Dr J Alexander Passes Away: ನಿವೃತ್ತ ಐಎಎಸ್‌ ಅಧಿಕಾರಿ ಅಲೆಗ್ಸಾಂಡರ್‌ ನಿಧನ: ಸಿಎಂ ಬೊಮ್ಮಾಯಿ ಸಂತಾಪ

By Kannadaprabha NewsFirst Published Jan 15, 2022, 6:27 AM IST
Highlights

*  ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ಕೆಲಸ ಮಾಡಿದ ಏಕೈಕ ಅಧಿಕಾರಿ
*  ರಾಜಕಾರಣ ಪ್ರವೇಶಿಸಿ ಕಾಂಗ್ರೆಸ್ಸಿನಿಂದ ಶಾಸಕರಾಗಿದ್ದ ಅಲೆಗ್ಸಾಂಡರ್‌
*  ಎಸ್‌.ಎಂ.ಕೃಷ್ಣ ಸರ್ಕಾರದಲ್ಲಿ ಪ್ರವಾಸೋದ್ಯಮ ಸಚಿವರಾಗಿಯೂ ಸೇವೆ

ಬೆಂಗಳೂರು(ಜ.15):  ಮಾಜಿ ಸಚಿವ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಜೆ. ಅಲೆಗ್ಸಾಂಡರ್‌ (83)(Dr J Alexander) ಶುಕ್ರವಾರ ಬೆಂಗಳೂರಿನಲ್ಲಿ (Bengaluru) ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಅಲೆಕ್ಸಾಂಡರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಕೊನೆಯುಸಿರೆಳೆದರು. ಮೃತರು ಇಬ್ಬರು ಮಕ್ಕಳು ಹಾಗೂ ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ(Funeral) ಇಂದು(ಶನಿವಾರ) ಬೆಂಗಳೂರಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂಲತಃ ಕೇರಳದವರಾದ(Kerala) ಅಲೆಗ್ಸಾಂಡರ್‌ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ(Chief Secretary) ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಬಳಿಕ ರಾಜಕಾರಣ(Politics) ಪ್ರವೇಶ ಮಾಡಿ ಕಾಂಗ್ರೆಸ್ಸಿನಿಂದ(Congress) ಅಂದಿನ ಭಾರತಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಎಸ್‌.ಎಂ.ಕೃಷ್ಣ(SM Krishna) ಮುಖ್ಯಮಂತ್ರಿಯಾಗಿದ್ದಾಗ ಪ್ರವಾಸೋದ್ಯಮ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಖ್ಯ ಕಾರ್ಯದರ್ಶಿ ಆಗುವ ಮೊದಲು ರಾಜ್ಯ ಸರ್ಕಾರದ(Government of Karnataka) ಎಲ್ಲಾ ಇಲಾಖೆಗಳಲ್ಲೂ ಕೆಲಸ ಮಾಡಿದ ಏಕೈಕ ಅಧಿಕಾರಿ ಎನ್ನುವ ಖ್ಯಾತಿಯನ್ನೂ ಪಡೆದಿದ್ದರು.

Basavalingaiah Hiremath Passed Away: ಕಂಚಿನಕಂಠದ ಗಾಯಕ ಬಸವಲಿಂಗಯ್ಯ ಹಿರೇಮಠ ಇನ್ನಿಲ್ಲ

ಮಾಜಿ ಸಚಿವ ಅಲೆಕ್ಸಾಂಡರ್‌ ನಿಧನಕ್ಕೆ ಬೊಮ್ಮಾಯಿ ಸಂತಾಪ

ಬೆಂಗಳೂರು: ಮಾಜಿ ಸಚಿವ, ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಜೆ.ಅಲೆಕ್ಸಾಂಡರ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ತೀವ್ರ ಸಂತಾಪ(Condolences) ವ್ಯಕ್ತಪಡಿಸಿದ್ದಾರೆ.

 

ಮಾಜಿ ಸಚಿವರು, ರಾಜ್ಯ ಸರ್ಕಾರದ ಮಾಜಿ ಮುಖ್ಯಕಾರ್ಯದರ್ಶಿ ಜೆ.ಅಲೆಕ್ಸಾಂಡರ್ ಅವರ ನಿಧನ ಮುಖ್ಯಮಂತ್ರಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

ಅಲೆಕ್ಸಾಂಡರ್ ಅವರು ಐಎಎಸ್ ಅಧಿಕಾರಿಯಾಗಿ ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿ ನಂತರ ರಾಜಕೀಯ ಕ್ಷೇತ್ರಕ್ಕೆ ಧುಮುಕಿದರು. (1/2)

— CM of Karnataka (@CMofKarnataka)

ಅಲೆಕ್ಸಾಂಡರ್‌ ಅವರು ಐಎಎಸ್‌ ಅಧಿಕಾರಿಯಾಗಿ(IAS Officer) ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿ ಸೈ ಎನಿಸಿಕೊಂಡವರು. ನಂತರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಆಡಳಿತ ಸೇವೆ ನಂತರ ಅವರು ರಾಜಕೀಯ ಕ್ಷೇತ್ರಕ್ಕೆ ಧುಮುಕಿದರು. ಚುನಾವಣೆಯಲ್ಲಿ ಗೆದ್ದು ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರ ನಿಧನದ ಸುದ್ದಿ ನನಗೆ ಬೇಸರ ತರಿಸಿದೆ ಎಂದು ಅವರು ತಿಳಿಸಿದ್ದಾರೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಕೋರುತ್ತೇನೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
 

click me!