
ಬೆಂಗಳೂರು(ಆ.07): ಕಾಂಗ್ರೆಸ್ ಸರ್ಕಾರ ಆರಂಭಿಸಿರುವ ಇಂದಿರಾ ಕ್ಯಾಂಟೀನ್‌ಗೆ ಸೆಡ್ಡು ಹೊಡೆದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೆಸರಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಆರಂಭಿಸಿರುವ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ಗೆ ಮೂರು ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಭೋಜನವನ್ನು ಗ್ರಾಹಕರಿಗೆ 1ಕ್ಕೆ ಊಟ ನೀಡಲಾಯಿತು.
ನಗರದ ಹನುಮಂತನಗರದಲ್ಲಿ ಪ್ರಾರಂಭಿಸಿರುವ ನಮ್ಮ ಅಪ್ಪಾಜಿ ಕ್ಯಾಂಟೀನ್‌ಗೆ ಗುರುವಾರ ಮೂರು ವರ್ಷವಾಗಿದೆ. ಈ ಸಂಭ್ರಮದ ಪ್ರಯುಕ್ತ ಗುರುವಾರ ಮಧ್ಯಾಹ್ನ 12ರಿಂದ 2ರವರೆಗೆ ಕೇವಲ 1ಕ್ಕೆ ಊಟ ನೀಡಲಾಯಿತು. ರಾಗಿ ಮುದ್ದೆ, ಅನ್ನ, ಸಾಂಬಾರ್ ವಿತರಣೆ ಮಾಡಲಾಯಿತು. ಕೊರೋನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಶರವಣ ಅವರೇ ಊಟವನ್ನು ವಿತರಿಸಿದರು. ನೂರಾರು ಜನರು ಮಧ್ಯಾಹ್ನದ ಊಟ ಸವಿದರು.
ಅಪ್ಪಾಜಿ ಕ್ಯಾಂಟೀನ್‌ನಲ್ಲಿ 1 ರು.ಗೆ ಊಟ: ರೋಗ ನಿರೋಧಕ ಹೆಚ್ಚಿಸುವ ಆಹಾರ ಲಭ್ಯ
ಕೊರೋನಾದಿಂದಾಗಿ ಬಹಳಷ್ಟು ಜನರಿಗೆ ಪೌಷ್ಟಿಕಾಂಶವುಳ್ಳ ಊಟದ ವ್ಯವಸ್ಥೆ ಇಲ್ಲದಂತಾಗಿದೆ. ಇಂತಹ ವೇಳೆಯಲ್ಲಿ ವಿಟಮಿನ್ ಎ, ಬಿ, ಸಿ ಮತ್ತು ಕಬ್ಬಿಣಾಂಶವುಳ್ಳ ನವಣೆ, ತರಕಾರಿ ಮತ್ತು ಸೊಪ್ಪಿನ ತಿಂಡಿ ಮತ್ತು ಊಟವನ್ನು ನೀಡುವ ಕಾರ್ಯ ಮಾಡಲಾಗುತ್ತಿದೆ. ಪ್ರತಿದಿನವೂ ಶುಚಿ ಮತ್ತು ರುಚಿಯಾದ ಕಷಾಯ, ತಿಂಡಿ, ಊಟವನ್ನು ಅತ್ಯಂತ ಕಡಿಮೆ ದರಲ್ಲಿ ನೀಡಲಾಗುತ್ತಿದೆ. ಶರವಣ ಅವರು ಸ್ವಂತ ಶಕ್ತಿಯಿಂದ ರುಚಿಯಾದ ಆಹಾರವನ್ನು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ನೀಡುತ್ತಿದ್ದಾರೆ. ಪ್ರತಿದಿನ ಬೆಳಗ್ಗೆ ಉಪಹಾರಕ್ಕೆ ಇಡ್ಲಿ, ವಡೆ, ಖಾರಾಬಾತ್, ಕೇಸರಿಬಾತ್ ಜತೆಗೆ ಮಧ್ಯಾಹ್ನದ ಊಟಕ್ಕೆ ರಾಗಿ ಮುದ್ದೆ, ಅನ್ನ ಸಾಂಬಾರ್, ರೈಸ್ ಬಾತ್ ನೀಡಲಾಗುತ್ತಿದೆ. ಪ್ರತಿದಿನವೂ ಸಾವಿರಾರು ಜನ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.
ಮೂರು ವರ್ಷದಿಂದ ಅಪ್ಪಾಜಿ ಕ್ಯಾಂಟೀನ್ ನಡೆಸುತ್ತಿದ್ದೇನೆ. ಸ್ವಂತ ಶಕ್ತಿಯಿಂದ ನಡೆಸಿಕೊಂಡು ಬರುತ್ತಿದ್ದು, ಎಲ್ಲರ ಸಹಕಾರ ಬೇಕು. ಕೊರೋನಾ ಸಮಯವಾದರಿಂದ ನವಣೆ, ಸಜ್ಜೆಯಂತಹ ಊಟದ ವ್ಯವಸ್ಥೆ ಮಾಡುತ್ತೇವೆ ಎಂದು ಮಾಜಿ ಶಾಸಕ ಟಿ.ಎ.ಶರವಣ ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ