
ಬೆಂಗಳೂರು, (ಏ.22): ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದ್ದು, ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ.
ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಹಲವು ಜಿಲ್ಲೆಗಳಲ್ಲಿ ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.
ದಿಢೀರ್ ಮಾರ್ಗಸೂಚಿ ಬದಲಾವಣೆ: ಕರ್ನಾಟಕ ಭಾಗಶಃ ಲಾಕ್
ನಿರ್ಧಾರ ಕೈಬಿಡಿ ಎಂದ ಶರವಣ
ಸರ್ಕಾರದ ಈ ದಿಢೀರ್ ನಿರ್ಧಾರಕ್ಕೆ ಜೆಡಿಎಸ್ ಮಾಜಿ ಎಂಎಲ್‌ಸಿ ಟಿ.ಎ.ಶರವಣ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಇದನ್ನು ಕೈಬಿಡಬೇಕೆಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, ಕೊರೊನಾ ಸೋಂಕು ತಡೆಗಟ್ಟಲು ಚಿನ್ನ, ಬಟ್ಟೆ ಅಂಗಡಿ ಮುಚ್ಚಿಸುವ ನಿರ್ಧಾರ ಕೈಬಿಡಿ. ಮದುವೆ ಸಮಯದಲ್ಲಿ ಬಟ್ಟೆ ಮತ್ತು ಚಿನ್ನದ ಅಂಗಡಿಗಳನ್ನು ಮುಚ್ಚಿಸಿದರೆ ಸಮಸ್ಯೆ ಸೃಷ್ಟಿಯಾಗಲಿದೆ. ಕೊವಿಡ್ ನಿಯಮಗಳನ್ನು ಪಾಲಿಸುತ್ತೇವೆ ಬಟ್ಟೆ, ಚಿನ್ನದ ಅಂಗಡಿ ತೆರೆಯಲು ಅನುಮತಿ ನೀಡಿ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ: ಮತ್ತೆಲ್ಲವೂ ಬಂದ್ .
ಮಾರ್ಗಸೂಚಿ ಪ್ರಕಾರವೇ ಬಟ್ಟೆ ಮತ್ತು ಚಿನ್ನದ ಅಂಗಡಿಗಳಲ್ಲಿ ವ್ಯವಹಾರ ನಡೆಯಲಿದೆ. ಇದರಿಂದ ಸರ್ಕಾರಕ್ಕೂ ದೊಡ್ಡ ಮಟ್ಟದ ಆದಾಯ ಬರಲಿದೆ. ಏಕಾಏಕಿ ಸರ್ಕಾರಕೈಗೊಂಡ ನಿರ್ಧಾರದಿಂದ ಇಡೀ ಉದ್ಯಮ ಮತ್ತು ವಿವಾಹಕ್ಕೆ ತಯಾರಿ ಮಾಡಿಕೊಂಡವರಿಗೆ ಶಾಕ್ ಆಗಿದೆ. ಮದುವೆ ಸಮಯದಲ್ಲಿ ಕೂಡಲೇ ಚಿನ್ನದ ಅಂಗಡಿಗಳು ಮತ್ತು ಬಟ್ಟೆ ಅಂಗಡಿಗಳನ್ನು ಕೊರೋನಾ ಮಾರ್ಗಸೂಚಿ ಪ್ರಕಾರ ನಡೆಸಲು ಅವಕಾಶ ಕೊಡಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ