Pavagada Venkataramanappa passes away: ಬೆಳ್ಳಬೆಳಗ್ಗೆ ಪಾವಗಡ ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ

Published : May 29, 2026, 07:44 AM IST
Former Karnataka Minister Venkataramanappa Passes Away After Heart Attack in Bengaluru Hospital

ಸಾರಾಂಶ

ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರ ಅಗಲಿಕೆಯಿಂದ, ಅವರ ಪುತ್ರ ಹಾಗೂ ಹಾಲಿ ಶಾಸಕ ಎಚ್‌.ವಿ ವೆಂಕಟೇಶ್‌ ಅವರಿಗೆ ಪಿತೃ ವಿಯೋಗ 

ತುಮಕೂರು (ಮೇ.29): ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ (Fortis Hospital) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಹೃದಯಾಘಾತ(Heart attack)ದಿಂದ ಕೊನೆಯುಸಿರೆಳೆದಿದ್ದಾರೆ.

ನಾಲ್ಕು ಬಾರಿ ಶಾಸಕ, ಎರಡು ಬಾರಿ ಸಚಿವ; ಪಾವಗಡ ರಾಜಕೀಯದ ಪ್ರಭಾವಿ ನಾಯಕ

ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಎರಡು ಬಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಹಾಗೂ ಜನಪರ ರಾಜಕಾರಣದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಅವರು, ತುಮಕೂರು ಜಿಲ್ಲೆ ರಾಜಕೀಯದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದರು. ಅವರ ಅಗಲಿಕೆಯಿಂದ ಪಾವಗಡ ಜನರಿಗೆ ಆಘಾತವುಂಟು ಮಾಡಿದೆ.

ಶಾಸಕ ಎಚ್‌.ವಿ ವೆಂಕಟೇಶ್‌ಗೆ ಪಿತೃ ವಿಯೋಗ

ಮಾಜಿ ಸಚಿವರ ನಿಧನದಿಂದ ಪಾವಗಡ ಶಾಸಕ ಎಚ್‌.ವಿ ವೆಂಕಟೇಶ್ ಅವರಿಗೆ ಪಿತೃ ವಿಯೋಗ ಉಂಟಾಗಿದೆ. ರಾಜಕೀಯ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೆಂಕಟರಮಣಪ್ಪ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ. ಹಲವು ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೊಬ್ಬ ಹಿರಿಯ ನಾಯಕರನ್ನು ಕಳೆದುಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ ಕರ್ನಾಟಕಕ್ಕೆ ಎಚ್ಚರಿಕೆ ಕೊಟ್ಟ ಐಎಂಡಿ!
'ಇದು ಬೊಂಬೆಯಾಟವಯ್ಯ..' ನಿಜವಾಯ್ತು ಬೊಂಬೆ ಭವಿಷ್ಯ! ಸಿಎಂ ಕುರ್ಚಿ ಬದಲಾವಣೆಗೆ ಮುಂಚೆಯೇ ನುಡಿ!