ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರ ನಾಳೆ (ಭಾನುವಾರ) ಹುಟ್ಟೂರಿನಲ್ಲಿ ನಡೆಯಲಿದೆ. ಆರ್.ಧ್ರುವನಾರಾಯಣ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಮೈಸೂರು (ಮಾ.11): ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರ ನಾಳೆ (ಭಾನುವಾರ) ಹುಟ್ಟೂರಿನಲ್ಲಿ ನಡೆಯಲಿದೆ. ಆರ್.ಧ್ರುವನಾರಾಯಣ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೇ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಇವರು 1986ರಲ್ಲಿ ಎನ್ಎಸ್ಯುಐ ಬೆಂಗಳೂರು ಘಟಕದ ಅಧ್ಯಕ್ಷರಾಗಿದ್ದರು. ಈ ಬಾರಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು.
ಆರ್.ಧ್ರುವನಾರಾಯಣ ನಿಧನಕ್ಕೆ ಕಾಂಗ್ರೆಸ್ ನಾಯಕ ಸುರ್ಜೇವಾಲ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದು, ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಅವರು 'ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ ಆರ್.ಧ್ರುವನಾರಾಯಣರವರಿಗೆ ಬಾವಪೂರ್ಣ ಶ್ರದಾಂಜಲಿ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ ರೈತರ ಶೋಷಿತರ ಪರ ಅಪಾರ ಕಾಳಜಿ ಹೊಂದ್ದಿದ್ದರು ಎಂದು ಸಂತಾಪ ಸೂಚಿಸಿದ್ದಾರೆ.
R Dhruvanarayan Passes Away: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ
ಶೋಷಿತರು, ದಮನಿತರು, ದಲಿತ ಮತ್ತು ಹಿಂದುಳಿದ ವರ್ಗಗಳ ಧ್ವನಿಯಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಚಾಮರಾಜನಗರ ಕ್ಷೇತ್ರವನ್ನು ಎರಡು ಬಾರಿ ಲೋಕಸಭೆಯಲ್ಲಿ ಪ್ರತಿನಿಧಿಸಿದ್ದ ಆರ್. ಧ್ರುವನಾರಾಯಣ್ ಅವರ ನಿಧನದಿಂದ ಕರ್ನಾಟಕ ರಾಜ್ಯದ ಒಬ್ಬ ಅತ್ಯುತ್ತಮ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಅವರ ನಿಧನದಿಂದ ಆಗಿರುವ ದುಃಖವನ್ನು ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ದಯಪಾಲಿಸಲಿ ದಯಾಘನನಾದ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನಿ ಯಲಿ ಎಂದು ಪ್ರಾರ್ಥಿಸುವೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ
ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಧ್ರುವನಾರಾಯಣ ನಿಧನದ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್, "ನನ್ನ ಆತ್ಮೀಯರಾಗಿದ್ದ ನಮ್ಮ ಪಕ್ಷದ ಕಾರ್ಯಧ್ಯಕ್ಷರು, ಸರಳ ಸಜ್ಜನಿಕೆಯ ಸ್ನೇಹಜೀವಿ ರಾಜಕಾರಣಿ ಎಂದೇ ಖ್ಯಾತರಾದ ಆರ್. ಧ್ರುವನಾರಾಯಣ್ ಅವರ ನಿಧನದ ಸುದ್ದಿ ಆಘಾತ ತರಿಸಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಪಕ್ಷ ಸಂಘಟನೆ ಮಾಡುತ್ತಾ ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಬಹುದೊಡ್ಡ ಶಕ್ತಿಯಾಗಿದ್ದರು. 2 ಬಾರಿ ಶಾಸಕರಾಗಿ, 2ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ, ಅಭಿಮಾನಿಗಳಿಗೆ ಹಾಗೂ ಅವರನ್ನು ಪ್ರೀತಿಸುತ್ತಿದ್ದ ಲಕ್ಷಾಂತರ ಮತದಾರರಿಗೆ ತುಂಬಲಾಗದ ನಷ್ಟವಾಗಿದೆ'' ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸರ್ಕಾರ ಏಕೆ ಮೇಲ್ಮನವಿ ಸಲ್ಲಿಸಿಲ್ಲ?: ಧ್ರುವನಾರಾಯಣ್ ಪ್ರಶ್ನೆ
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಶ್ರೀ ಧ್ರುವನಾರಾಯಣ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅಪಾರ ದುಃಖವಾಯಿತು. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.
ಧ್ರುವನಾರಾಯಣ ನಿಧನದ ಬಗ್ಗೆ ಸಂಸದ ಪ್ರತಾಪ್ ಸಿಂಹ ತಮ್ಮ ಟ್ವೀಟರ್ ಖಾತೆಯಲ್ಲಿ ಇಂಥಾ ಒಳ್ಳೆಯ ವ್ಯಕ್ತಿಯನ್ನೂ ಕಿತ್ತುಕೊಂಡೆಯಲ್ಲಾ ದೇವರೇ... ಓಂ ಶಾಂತಿ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.