ಎಸ್ಎಂಕೆ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

Published : Jun 25, 2022, 12:31 PM ISTUpdated : Jun 25, 2022, 12:40 PM IST
ಎಸ್ಎಂಕೆ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

ಸಾರಾಂಶ

ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಈ ವರ್ಷ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ, ಇನ್ಫೋಸಿಸ್‌ನ ನಾರಾಯಣ ಮೂರ್ತಿ ಹಾಗೂ ದಿಗ್ಗಜ ಬ್ಯಾಡ್ಮಿಂಟನ್‌ ತಾರೆ ಪ್ರಕಾಶ್ ಪಡುಕೋಣೆ ಅವರಿಗೆ ನೀಡಲಾಗುವುದು ಎಂದು ಸಚಿವ ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.  

ಬೆಂಗಳೂರು (ಜೂನ್ 25): ನಾಡಪ್ರಭು ಕೆಂಪೇಗೌಡರ (Kempegowda) ಜನ್ಮದಿನವಾದ ಜೂನ್ 27 ರಂದು ನೀಡಲು ಉದ್ದೇಶಿಸಲಾಗಿರುವ ಅಂತಾರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿಗೆ (
Kempegowda International Award) ಕರ್ನಾಟಕ ಸರ್ಕಾರ ಮೂವರನ್ನು ಆಯ್ಕೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (SM Krishna), ಇನ್ಫೋಸಿಸ್‌ನ ನಾರಾಯಣ್ ಮೂರ್ತಿ (infosys Narayana murthy ) ಹಾಗೂ ಮಾಜಿ ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್ ಪಡುಕೋಣೆ (Badminton Ace Prakash Padukone) ಅವರಿಗೆ ಮೊದಲ ಆವೃತ್ತಿಯ ಪ್ರಶಸ್ತಿ ನೀಡಲಾಗುತ್ತದೆ.

ಕರ್ನಾಟಕ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಾಂತ್ ಪ್ರಕಾಶ ವಿಷನ್ ಗ್ರೂಪ್ ಸ್ಟಾರ್ಟಪ್ ಸಂಸ್ಥೆಯವರನ್ನ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮೋಹನ್ ದಾಸ್ ಪೈ, ಬಾಲಸುಬ್ರಹ್ಮಣ್ಯಂ, ಶಂಕರಲಿಂಗೇಗೌಡರು ಸದಸ್ಯರ ಸಮಿತಿ ಮಾಡಲಾಗಿತ್ತು.

ಮೊದಲ ಆವೃತ್ತಿಯ ಪ್ರಶಸ್ತಿಯನ್ನು ಮೂವರು ಮಂದಿಗೆ ನೀಡುವುದಾಗಿ ಹೇಳಲಾಗಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಇದನ್ನು ಎಸ್ಎಂ ಕಷ್ಣ ಅವರಿಗೆ ತಿಳಿಸುವ ಸಲುವಾಗಿ ಸಚಿವ ಅಶ್ವತ್ಥ ನಾರಾಯಣ್ (CN Ashwath narayan), ಸದಾಶಿವನಗರದಲ್ಲಿರುವ ಮಾಜಿ ಮುಖ್ಯಮಂತ್ರಿಯ ಮನೆಗೆ ಆಗಮಿಸಿದ್ದರು.

ಕೆಂಪೇಗೌಡ ಪ್ರತಿಮೆ ಕೆಲಸ ಉತ್ತಮ ಪ್ರಗತಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಪ್ರತಿಮೆಯ ಕಾಮಗಾರಿ ಉತ್ತಮವಾಗಿ ಸಾಗುತ್ತಿದೆ. ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದಿಂದ ಎಲ್ಲ ರೀತಿಯ ವ್ಯವಸ್ಥೆ ಆಗುತ್ತಿದೆ. ಶೀಘ್ರದಲ್ಲಿಯೇ ಇದರ ಅನಾವರಣವಾಗಲಿದೆ.  ಎಲ್ಲ ನಾಯಕರು, ಮಾಜಿ ಪ್ರಧಾ‌ನಿ ಎಚ್ ಡಿ ದೇವೇಗೌಡ, ಪ್ರತಿಪಕ್ಷ ನಾಯಕರ ಸಹಕಾರ, ಡಿಕೆ ಶಿವಕುಮಾರ್, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ನಾಯಕರ ಸಹಕಾರದಿಂದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡುತ್ತೇವೆ ಎಂದು ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

ಜೂನ್ 27ಕ್ಕೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆ ಅನಾವರಣ

ಆಕ್ಷೇಪಣೆ ಇದ್ದರೆ ಸಲ್ಲಿಸಿ: ಬಿಬಿಎಂಪಿ ವಾರ್ಡ್‌ ವಿಂಗಡಣೆ ಸರಿ ಇಲ್ಲ ಎಂಬ ಆರೋಪದ ಕುರಿತಾಗಿ ಮಾತನಾಡಿದ ಅಶ್ವತ್ಥನಾರಾಯಣ, ವೈಜ್ಞಾನಿಕವಾಗಿ ವಾರ್ಡ್‌ ವಿಂಗಡಣೆ ಮಾಡಲಾಗಿದೆ. ಆಕ್ಷೇಪಣೆ ಇದ್ದರೆ ಸಲ್ಲಿಕೆ ಮಾಡಬಹುದು. ಇದಕ್ಕಾಗಿ 15 ದಿನಗಳ ಕಾಲಾವಕಾಶವೂ ಇದೆ. ಇದಕ್ಕಾಗಿ ಮತ್ತೆ ಕೋರ್ಟ್‌ ಬಾಗಿಲಿಗೆ ಹೋಗುವ ಅಗತ್ಯವಿಲ್ಲ. ಕಾನೂನು ಹೋರಾಟ ಮಾಡುವ ಅಗತ್ಯವಿಲ್ಲ. ಏನೇ ಇದ್ದರೂ ಇಲ್ಲಿಯೇ ಮಾಡಲಿ. ಕಾನೂನಾತ್ಮಕವಾಗಿ ಎಲ್ಲವೂ ಸರಿಪಡಿಸೋಣ ಎಂದು ಹೇಳಿದರು.

ಕೆಂಪೇಗೌಡ ಲೇಔಟ್‌ ಕಾಮಗಾರಿ ಪರಿಶೀಲನೆಗೆ 3ನೇ ಸಂಸ್ಥೆ ನೇಮಕ!

ಹೈಕೋರ್ಟ್‌ ಸೂಚನೆಯ ಮೇರೆಗೆ ಬಿಬಿಎಂಪಿ ವಾರ್ಡ್‌ ಮರುವಿಂಗಡಣೆ ಮಾಡಲಾಗಿದ್ದು, ಕಾಂಗ್ರೆಸ್ ಶಾಸಕರು ಇರೋ ಕಡೆ ಕಡಿಮೆ ಆಗಿದೆ, ಬಿಜೆಪಿ ಇರೋಕಡೆ ಹೆಚ್ಚು ವಾರ್ಡ್ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ಸಚಿವರು ಸ್ಪಷ್ಟನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್