
ಹುಬ್ಬಳ್ಳಿ (ಅ.23) ಪ್ರಿಯಾಂಕ ಖರ್ಗೆ ರಾಜ್ಯದ ಉಪಮುಖ್ಯಮಂತ್ರಿಯಾಗಲಿದ್ದಾರೆ ಈ ವಿಚಾರವಾಗಿ ದೆಹಲಿ ಮಟ್ಟದಲ್ಲಿ ಪ್ಲ್ಯಾನ್ ನಡೆದಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದರು.
ಸಿಎಂ ಬದಲಾವಣೆ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ಲ್ಯಾನ್ ನಡೆದಿದೆ ಎಂದರು. ಒಂದು ವೇಳೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಬಲ ಬಂದಂತಾಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಿದೆ ಎಂದು ಆರೋಪಿಸಿದ ಶ್ರೀರಾಮುಲು ಅವರು, ಕಾಂಗ್ರೆಸ್ ಸರ್ಕಾರವು ವಿನಾಕಾರಣ ಆರ್‌ಎಸ್‌ಎಸ್ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ. ಆರ್‌ಎಸ್‌ಎಸ್‌ನಲ್ಲಿ ಮುಕ್ತವಾಗಿ ಭಾಗವಹಿಸಲು ಕೇಂದ್ರ ಸರ್ಕಾರ ಗೆಜೆಟ್ ಮೂಲಕ ಅವಕಾಶ ನೀಡಿದರೂ, ಕಾಂಗ್ರೆಸ್ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರವನ್ನು 'ನಿಂತ ನೀರಿನ ಸರ್ಕಾರ' ಎಂದು ಕರೆದ ಅವರು, ಆಡಳಿತ ವೈಫಲ್ಯಗಳನ್ನು ಮರೆಮಾಚಲು ಆರ್‌ಎಸ್‌ಎಸ್ ವಿಚಾರವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ 'ಪಾಕಿಸ್ತಾನ್ ಜಿಂದಾಬಾದ್' ಅಂತಾ ದೇಶದ್ರೋಹ ಘೋಷಣೆ ಕೂಗುವವರಿಗೆ ರಾಜ್ಯಸಭೆ, ಲೋಕಸಭೆ ಸದಸ್ಯತ್ವ
ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರನ್ನು ಕಾಂಗ್ರೆಸ್ ರಾಜ್ಯಸಭೆ ಮತ್ತು ಲೋಕಸಭೆಗೆ ಸದಸ್ಯರನ್ನಾಗಿ ಮಾಡುತ್ತಿದೆ. ಆದರೆ 'ಭಾರತ ಮಾತೆಗೆ ಜೈ ಎನ್ನುವವರನ್ನ ಅಥವಾ ಆರ್‌ಎಸ್‌ಎಸ್ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುತ್ತಾರೆ ಎಂದರೆ ಈ ಕಾಂಗ್ರೆಸ್‌ನ ಮನಸ್ಥಿತಿ ಏನು? ಅಧಿಕಾರಕ್ಕಾಗಿ ದೇಶದ್ರೋಹಿಗಳೊಂದಿಗೆ ರಾಜೀ ಆಗುವ, ದೇಶದ್ರೋಹಿಗಳಿಗೆ ಬೆಂಬಲ ನೀಡುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂಬುದು ಅಧಿಕಾರಕ್ಕೆ ಬಂದಾಗಿಂದ ಅದರ ನಡೆಗಳನ್ನ ಗಮನಿಸಬಹುದು. ಕಾಂಗ್ರೆಸ್ ಸರ್ಕಾರ ಭಾರತೀಯ ಸಂಸ್ಕೃತಿಯ ಬಗ್ಗೆ ಮಾತನಾಡುವ ಯಾವ ನೈತಿಕತೆಯನ್ನು ಹೊಂದಿಲ್ಲ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ