ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಬಳಿಕ ಸೈಲೆಂಟ್ ಆಗಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಫುಲ್ ಆಕ್ಟಿವ್ ಆಗಿದ್ದಾರೆ. ಸದ್ಯ ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಎಂಟ್ರಿ ಕೊಡುವ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಬಹಳಷ್ಟು ಬೆಂಬಲಿಗರು ಕೇಂದ್ರ ರಾಜಕಾರಣ ಬೇಡ ಇಲ್ಲೇ ಇರುವಂತೆ ಒತ್ತಾಯಿಸುತ್ತಿದ್ದಾರೆ.
ಮೈಸೂರು (ಆ.14) ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ಬಳಿಕ ಸೈಲೆಂಟ್ ಆಗಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಇದೀಗ ಫುಲ್ ಆಕ್ಟಿವ್ ಆಗಿದ್ದಾರೆ. ಸದ್ಯ ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಎಂಟ್ರಿ ಕೊಡುವ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಬಹಳಷ್ಟು ಬೆಂಬಲಿಗರು ಕೇಂದ್ರ ರಾಜಕಾರಣ ಬೇಡ ಇಲ್ಲೇ ಇರುವಂತೆ ಒತ್ತಾಯಿಸುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ ಸಿಂಹ ಅವರು, ನಾನು ಅನ್ಯಾಯದ ವಿರುದ್ಧ ಅಷ್ಟೇ ರೆಬೆಲ್, ಪಕ್ಷದ ವಿರುದ್ಧ ಅಲ್ಲ. ಬಿಜೆಪಿಯ ದೊಡ್ಡ ದೊಡ್ಡ ನಾಯಕರಿಗಿಂತ ನಾನು ಪಾರ್ಟಿಗೆ ಸಿನೀಯರ್. ಯಾಕೆಂದರೆ ನನ್ನ ತಂದೆಯೇ ಆರ್‌ಎಸ್‌ಎಸ್‌ನಲ್ಲಿದ್ದವರು. ನಾನು ಪಕ್ಷಕ್ಕಾಗಿ ಬ್ಯಾನರ್, ಬಂಟಿಂಗ್ ಕಟ್ಟಿಲ್ಲದಿರಬಹುದು ಆದರೆ ಯುವ ಸಮೂಹವನ್ನ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದೇನೆ. ಯಡಿಯೂರಪ್ಪ ಅಂತವರು ನೇಪಥ್ಯಕ್ಕೆ ಸರಿಯುತ್ತಿರುವ ಕಾರಣ ರಾಜ್ಯಕ್ಕೆ ನನ್ನಂಥ ಯಂಗ್ ಬ್ಲಡ್ ಬರಬೇಕಿದೆ. ಹೀಗಾಗಿ ನನ್ನನ್ನು ರಾಜ್ಯ ರಾಜಕಾರಣದಲ್ಲಿ ಇರಲಿದ್ದೇನೆ ಎಂದಿದ್ದಾರೆ.
undefined
ಪುನೀತ್ ಕೆರೆಹಳ್ಳಿಗೆ ಟಾರ್ಚರ್ ಆರೋಪ; ಪೊಲೀಸ್ ದೌರ್ಜನ್ಯ ಖಂಡಿಸಿ ನಾಳೆ ಪ್ರತಾಪ್ ಸಿಂಹ ಪ್ರತಿಭಟನೆ!
ನಾನು ಯಾರನ್ನೂ ಓಲೈಸಲು ರಾಜಕಾರಣ ಮಾಡೊಲ್ಲ. ಯಾರ ಮನೆ ಬಾಗಿಲೂ ತಟ್ಟೋದಿಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಬಿಜೆಪಿ ಅಲ್ಲ. ರಾಷ್ಟ್ರೀಯ ಸ್ವಯಂ ಸೇವಾ ಸಂಘ ನನಗೆ ಟಿಕೆಟ್ ಕೊಟ್ಟಿದ್ದು. ಕ್ಷೇತ್ರ, ಜಾತಿ ಆಚೆಗೆ ಜನಪ್ರಿಯತೆ ಇರುವ ಬಸವನಗೌಡ ಯತ್ನಾಳ್ ಅಂಥವರಲ್ಲಿ ನಾನು ಕೂಡ ಒಬ್ಬ. ಇದರ ಬಗ್ಗೆ ಯಾರಿಗಾದರೂ ಅನುಮಾನ ಇದ್ದೆಯಾ? ಮೈಸೂರಿನಲ್ಲಿ ನನಗೆ ನೆಲೆ, ಪ್ರೀತಿ ಸಿಕ್ಕಿದೆ. ನಾನು ಮುಂದೆಯೂ ಮೈಸೂರಲ್ಲೆ ಇರುತ್ತೇನೆ ಎಂದಿದ್ದಾರೆ.
ಮೈಸೂರು ಕೊಡಗು ಸಂಸದರಾಗಿ ಹತ್ತು ವರ್ಷಗಳ ಕಾಲ ಸಾಕಷ್ಟು ಅಭಿವೃದ್ಧಿ ಮಾಡಿದ್ದ ಪ್ರತಾಪ್ ಸಿಂಹ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಮ್ಮೆ ಟಿಕೆಟ್ ಸಿಗುತ್ತದೆ ಎಂದೇ ಹೇಳಲಾಗಿತ್ತು. ಹೈಕಮಾಂಡ್ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಕೊಡಲಿಲ್ಲ.
ಸಿಟಿ ರವಿ ಸ್ವಲ್ಪ ದಿನದಲ್ಲೇ ಬೆಳಗಾವಿ ಗ್ಯಾಂಗ್ ಸೇರ್ತಾರೆ: ಪ್ರಿಯಾಂಕ್ ಖರ್ಗೆ
ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ವಿಜಯೇಂದ್ರ
ಪ್ರತಾಪ ಸಿಂಹ ರಾಜ್ಯರಾಜಕಾರಣ ಎಂಟ್ರಿ ಆಗುವ ಬಗ್ಗೆ ಕಳೆದ ಮಾರ್ಚ್‌ನಲ್ಲಿ ಸುಳಿವು ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ. ಹೌದು ಲೋಕಸಭಾ ಚುನಾವಣೆ ವೇಳೆ ಮೈಸೂರಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ವಿಜಯೇಂದ್ರ, ಟಿಕೆಟ್ ಸಿಗದಿದ್ದರೆ ಏನಂತೆ ರಾಜ್ಯದಲ್ಲೇ ದೊಡ್ಡ ಜವಾಬ್ದಾರಿಗಳು ಬರಬಹುದು. ನಾನು ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಹೇಳುತ್ತೇನೆ ಪ್ರತಾಪ ಸಿಂಹ ರಾಜ್ಯ ರಾಜಕಾರಣಕ್ಕೆ ಸೇರಬಹುದು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ನೋಡಿದ್ದೇನೆ. ಅವರಿಗೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ ಎಂದು ನಾನು ಭರವಸೆ ಕೊಡುತ್ತೇನೆ ಎಂದಿದ್ದ ವಿಜಯೇಂದ್ರ. ಇದೀಗ ರಾಜ್ಯ ರಾಜಕಾರಣಕ್ಕೆ ಪ್ರತಾಪ ಸಿಂಹ ಎಂಟ್ರಿ ಕೊಡುತ್ತಿರುವುದು ಯುವ ಕಾರ್ಯಕರ್ತರಿಗೆ ಹೊಸ ಉತ್ಸಾಹ ಬಂದಂತಾಗಿದೆ.