ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ| ರಾಜ್ಯದ ಮುಖ್ಯಕಾರ್ಯದರ್ಶಿ, ಮತ್ತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನ ಕರೆಸಿ ಚರ್ಚೆ ನಡೆಸಿದ್ದೇನೆ| ಆಕ್ಸಿಜನ್ ಕೊರತೆಯಿಂದ ಹೆಚ್ಚು ಕೊರೊನ ಸೊಂಕಿತರು ಸಾವನ್ನಪ್ಪಿದ್ದಾರೆ| ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 28 ಜನರು ಆಕ್ಸಿಜನ್ ಕೊರತೆಯಿಂದ ಸಾವಿಗಿಡಾಗಿದ್ದಾರೆ
ಬೆಂಗಳೂರು(ಮೇ.05): ಕೊರೋನಾ ಅಬ್ಬರದ ನಡುವೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಚಾಮರಾಜನಗರ ದುರಂತ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿದೆ. ಸರ್ಕಾರ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿರುವ ಈ ದುರಂತ ಪ್ರಕರಣ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಮುಖ್ಯಕಾರ್ಯದರ್ಶಿ, ಮತ್ತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೊತೆ ಚರ್ಚೆ ನಡೆಸಿದ್ದಾರೆ.
'ಮೋದಿ ಎದುರು ಬಿಎಸ್‌ವೈ ಭಿಕ್ಷುಕರಂತೆ ಬೇಡುತ್ತಿದ್ದಾರೆ, ಸಂಸದರು ಯಾವ ಬಿಲ ಸೇರಿದ್ದಾರೆ?'
undefined
ಈ ಚರ್ಚೆ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಸಿಜನ್ ಕೊರತೆಯಿಂದ ಹೆಚ್ಚು ಕೊರೊನ ಸೊಂಕಿತರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 28 ಜನರು ಆಕ್ಸಿಜನ್ ಕೊರತೆಯಿಂದ ಸಾವಿಗಿಡಾಗಿದ್ದಾರೆ. ಹೀಗಾಗಿ ಆಕ್ಸಿಜನ್ ಕೊರತೆಯಿಂದ ಕೇವಲ 3 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳ್ತಿರೋದು ಸುಳ್ಳು. ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ಆರೋಗ್ಯ ಅಧಿಕಾರಿಗಳ ಜೊತೆ ಮಾತಾಡಿದ್ದೇನೆ. ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವುದನ್ನ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.
ಇನ್ನು ಆಕ್ಸಿಜನ್ ಕೊರತೆ ಇದ್ದಲ್ಲಿ ಆಕ್ಸಿಜನ್ ಪೂರೈಸಲು ಮುಖ್ಯಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ. ನಿನ್ನೆಯಿಂದಲೇ ಆಕ್ಸಿಜನ್ ಪೂರೈಕೆಗೆ ಕ್ರಮಕೈಗೊಂಡಿರುವುದಾಗಿ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ ಎಂದೂ ಹೇಳಿದ್ದಾರೆ.
ಇನ್ನು ಈ ಪ್ರಕರಣದ ನ್ಯಾಯಾಂಗ ತನಿಖೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಚಾಮರಾಜನಗರ ಪ್ರಕರಣ ವಿಚಾರವಾಗಿ ನ್ಯಾಯಾಂಗ ತನಿಖೆಗೆ ನಾನು ಆಗ್ರಹಿಸಿದ್ದೆ ಹೈಕೋರ್ಟ್ ಕೂಡ ನ್ಯಾಯಾಂಗ ತನಿಖೆ ನಡೆಸಲು ಮುಂದಾಗಿದೆ. ಹೀಗಾಗಿ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪ್ರಕರಣ ವಿಚಾರದಲ್ಲಿ ಸತ್ಯ ಹೊರಬರಬೇಕು.. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಮೈಸೂರು, ಹಾಗು ಚಾಮರಾಜನಗರ ಡಿ.ಸಿಯವರ ಹೇಳಿಕೆಗಳು ವಿಭಿನ್ನವಾಗಿವೆ. ತಪ್ಪಿತಸ್ಥರು ಯಾರು ತಿಳಿಯಬೇಕು,ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona