ಒಳ ಮೀಸಲಾತಿ: ನಾಳೆಯೇ ಸಚಿವ ಸಂಪುಟದಲ್ಲಿ ನಿರ್ಣಾಯಕ ತೀರ್ಮಾನ? ಮಾಜಿ ಸಚಿವ ಆಂಜನೇಯ ಸಿಎಂಗೆ ಬರೆದ ಪತ್ರದಲ್ಲಿ ಏನಿದೆ?

Kannadaprabha News, Ravi Janekal |   | Kannada Prabha
Published : Aug 18, 2025, 08:20 AM IST
h anjaneya

ಸಾರಾಂಶ

ನ್ಯಾ.ನಾಗಮೋಹನ್‌ದಾಸ್‌ ಆಯೋಗದ ವರದಿ ಜಾರಿ ಕುರಿತು ಆ.19 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳುವಂತೆ ಮಾಜಿ ಸಚಿವ ಎಚ್‌.ಆಂಜನೇಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 

ಬೆಂಗಳೂರು (ಆ.18):  ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ಸಲ್ಲಿಸಿರುವ ನ್ಯಾ.ನಾಗಮೋಹನ್‌ದಾಸ್‌ ಆಯೋಗದ ವರದಿ ಜಾರಿ ಮಾಡಲು ಆ.19 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟದಲ್ಲೇ ನಿರ್ಧಾರ ಮಾಡಬೇಕು ಎಂದು ಮಾಜಿ ಸಚಿವ ಎಚ್‌.ಆಂಜನೇಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಸುಪ್ರೀಂಕೋರ್ಟ್‌ ಒಳ ಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದ ಬೆನ್ನಲ್ಲೇ ಎಷ್ಟೇ ಒತ್ತಡ ಬಂದರೂ ಜಗ್ಗದೆ 101 ಪರಿಶಿಷ್ಟ ಜಾತಿಗಳ ಸಮಗ್ರ ದತ್ತಾಂಶ ಸಂಗ್ರಹಕ್ಕೆ ನ್ಯಾ.ದಾಸ್‌ ಆಯೋಗ ರಚನೆ ಮಾಡಿದ್ದೀರಿ. ಆಯೋಗವು ಸುಪ್ರೀಂ ನಿರ್ದೇಶನದಂತೆ ಹಿಂದುಳಿದಿರುವಿಕೆ ಆಧಾರದ ಮೇಲೆ ಐದು ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಈ ಬಗ್ಗೆ ಕೆಲ ಜಾತಿಗಳಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಿ ಮಂಗಳವಾರದ ಸಂಪುಟದಲ್ಲೇ ತೀರ್ಮಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ ಪ್ರಜ್ಞಾವಂತರು, ಶಿಕ್ಷಣ, ಉದ್ಯೋಗ, ಸಾಮಾಜಿಕ ಸ್ಥಿತಿಗತಿಯಲ್ಲಿ ಮಾದಿಗರಿಗಿಂತಲೂ ಮುಂದಿರುವ ಸಹೋದರರಾದ ಹೊಲೆಯ ಸಮುದಾಯದವರು ಒಳಮೀಸಲಾತಿ ವರ್ಗೀಕರಣವನ್ನು ಸಂವಿಧಾನದ ಕಣ್ಣುಗಳಲ್ಲಿ ನೋಡಬೇಕು. ಯಾವುದೇ ರೀತಿಯ ವೈಯಕ್ತಿಕ ನೆಲೆಗಟ್ಟಿನಲ್ಲಿ ಪರಿಶೀಲಿಸಿದರೂ ಇದು ಅಂಬೇಡ್ಕರ್ ಸಿದ್ಧಾಂತಕ್ಕೆ ವಿರುದ್ಧದ ನಡೆ ಆಗಲಿದೆ ಎಂಬುದನ್ನು ಅವರಿಗೆ ಮನದಟ್ಟು ಮಾಡಿಕೊಡಬೇಕು ಎಂದೂ ಅವರು ಕೋರಿದ್ದಾರೆ.

ಹಿಂದುಳಿಕೆ ಪರಿಗಣಿಸಿ ವರ್ಗೀಕರಣ:

ಆಯೋಗವು ಜಾತಿಗೆ ಬದಲಾಗಿ ಹಿಂದುಳಿದಿರುವಿಕೆ ಪ್ರಮಾಣದ ಪ್ರಕಾರ ಎ, ಬಿ, ಸಿ, ಡಿ, ಇ ಎಂದು 101 ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಿಸಲಾಗಿದೆ. ಈ ವಿಷಯದಲ್ಲಿ ಹೊಲೆಯ ಸಮುದಾಯದವರು ಗೊಂದಲಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಗಮನ ನೀಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಆಂಜನೇಯ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್