ಕಲಬುರಗಿ ಮಾಜಿ ಸಂಸದ, ಮಲ್ಲಿಕಾರ್ಜುನ ಖರ್ಗೆ ಪರಮಾಪ್ತ ಇಕ್ಬಾಲ್ ಅಹ್ಮದ್ ಸರಡಗಿ ವಿಧಿವಶ

By Kannadaprabha News  |  First Published May 23, 2024, 6:46 AM IST

ಕಲಬುರಗಿ ಜಿಲ್ಲೆಯ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ವಿಧಿವಶವಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾವ 1ಗಂಟೆಗೆ ನಿಧಾನರಾಗಿದ್ದಾರೆ. ಇಂದು ಸಂಜೆ 6 ಗಂಟೆಗೆ ನಗರದಲ್ಲಿ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ.


ಕಲಬುರಗಿ (ಮೇ.23): ಕಲಬುರಗಿ ಜಿಲ್ಲೆಯ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ವಿಧಿವಶವಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾವ 1ಗಂಟೆಗೆ ನಿಧಾನರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ. ಎನ್. ಧರ್ಮಸಿಂಗ್ ಪರಮಾಪ್ತರಾಗಿದ್ದ ಸರಡಗಿ 1999 ಮತ್ತು 2004ರಲ್ಲಿ ಸಂಸದರಾಗಿ, 1 ಬಾರಿ ಎಂಎಲ್‌ಸಿ ಆಗಿ ಸೇವೆ ಸಲ್ಲಿಸಿದ್ದರು. 2009ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಲ್ಲಿಂದ ಆಯ್ಕೆಯಾಗಿ ಸರಡಗಿ ಅವರ ಉತ್ತರಾಧಿಕಾರಿ ಆಗಿದ್ದರು. ಸರಡಗಿ ನಿಧನಕ್ಕೆ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ,ಕೆ ಶಿವಕುಮಾರ್‌ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸರಡಗಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ನಗರದಲ್ಲಿ ಸರಡಗಿ ಅಂತ್ಯಕ್ರಿಯೆ ನಡೆಯಲಿದೆ.

Tap to resize

Latest Videos

undefined

ಕಲಬುರಗಿ: ಕೈಕೊಟ್ಟ ಪ್ರಿಯಕರ, ಡೆತ್‌ ನೋಟ್‌ ಬರೆದಿಟ್ಟು ಯುವತಿ ಆತ್ಮಹತ್ಯೆ

ಕಾಂಗ್ರೆಸ್ ಪಕ್ಷದಿಂದ ಶ್ರದ್ಧಾಂಜಲಿ

ವಯೋ ಸಹಜ ಅನಾರೋಗ್ಯದಿಂದ ನಿಧನರಾದ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಗಲಿದ ನಾಯಕನಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಕಂಬಿನಿ ಮಿಡಿದರು. ಸರಡಗಿ ಅವರ ಸರಳತೆ, ಸಮಾಜ ಮುಖಿ ಕಾರ್ಯ ಮತ್ತು ಸೇವೆಯನ್ನು ಸ್ಮರಿಸಿದರು.

ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮುಖಂಡರಾದ ಬಾಬುರಾವ ಜಾಗಿರದಾರ, ಭಾಗಣ್ಣಗೌಡ ಪಾಟೀಲ ಸಂಕನೂರ, ನಾರಾಯಣರಾವ ಕಾಳೆ, ಜಗನ್ನಾಥ ಗೋಧಿ, ಸುಭಾಷ ರಾಠೋಡ್, ಮಜರ್ ಆಲಂಖಾನ್, ಮಜರ್ ಹುಸೇನ್, ಡಾ.ಕಿರಣ್ ದೇಶಮುಖ, ಮಹಾಂತಪ್ಪ ಸಂಗಾವಿ, ರವಿ ರಾಠೋಡ್, ಲತಾ ರವಿ ರಾಠೋಡ್ ಸೇರಿದಂತೆ ಹಲವಾರು ಜನ ಮುಖಂಡರು, ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

click me!