Breaking News: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್!

Published : Apr 19, 2025, 05:56 AM ISTUpdated : Apr 19, 2025, 04:25 PM IST
Breaking News: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಮಿಡ್ ನೈಟ್ ಫೈರಿಂಗ್!

ಸಾರಾಂಶ

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇಂದು (ಏಪ್ರಿಲ್ 19, 2025) ಮಧ್ಯರಾತ್ರಿ 1:30ರ ಸುಮಾರಿಗೆ ಮಾಜಿ ಡಾನ್ ಮುತ್ತಪ್ಪ ರೈ  ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡೆದಿದ್ದು, ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಮೂರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಘಟನೆಯ ವಿವರ:

ಬೆಂಗಳೂರು (ಏ.19): ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇಂದು (ಏಪ್ರಿಲ್ 19, 2025) ಮಧ್ಯರಾತ್ರಿ 1:30ರ ಸುಮಾರಿಗೆ ಮಾಜಿ ಡಾನ್ ಮುತ್ತಪ್ಪ ರೈ  ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡೆದಿದ್ದು, ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಮೂರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ.

ಘಟನೆಯ ವಿವರ:
ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 

ಇದನ್ನೂ ಓದಿ: ಮುತ್ತಪ್ಪ ರೈ 2ನೇ ಹೆಂಡತಿ ಅನುರಾಧ ರೈಗೆ 100 ಕೋಟಿ ಆಸ್ತಿ ಕೊಟ್ಟ ಮಕ್ಕಳು!

ಪೊಲೀಸ್ ತನಿಖೆ:
ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.

ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್:

ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ ಮೂರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಗುಂಡಿನ ದಾಳಿಯ ವೇಳೆ ತಕ್ಷಣ ಮುಂದೆ ಬಗ್ಗಿದ್ದರಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ. 

ಇದನ್ನೂ ಓದಿ: ಮುತ್ತಪ್ಪ ರೈ ಸ್ಕೆಚ್.. ಜೈರಾಜ್‌ಗೆ ಮಚ್ಚು ಬೀಸಿದ ಚಕ್ರೆ!

ಘಟನೆಯು ಮನೆಯ ಮುಂಭಾಗದ ಮುಖ್ಯ ರಸ್ತೆಗೆ ಕಾರು ಪ್ರವೇಶಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ನಡೆದಿದೆ. ಎರಡು ದಿನಗಳ ಹಿಂದಷ್ಟೇ ರಷ್ಯಾದಿಂದ ವಾಪಸಾಗಿದ್ದ ರಿಕ್ಕಿ ರೈ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ಚಾಲಕ ರಾಜು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಿಡದಿ ಇನ್ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಸದ್ಯ, ಘಟನಾ ಸ್ಥಳದಲ್ಲಿ ಸೀನ್ ಆಫ್ ಕ್ರೈಂ ಆಫೀಸರ್ಸ್ (SOCO) ಮತ್ತು FSL ತಂಡವು ಪರಿಶೀಲನೆ ನಡೆಸುತ್ತಿದೆ. ರಿಕ್ಕಿ ರೈ ಅವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ