ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಸ್ವಸ್ಥ: ಆಸ್ಪತ್ರೆಗೆ ದಾಖಲು

By Kannadaprabha News  |  First Published Apr 22, 2024, 4:23 AM IST

ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು.


ಬೆಂಗಳೂರು (ಏ.22): ಅನಾರೋಗ್ಯದ ಹಿನ್ನೆಲೆಯಲ್ಲಿ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ನಗರದ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಲವಲವಿಕೆಯಿಂದ ಇದ್ದಾರೆ. ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಶೀರ್ವಾದ ಪಡೆದ ಎಚ್‌ಡಿಕೆ: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಸದಾಶಿವನಗರದಲ್ಲಿನ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪುಟ್ಟರಾಜು, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Tap to resize

Latest Videos

ಲೋಕಸಭಾ ಚುನಾವಣೆ ಮತ್ತು ರಾಜ್ಯ ರಾಜಕೀಯ ಕುರಿತು ಉಭಯ ಮುಖಂಡರು ಸಮಾಲೋಚನೆ ನಡೆಸಿದರು. ಕೃಷ್ಣ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ ಮುಖ್ಯಮಂತ್ರಿಗಳಾಗಿ, ಕೇಂದ್ರ ಸಚಿವರಾಗಿ ಎಸ್‌.ಎಂ.ಕೃಷ್ಣ ಅವರು ನಾಡಿಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರು ನಮ್ಮ ತಂದೆಯವರ ಸಮಕಾಲೀನರು. ತಂದೆಯವರಿಗಿಂತ ಆರು ತಿಂಗಳು ದೊಡ್ಡವರು. ನಾನು ನಾಮಪತ್ರ ಸಲ್ಲಿಸುವ ಮುನ್ನವೇ ಅವರ ಆಶೀರ್ವಾದ ಪಡೆಯಬೇಕಿತ್ತು. ಇವತ್ತು ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಎಂದರು.

ಎಸ್‌ಎಂಕೆ ಮತ್ತೊಮ್ಮೆ ಸಿಎಂ ಆಗುವುದನ್ನು ತಪ್ಪಿಸಿದ್ದು ಎಚ್‌ಡಿಡಿ: ಸಚಿವ ಚಲುವರಾಯಸ್ವಾಮಿ

ಪ್ರಥಮವಾಗಿ ರಾಜಕೀಯಕ್ಕೆ ಸ್ಪರ್ಧೆ ಮಾಡಿದಾಗ ಕೃಷ್ಣ ಅವರು ಆಶೀರ್ವಾದ ಮಾಡಿದ್ದರು. ಆ ಸಂಗತಿಯನ್ನು ಮಾತುಕತೆಯ ವೇಳೆ ಹಿರಿಯರಾದ ಕೃಷ್ಣ ಅವರೇ ನೆನೆಸಿಕೊಂಡರು. ನನ್ನನ್ನು ಆಶೀರ್ವಾದ ಮಾಡಿ ನಾಡಿನ ಅಭಿವೃದ್ಧಿಗಾಗಿ ಕೆಲಸ ಮಾಡಿ ಎಂದಿದ್ದಾರೆ ಎಂದರು. ಇದೇ ವೇಳೆ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ನವರು ಅಪಪ್ರಚಾರ ನಡೆಸುತ್ತಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ಅವರಿಗೆ ಉತ್ತರ ನೀಡಲು ನಾವು ಸಮರ್ಥನಿದ್ದೇನೆ. ನಾನು ಎಲ್ಲೂ ಕಾಣೆ ಆಗಿಲ್ಲ, ಇಲ್ಲೇ ಇದ್ದೇನೆ. ಈ ರೀತಿ ಅಪಪ್ರಚಾರ ಮಾಡಿ ಚುನಾವಣೆ ಯಶಸ್ವಿಯಾಗಲ್ಲ. ಈ ರೀತಿ ಪರೋಕ್ಷವಾಗಿ ಸೆಣಸುವ ಬದಲು ನೇರವಾಗಿ ಚುನಾವಣೆ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

click me!