ಆಶಾ ಕಾರ್ಯಕರ್ತೆಯರ ಹೋರಟಕ್ಕೆ ಮತ್ತಷ್ಟು ಬಲ; ಪ್ರತಿಭಟನೆಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ನೀಡಿ ಸಿಎಂಗೆ ಪತ್ರ

Published : Nov 22, 2026, 11:12 AM IST
Sumallatha Ambareesh support Asha warkers Protest

ಸಾರಾಂಶ

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಆಶಾ ಕಾರ್ಯಕರ್ತೆಯರ ಬೆಂಬಲಕ್ಕೆ ನಿಂತಿದ್ದು, ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

ಬೆಂಗಳೂರು(ನ.22): ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಇಂದಿ ಆರನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಕರ್ತೆಯರೊಂದಿಗೆ ರಾಜ್ಯ ಸರ್ಕಾರ ಶನಿವಾರ ನಡೆಸಿದ ಮಾತುಕತೆಯೂ ವಿಫಲಗೊಂಡ ಹಿನ್ನೆಲೆ ಇಂದು ಕೂಡ ಕೂಡ ಹೋರಾಟ ಮುಂದುವರಿಯಲಿದೆ.

ಆಶಾ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ:

ಈ ನಡುವೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಕೂಡ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೇವಲ ಹೇಳಿಕೆಯ ಬೆಂಬಲ ನೀಡದೆ ಸ್ವತಃ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಕೋರಿ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: 6ನೇ ದಿನಕ್ಕೆ ಕಾಲಿಟ್ಟ ಆಶಾ ಹೋರಾಟ; ಅಣ್ಣನಾಗಿ ಸಿಎಂ ಮಾಡಿದ ಮನವಿಗೆ ಡೋಂಟ್‌ಕೇರ್!

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲೇನಿದೆ?

ಕಳೆದ ಆರು ದಿನಗಳಿಂದ ಕೊರೆಯುವ ಚಳಿಯಲ್ಲಿ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದರು ಅವರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆ ಮಾಜಿ ಸಂಸದೆ ಸುಮಲತಾ ಆಶಾ ಕಾರ್ಯಕರ್ತೆಯರ ಬೆಂಬಲಕ್ಕೆ ನಿಂತಿದ್ದಾರೆ. ಸಿಎಂ ಡಿಕೆ ಶಿವಕುಮಾರ ಅವರಿಗೆ ಬರೆದ ಪತ್ರದಲ್ಲಿ ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳ ಕುರಿತು ಗಮನ ಸೆಳೆದಿದ್ದಾರೆ.

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಬೇಡಿಕೆಯನ್ನು ಮುಖ್ಯಮಂತ್ರಿಗಳು ಮಾನವೀಯ ದೃಷ್ಟಿಯಿಂದ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಐದು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು ಈ ಪ್ರತಿಭಟನೆ ಬಗ್ಗೆ ತುರ್ತು ಗಮನ ಸೆಳೆಯಲು ಈ ಪತ್ರ ಬರೆಯುತ್ತಿದ್ದೇನೆ. ಹಲವು ದಿನಗಳಿಂದ ಮಹಿಳೆಯರು ಮಕ್ಕಳೊಂದಿಗೆ ಬೀದಿಯಲ್ಲಿ ಹಗಲು-ರಾತ್ರಿ ಬಿಸಿಲು-ಚಳಿ ಎನ್ನದೆ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯ ಪರಿಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿದೆ. ರಾತ್ರಿ ತೀವ್ರ ಚಳಿಯಲ್ಲೂ ಕಳೆದ ಆರು ದಿನಗಳಿಂದ ಮಕ್ಕಳೊಂದಿಗೆ ಮಲಗುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ವೈಯಕ್ತಿಕವಾಗಿ ಮಧ್ಯಪ್ರವೇಶಿಸಬೇಕು. ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸಿಎಂ ಖುದ್ದಾಗಿ ಮಾತುಕತೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಸಂಘಗಳಿಗೆ 1 ಸಾವಿರ ಕೋಟಿ ಕೊಡೋಕೆ ದುಡ್ಡಿದೆ, ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಿಸೋಕೆ ಇಲ್ಲವಾ?

ಆಶಾ ಕಾರ್ಯಕರ್ತೆಯ ಗೌರವಧನ ₹15,000ಕ್ಕೆ ಹೆಚ್ಚಿಸಿ

ಇಂದಿನ ಬೆಲೆ ಏರಿಕೆ ನಡುವೆ ಕುಟುಂಬ ನಿರ್ವಹಣೆಗೆ 5000 ರೂಪಾಯಿ ಗೌರವಧನ ಯಾವುದಕ್ಕೆ ಸಾಲುತ್ತೆ? ಹೀಗಾಗಿ ಆಶಾಗಳ ಗೌರವಧನದ ಬೇಡಿಕೆಯನ್ನ ಮಾನವೀಯ ದೃಷ್ಟಿಯಿಂದ ಪರಿಗಣಿಸಿ ₹15,000ಕ್ಕೆ ಹೆಚ್ಚಿಸುವ ಮೂಲಕ ಶೀಘ್ರ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಕಳೆದ ಐದು ದಿನಗಳಿಂದ ಹೋರಾಟ ನಡೆಸುತ್ತಿರುವುದರಿಂದ ಇನ್ನು ತಡ ಮಾಡದೆ ಸಮಯೋಚಿತ ಮಧ್ಯಪ್ರವೇಶ ಮಾಡಿ ಈ ಮಹಿಳೆಯರ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಬೇಕು, ತಮ್ಮ ಸಮಯೋಚಿತ ಮಧ್ಯಪ್ರವೇಶದಿಂದ ಈ ಮಹಿಳೆಯರ ಹೋರಾಟಕ್ಕೆ ಸಕಾರಾತ್ಮಕ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಆಶಾ ಕಾರ್ಯಕರ್ತೆಯರು ತಮ್ಮೆಲ್ಲ ಬೇಡಿಕೆಗಳು ಈಡೇರುವಂತಾಗಲಿ ಗೌರವಯುತವಾಗಿ ಮನೆಗಳಿಗೆ ಮರಳುವಂತಾಗಲಿ ಎಂದು ಆಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾಡುಗೊಲ್ಲ, ಹಟ್ಟಿಗೊಲ್ಲ ಎಸ್ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ!
Karnataka Latest News Live: ಆಶಾ ಕಾರ್ಯಕರ್ತೆಯರ ಹೋರಟಕ್ಕೆ ಮತ್ತಷ್ಟು ಬಲ; ಪ್ರತಿಭಟನೆಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ನೀಡಿ ಸಿಎಂಗೆ ಪತ್ರ