ್ಕ ಬೆನ್ನಲ್ಲೇ ಅವರ ಮನೆ ಎದುರು ಅಭಿಮಾನಿಗಳು ದೌಡಾಯಿಸಿದ್ದಾರೆ.

ಡಿಕೆಶಿ ಬೆಂಗಳೂರು ನಿವಾಸದ ಮೇಲೆ ಮಾತ್ರವಲ್ಲದೇ ದೆಹಲಿ, ಮುಂಬೈ ಸೇರಿ 14 ಕಡೆ ದಾಳಿ ನಡೆಸಲಾಗಿದೆ. 

click me!