ದೇವೇಗೌಡರಿಗೆ ಕೋವಿಡ್‌ ನೆಗೆಟಿವ್‌ : ಎದೆಯಲ್ಲಿ ಸಮಸ್ಯೆ

Kannadaprabha News   | Asianet News
Published : Apr 01, 2021, 10:39 AM IST
ದೇವೇಗೌಡರಿಗೆ ಕೋವಿಡ್‌ ನೆಗೆಟಿವ್‌  : ಎದೆಯಲ್ಲಿ ಸಮಸ್ಯೆ

ಸಾರಾಂಶ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕೊರೋನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಪತ್ನಿ ಚೆನ್ನಮ್ಮ ಅವರ ವರದಿ ಪಾಸಿಟಿವ್ ಇದೆ. ದೇವೇಗೌಡರಿಗೆ ಎದೆಯಲ್ಲಿ ಸಣ್ಣ ಸಮಸ್ಯೆ ಕಾಣಿಸಿಕೊಂಡಿದೆ. 

ಬೆಂಗಳೂರು (ಏ.01):  ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ಅವರಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು, ನಗರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ವೇಳೆ ದೇವೇಗೌಡ ಅವರಿಗೆ ಎದೆಯಲ್ಲಿ ಸಣ್ಣ ಪ್ರಮಾಣದ ಸಮಸ್ಯೆ ಕಾಣಿಸಿಕೊಂಡ ಕಾರಣ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚೆಗೆ ಚನ್ನಮ್ಮ ಅವರು ಹಾಸನ ಹೊಳೆನರಸೀಪುರದ ನರಸಿಂಹಸ್ವಾಮಿ ಜಾತ್ರೆಗೆ ತೆರಳಿದ್ದರು. ಕಳೆದ ಕೆಲ ದಿನದಿಂದ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಬುಧವಾರ ಬೆಳಗ್ಗೆ ದೇವೇಗೌಡ ಮತ್ತು ಚನ್ನಮ್ಮ ಅವರು ಮನೆಯಲ್ಲಿಯೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡರು.

ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ, ಪತ್ನಿ ಚೆನ್ನಮ್ಮಗೆ ಕೊರೋನಾ! ...

ಈ ವೇಳೆ ಇಬ್ಬರಿಗೂ ಕೋವಿಡ್‌ ವರದಿಯು ಪಾಸಿಟಿವ್‌ ಎಂದು ಬಂದಿದೆ. ತಕ್ಷಣ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲಾಯಿತು. ಆರ್‌ಟಿಪಿಸಿಆರ್‌ ಪರೀಕ್ಷೆ ಮತ್ತು ಸಿಟಿ ಸ್ಕ್ಯಾನ್‌ ಮಾಡಲಾಯಿತು. ಆಗ ದೇವೇಗೌಡರ ವರದಿ ನೆಗೆಟಿವ್‌ ಬಂದಿದ್ದು, ಎದೆಯಲ್ಲಿ ಸಣ್ಣ ಪ್ರಮಾಣದ ಸಮಸ್ಯೆ ಕಾಣಿಸಿದೆ.

 ನಿಖರವಾದ ಸಮಸ್ಯೆ ಏನೆಂಬುದನ್ನು ತಜ್ಞ ವೈದ್ಯರು ಪರೀಕ್ಷಿಸುತ್ತಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಚನ್ನಮ್ಮ ಅವರ ಕೋವಿಡ್‌ ವರದಿ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ದೇವೇಗೌಡ ಅವರಿಗೆ 3-4 ದಿನದ ಬಳಿಕ ಮತ್ತೊಮ್ಮೆ ಕೋವಿಡ್‌ ಪರೀಕ್ಷೆ   ಮಾಡಲಾಗುತ್ತದೆ. ಅದರ ವರದಿಯ ಬಳಿಕ ಮುಂದಿನ ಚಿಕಿತ್ಸೆಯ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ