* ಅನಾರೋಗ್ಯದಿಂದ ಬಳಲುತ್ತಿರುವ ಉದಾಸಿ
* ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ ಮತ್ತು ಬೊಮ್ಮಾಯಿ
* . ವೈದ್ಯರ ಜತೆಯೂ ಸಮಾಲೋಚನೆ ನಡೆಸಿದ ಸಿಎಂ ಬಿಎಸ್‌ವೈ
ಬೆಂಗಳೂರು(ಮೇ.28): ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ನಗರದ ಹೊಸೂರು ರಸ್ತೆಯಲ್ಲಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ದಾಖಲಾಗಿದ್ದಾರೆ.
ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 77 ವರ್ಷದ ಉದಾಸಿ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.
ಕೊರೋನಾ ಸಂಕಷ್ಟಕ್ಕೆ ಸರ್ಕಾರಗಳೇ ಕಾರಣ: ಶ್ರೀನಿವಾಸ ಮಾನೆ
ಗುರುವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದಾರೆ. ವೈದ್ಯರ ಜತೆಯೂ ಸಮಾಲೋಚನೆ ನಡೆಸಿದರು. ಚಿಕಿತ್ಸೆಗೆ ಹೇಗೆ ಸ್ಪಂದಿಸುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.