ಪ್ರಜ್ವಲಿಸಲು ಸಹಕರಿಸಿದವರಿಗೆ ಶಿಕ್ಷೆಯಿಲ್ಲವೇ? ಯುವರ್ ಆನರ್, ಪ್ರಕಾಶ್ ರೈ ಪ್ರಶ್ನೆ

Published : Aug 02, 2025, 07:01 PM IST
Prakash Rai

ಸಾರಾಂಶ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅಪರಾಧಿಗೆ ಶಿಕ್ಷೆಯಾದರೂ, ಅಪರಾಧ ಮುಚ್ಚಿಟ್ಟವರಿಗೆ ಶಿಕ್ಷೆಯಾಗದಿರುವುದನ್ನು ಪ್ರಶ್ನಿಸಿ ನಟ ಪ್ರಕಾಶ್ ರೈ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. 

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಬರೆದುಕೊಂಡಿರುವ ಪ್ರಕಾಶ್ ರೈ, ಪ್ರಜ್ವಲಿಸಲು ಸಹಕರಿಸಿದವರಿಗೆ ಶಿಕ್ಷೆಯಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಕಾಶ್ ರೈ ಪ್ರತಿಕ್ರಿಯೆ ಏನು?

“ಪ್ರಜ್ವಲಿಸಲು ಸಹಕರಿಸಿದವರಿಗೆ ಶಿಕ್ಷೆಯಿಲ್ಲವೇ?” ಯುವರ್ ಆನರ್, ಪ್ರಜ್ವಲ್ ಮಾಡಿದ ಅಮಾನುಷ ಅಪರಾಧಗಳಿಗೇನೋ ತಕ್ಕ ಶಿಕ್ಷೆ ಆಗಿದೆ. ಆದರೆ ಆ ಅಪರಾಧಗಳನ್ನು ಗೊತ್ತಿದ್ದೂ ಮುಚ್ಚಿಟ್ಟ ಸಂತ್ರಸ್ತರನ್ನು ಹೆದರಿಸಿದ ಸಾಕ್ಷಿ ನಾಶ ಮಾಡಲು ಸಹಕರಿಸಿದ. ಹಾಲಿ, ಮಾಜಿಗಳಿಗೆ.. ಪ್ರಭಾವಿಗಳಿಗೆ ಶಿಕ್ಷೆಯಿಲ್ಲವೇ ಎಂದು ಪ್ರಕಾಶ್ ರೈ ಕೇಳಿದ್ದಾರೆ.

 

 

ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ ಶಿಕ್ಷೆ, ಒಟ್ಟು 11.5 ಲಕ್ಷ ದಂಡ ಜೊತೆಗೆ ಒಟ್ಟು ವಿಧಿಸಲಾದ ದಂಡದ ಮೊತ್ತದಲ್ಲಿ ₹11,25,000 ಅನ್ನು ಪೀಡಿತೆಗೆ ಪರಿಹಾರವಾಗಿ ನೀಡಲು ಕೋರ್ಟ್ ಆದೇಶ ಹೊರಬಿದ್ದಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!