
ಯಾದಗಿರಿ (ಜ.28): ಜೆಡಿಎಸ್‌ನ ಮಾಜಿ ಶಾಸಕ ನಾಗನಗೌಡ ಕಂದಕೂರು(79) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ಕುಸಿದಿದ್ದ ನಾಗನಗೌಡರನ್ನು ಕಂಡು ಕುಟುಂಬಸ್ಥರು ಕೂಡಲೇ ಯಾದಗಿರಿ ನಗರದ ಶರಣಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
ಗುರುಮಠಕಲ್ ನ ಜೆಡಿಎಸ್ ಹಾಲಿ ಶಾಸಕ ಶರಣಗೌಡ ಕಂದಕೂರ್ ಅವರ ತಂದೆಯಾಗಿರುವ ನಾಗನಗೌಡ. 2018 ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಗುರುಮಠಕಲ್ ನಿಂದ ಸ್ಪರ್ಧಿಸಿ ಗೆದ್ದು ಮೊದಲ ಬಾರಿ ಶಾಸಕರಾಗಿದ್ದರು. ಒಳ್ಳೆಯ ವ್ಯಕ್ತಿತ್ವ, ಪ್ರಾಮಾಣಿಕತೆಗೆ ಹೆಸರಾಗಿದ್ದರು.
ಮಾಜಿ ಶಾಸಕ ನಾಗನಗೌಡ ಕಂದಕೂರು ವಿಧಿವಶರಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಚೆನ್ನಾರೆಡ್ಡಿ ತುನ್ನೂರು ಆಸ್ಪತ್ರೆಗೆ ಧಾವಿಸಿದರು. ಆಸ್ಪತ್ರೆ ಬಳಿ ಜಮಾಯಿಸಿರುವ ಕಂದಕೂರು ಸಂಬಂಧಿಕರು ಹಾಗೂ ಜೆಡಿಎಸ್ ಕಾರ್ಯಕರ್ತರು.
ಸುಂದರ ನಟ ಸುನಿಲ್ ದುರ್ಮರಣ; ಅಪಘಾತಕ್ಕೆ ಯಾರು ಕಾರಣ, ಕಾಣದ ಕೈ ಕೆಲಸ ಮಾಡಿದ್ಯಾ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ