ವಂಚನೆ ಪ್ರಕರಣ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರಿಗೆ ಜೈಲು ಶಿಕ್ಷೆ!

Published : Feb 06, 2025, 11:44 AM ISTUpdated : Feb 06, 2025, 12:15 PM IST
ವಂಚನೆ ಪ್ರಕರಣ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರಿಗೆ ಜೈಲು ಶಿಕ್ಷೆ!

ಸಾರಾಂಶ

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ನಕಲಿ ದಾಖಲೆಗಳ ಮೂಲಕ 7.17 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಶಿಕ್ಷೆ ವಿಧಿಸಲಾಗಿದೆ.

ಮಾಲೂರು ವಿಧಾನಸಭಾ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಎಸ್‌.ಎನ್ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆಯಾಗಿದೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಪ್ಪಿತಸ್ಥ ಎಂದು ತೀರ್ಪು ನೀಡಿದೆ, ವಿಚಾರಣೆ ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿದೆ.

ಕೃಷ್ಣಯ್ಯಶೆಟ್ಟಿ ಸೇರಿ ನಾಲ್ವರು ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು ನೀಡಿದೆ. ಕೃಷ್ಣಯ್ಯಶೆಟ್ಟಿ, ರೆಡ್ಡಿ ಎಂಟಿವಿ,  ಶ್ರೀನಿವಾಸ್ ಹಾಗೂ ಮುನಿರಾಜು ತಪ್ಪಿತಸ್ಥರು. ನಕಲಿ ದಾಖಲೆ ದಾಖಲೆ ನೀಡಿ ಕೋಟ್ಯಾಂತರ ರೂ.ಸಾಲ ಪಡೆದು ವಂಚನೆ ಮಾಡಿದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ. ವಿಚಾರಣೆ ನಡೆಸಿ ಬಳಿಕ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ.

ನೋಟ್‌ಗಳೇ ಕೋಡ್‌ವರ್ಡ್‌, ಎಲೆಕ್ಷನ್‌ನಲ್ಲಿ ಹಣ ಹೇಗೆಲ್ಲಾ ಹಂಚ್ತಾ ಇದ್ರು..? ಇಲ್ಲಿದೆ ಡೀಟೇಲ್ಸ್‌!

ಕೃಷ್ಣಯ್ಯ ಶೆಟ್ಟಿ, ಕೆ.ವಿ.ಹನುಮಪ್ಪ ರೆಡ್ಡಿ, ಜಿ.ಎಂ.ರಮೇಶ್ ಹಾಗೂ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2)ರಡಿ ಸಿಬಿಐ ಕೇಸ್ ದಾಖಲಿಸಿತ್ತು. ಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ನಾಲ್ವರು ಅಪರಾಧಿಗಳನ್ನು ಸಿಬಿಐ ಅಧಿಕಾರಿಗಳು ಕೋರ್ಟ್ನಿಂದಲೇ ಕಸ್ಟಡಿಗೆ ಪಡೆದಿದ್ದಾರೆ.

ಏನಿದು ಪ್ರಕರಣ: 
1993ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್‌ನ ಮಾಲೀಕರಾಗಿದ್ದ ಕೃಷ್ಣಯ್ಯ ಶೆಟ್ಟಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿದ್ದರು. ಬಿಟಿಎಸ್, ಕೆಎಸ್‌ಆರ್‌ಟಿಸಿ, ಬಿಎಸ್‌ಎನ್‌ಎಲ್, ಐಟಿಐ, ಎಚ್‌ಎಎಲ್, ಬಿಇಎಂಎಲ್, ಎಡಿಇ ಸಂಸ್ಥೆಗಳ 181 ಮಂದಿಗೆ 7.17 ಕೋಟಿ ರೂ.ಬ್ಯಾಂಕ್ ಸಾಲವನ್ನು ನಕಲಿ ದಾಖಲೆ ಸೃಷ್ಟಿಸಿ ಪಡೆದ ಆರೋಪ ಇತ್ತು. ಇದರಲ್ಲಿ 3.53 ಕೋಟಿ ಸಾಲ ತೀರಿಸಿಲ್ಲ ಎಂದು ಸಿಸಿಐ ಆರೋಪಿಸಿತ್ತು. ಮುಖ್ಯ ವಿಚಕ್ಷಣೆ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ಆಧರಿಸಿ, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು.ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು.

Karnataka election results 2023: ರಾಜಧಾನಿಯಲ್ಲಿ ಒಬ್ಬ ಬಂಡಾಯ ಅಭ್ಯರ್ಥಿಯೂ ಗೆದ್ದಿಲ್ಲ!

ಅಂದಿನ ಮುಖ್ಯ ವಿಚಕ್ಷಣೆ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ಆಧರಿಸಿ, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು.ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್‌ಶೀಟ್ ಹಾಕಿತ್ತು. ಸಾಲ ಕೊಡಿಸುವಾಗ ನೌಕರರಲ್ಲದವರನ್ನು ನೌಕರರೆಂದು ಸುಳ್ಳು ವೇತನ ರಸೀದಿ, ಪ್ರಮಾಣಪತ್ರ ಕೊಟ್ಟು 263 ಪ್ರಕರಣಗಳಲ್ಲಿ 15.61 ಕೋಟಿ ಸಾಲ ಪಡೆದಿದ್ದು, 33 ಪ್ರಕರಣಗಳಲ್ಲಿ 1.47 ಕೋಟಿ ರೂ.ಬಾಕಿ ಪಾವತಿ ಮಾಡಬೇಕಿದೆ. 181 ಮಂದಿಬೇನಾಮಿ ಹೆಸರಲ್ಲಿ ಯೋಜನೆಯ ಲಾಭ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ  ನಗರ ಶಾಖೆಯ ಎಸ್‌ಬಿಎಂನ ವ್ಯವಸ್ಥಾಪಕ ಎಂ.ಟಿ.ವಿ.ರೆಡ್ಡಿ ಇದರಲ್ಲಿ ಶಾಮೀಲಾಗಿದ್ದು,ಒಂದು ಸಾಲ ಬಿಡುಗಡೆಗೆ 20 ಸಾವಿರ ರೂ. ಹಣ ಪಡೆದಿದ್ದಕ್ಕೆ ಸಾಕ್ಷ್ಯ ದೊರೆತಿದೆ. ನಾಗವಾರದ ಬಳಿ ನಿವೇಶನ ಎಂದು ತೋರಿಸಿದ್ದ ಜಾಗ ಮೊದಲೇ ಕೆಐಎಡಿಬಿಗೆ ಸೇರಿದ್ದಾಗಿತ್ತು. ಇದು ವಂಚನೆಗೆ ಕಾರಣ ಎಂದು ಸಿಬಿಐ ಚಾರ್ಜ್‌ಶೀಟ್‌ನಲ್ಲಿ  ಸುದೀರ್ಫ ಮಾಹಿತಿ ನೀಡಿತ್ತು. 

ಬೆಂಗಳೂರು ಉತ್ತರ ತಾಲ್ಲೂಕಿನ ನಾಗವಾರ ಗ್ರಾಮದ ಸರ್ವೇ ನಂಬ‌ರ್ 98ರಲ್ಲಿ 3 ಎಕರೆಗೂ ಹೆಚ್ಚಿನ ಜಾಗದಲ್ಲಿ ಲೇ ಔಟ್ ನಿರ್ಮಾಣಕ್ಕಾಗಿ ಸಾಲ ಪಡೆಯಲಾಗಿತ್ತು. ಈ ಪ್ರದೇಶದಲ್ಲಿ ಗೃಹ ನಿರ್ಮಾಣ ಯೋಜನೆಗೆ ಕೃಷ್ಣಯ್ಯ ಶೆಟ್ಟಿ ಬಾಲಾಜಿ ಎಂಟರ್‌ಪ್ರೈಸಸ್ ಹೆಸರಿನಲ್ಲಿ 2003ರಿಂದ 2008ರವರೆಗೆ ಚಾಲ್ತಿ ಖಾತೆಯಲ್ಲಿ ಎಸ್‌ಬಿಎಂನಿಂದ ಸಾಲ ಪಡೆದಿದ್ದಾರೆ. ಇದಕ್ಕಾಗಿ ಅವರು ತೊಟ್ಟಿ ದಾಖಲೆ ಸೃಷ್ಟಿಸಿದ್ದಾರೆ' ಎಂಬುದು ಸಿಬಿಐ ಆರೋಪವಾತ್ತು.

ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನನ್ನನ್ನು ಕೈ ಬಿಡಬೇಕೆಂದು 2013ರಲ್ಲಿ ಕೃಷ್ಣಯ್ಯ ಶೆಟ್ಟಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿ ತಿರಸ್ಕೃತಗೊಂಡಿತ್ತು. 2023 ಲ್ಲಿ ಹೈಕೋರ್ಟ್ ನಿಂದ ಕೂಡ ಕೃಷ್ಣಯ್ಯಶೆಟ್ಟಿ ಮನವಿ ತಿರಸ್ಕೃತವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌