ವಾಲ್ಮೀಕಿ ನಿಗಮದಿಂದ 20 ಕೋಟಿ ಎಲೆಕ್ಷನ್‌ಗೆ ಬಳಸಿದ್ದ ನಾಗೇಂದ್ರ?

By Kannadaprabha News  |  First Published Jul 14, 2024, 8:04 AM IST

ನಾಗೇಂದ್ರ ಅವರನ್ನು ಬಂಧಿಸಿದ ಬಳಿಕ ಹೆಚ್ಚಿನ ತನಿಖೆ ಸಲುವಾಗಿ ವಶಕ್ಕೆ ಪಡೆಯಲು ನಗರದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಗರಣದ ಹಣ ವೆಚ್ಚವಾಗಿರುವ ಬಗ್ಗೆ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಂಬಂಧ ರಿಮ್ಯಾಂಡ್ ಆಫ್ರಿಕೇಷನ್ ಎನ್ನಲಾದ ಕೆಲ ಪುಟಗಳು ಕೂಡ ಬಹಿರಂಗವಾಗಿದೆ.


ಬೆಂಗಳೂರು(ಜು.14):  ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಆಕ್ರಮ ಹಣ ವರ್ಗಾವಣೆ ಮೂಲಕ ವಡೆದಿದ್ದರು ಎನ್ನಲಾದ 20.19 ಕೋಟಿ ರು. ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ ವ್ಯಯಿಸಿದ್ದರು ಎಂದು ನ್ಯಾಯಾಲಯಕ್ಕೆ ನಿರ್ದೇಶನಾಲಯ (ಇ.ಡಿ.) ಮಾಹಿತಿ ನೀಡಿದೆ ಎಂದು ತಿಳಿದು ಬಂದಿದೆ. 

ನಾಗೇಂದ್ರ ಅವರನ್ನು ಬಂಧಿಸಿದ ಬಳಿಕ ಹೆಚ್ಚಿನ ತನಿಖೆ ಸಲುವಾಗಿ ವಶಕ್ಕೆ ಪಡೆಯಲು ನಗರದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಗರಣದ ಹಣ ವೆಚ್ಚವಾಗಿರುವ ಬಗ್ಗೆ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಂಬಂಧ ರಿಮ್ಯಾಂಡ್ ಆಫ್ರಿಕೇಷನ್ ಎನ್ನಲಾದ ಕೆಲ ಪುಟಗಳು ಕೂಡ ಬಹಿರಂಗವಾಗಿದೆ.

Tap to resize

Latest Videos

ಬಳ್ಳಾರಿ ಬಂಟನ ಭ್ರಷ್ಟ ಚರಿತ್ರೆ ನೋಡಿಯೂ ತಪ್ಪು ಮಾಡಿದ್ರಾ ಸಿದ್ದು..?'ನಾಗ'ಕೋಟೆಯಲ್ಲೇ ಬಂಧಿಯಾದ ನಾಗೇಂದ್ರ..!

ಹೇಗೆ ವಂಚನೆ?:

ಇದೇ ವರ್ಷದ ಮಾರ್ಚ್ 4ರಂದು 21ರಂದು 44 ಕೋಟಿ ರು., 22ರಂದು 33 ಕೋಟಿ ರು. ಹಾಗೂ ಮೇ 21ರಂದು 50 ಕೋಟಿ ರು. ಸೇರಿ ದಂತ ಒಟ್ಟು 187.33 ಕೋಟಿ ರು. ಹಣವು ವಾಲ್ಮೀಕಿ ನಿಗಮದ ಬ್ಯಾಂಕ್‌ ಖಾತೆಗಳಿಗೆ ರಾಜ್ಯ ಖಜಾನೆ-2ರಿಂದ ಜಮೆಯಾಗಿತ್ತು.  ಈ ಹಣದ ಪೈಕಿ 94.73 ಕೋಟಿ ರು. ಹಣವುಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್ ಖಾತೆಯಿಂದ ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್‌ ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ರವಾನೆಯಾಗಿತ್ತು. ಆದರೆ ಅಕ್ರಮ ಸದ್ದು ಮಾಡಿದ ಕೂಡಲೇ 5 ಕೋಟಿ ರು. ಮರಳಿ ನಿಗಮದ ಖಾತೆಗೆ ಬಂದಿತ್ತು. ಇನ್ನುಳಿದ 89.73 ಕೋಟಿ ರು. ಹಣವನ್ನು ಹೈದರಾಬಾದ್ ಗ್ಯಾಂಗ್ ದೋಚಿತ್ತು ಎಂಬ ಆರೋಪ ಬಂದಿದೆ.

ಫಸ್ಟ್‌ ಫೈನಾನ್ಸ್ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸತ್ಯನಾರಾಯಣ್ ಹಾಗೂ ಅಕ್ರಮ ಹಣ ವರ್ಗಾವಣೆ ದಂಧೆಕೋರ ಸತ್ಯನಾರಾಯಣ್ ವರ್ಮಾ ಗ್ಯಾಂಗ್‌ ಜತೆ ನಾಗೇಂದ್ರ ಪರವಾಗಿ ಅವರ ಆಪ್ತ ನೆಕ್ಕುಂಟಿ ನಾಗರಾಜ್ ವ್ಯವಹರಿಸಿದ್ದ. ನಾಗೇಂದ್ರ ಸೂಚನೆ ಮೇರೆಗೆ ನಿಗಮದ ಮಾಜಿ ಎಂಡಿ ಪದ್ಮನಾಭ್ ಸೇರಿ ಅಧಿಕಾ -ರಿಗಳು ಹಣ ವರ್ಗಾವಣೆಗೆ ಸಹಕರಿಸಿ ದ್ದರು. ಈ ಹಣದಲ್ಲಿ 20.19 ಕೋಟಿ ರು. ಅನ್ನು ತಾವು ಉಸ್ತುವಾರಿ ವಹಿಸಿದ್ದ -ಬಳ್ಳಾರಿ ಲೋಕಸಭಾ ಚುನಾವಣೆಗೆ ಅವರು ವ್ಯಯಿಸಿದ್ದರು ಎಂದು ಆರೋಪಿಸಲಾಗಿದೆ.

ಕಾರಿನಲ್ಲೇ ಸಭೆ ನಡೆಸಿದ್ದ ನಾಗೇಂದ್ರ:

ವಸಂತನಗರ ಶಾಖೆಯಿಂದ ಎಂ.ಜಿ ರಸ್ತೆಯ ಯೂನಿಯನ್ ಬ್ಯಾಂಕ್ ಶಾಖೆಯ ಖಾತೆಗೆ ನಿಗಮದ ಹಣ ವರ್ಗಾವಣೆಗೆ ನಾಗೇಂದ್ರ ಅವರೇ ಮುತುವರ್ಜಿ ವಹಿಸಿದ್ದರು. ಈ ಹಣ ವರ್ಗಾವಣೆ ವಿಚಾರವಾಗಿ ಶಾಂಫ್ರೀಲಾ ಹೋಟೆಲ್‌ಗೆ ನಿಗಮದ ಮಾಜಿ ಎಂಡಿ ಪದ್ಮನಾಭ್ ಅವರನ್ನು ಕರೆಸಿ ತಮ್ಮ ಆಪ್ತ ನೆಕ್ಕುಂಟಿ ನಾಗರಾಜ್ ಜತೆ ಅವರು ಸಭೆ ನಡೆಸಿದ್ದರು. ಹೀಗಾಗಿ ಹಣ ವರ್ಗಾವಣೆ ಜಾಲದ ಪ್ರಮುಖ ಸೂತ್ರಧಾರರೇ ನಾಗೇಂದ್ರ ಎಂದು ಇ.ಡಿ. ಹೇಳಿದೆ ಎನ್ನಲಾಗಿದೆ.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ನಾಗೇಂದ್ರ ಬಂಧನ ಬಳಿಕ ಬಸನಗೌಡ ದದ್ದಲ್ ನಾಪತ್ತೆ!

ಶಿವಮೊಗ್ಗದಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಈ ಬೆಳವಣಿಗೆ ಬಳಿಕ ಆತಂಕಗೊಂಡ ನಾಗೇಂದ್ರ, ಮೇ 29 ರಂದು ಎಂಡಿ ಪದ್ಮನಾಭ್ ಹಾಗೂ ನೆಕ್ಕುಂಟಿ ನಾಗರಾಜ್‌ ಅವರನ್ನು ಬೆಂಗ ಳೂರಿನಲ್ಲಿ ತಮ್ಮ ಕಾರಿನಲ್ಲೇ ಕೂರಿಸಿ ಕೊಂಡು ಸುದೀರ್ಘವಾಗಿ ಮಾತುಕತೆ ನಡೆಸಿದ್ದರು. ಆಗ ಯಾವುದೇ ಕಾರಣಕ್ಕೂ ಪ್ರಕರಣದಲ್ಲಿ ನನ್ನ ಹೆಸರು ನೀವು ಹೇಳಬಾರದು. ನಾನು ಅಧಿಕಾರದಲ್ಲಿದ್ದರೆ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ತಾಕೀತು ಮಾಡಿದರು ಎನ್ನಲಾಗಿದೆ.. 

ಯಾವುದೇ ಕಾರಣಕ್ಕೂ ನನ್ನ ಹೆಸರು ಹೇಳಬೇಡಿ ಎಂದಿದ್ದ ನಾಗೇಂದ್ರ!

ಹಗರಣ ಬೆಳಕಿಗೆ ಬಂದ ಮೇಲೆ ನಾಗೇಂದ್ರ, ಮೇ 29ರಂದು ನಿಗಮದ ಎಂ.ಡಿ. ಪದ್ಮನಾಭ್ ಹಾಗೂ ತಮ್ಮ ಆಪ್ತ ನಕ್ಕುಂಟಿ ನಾಗರಾಜ್ ಜೊತೆ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಪ್ರಕರಣದಲ್ಲಿ ನೀವು ನನ್ನ ಹೆಸರು ಹೇಳಬಾರದು. ನಾನು ಅಧಿಕಾರದಲ್ಲಿದ್ದರೆ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ ಎಂದಿದ್ದರು ಎಂದು ರಿಮ್ಯಾಂಡ್ ವರದಿಯಲ್ಲಿದೆ ಎನ್ನಲಾಗಿದೆ.

click me!