ಮುಡಾದಿಂದ ಮಾಜಿ ಪ್ರಧಾನಿ ದೇವೇಗೌಡರು ಎಷ್ಟು ಸೈಟು ಪಡೆದಿದ್ದಾರೆ ಪಟ್ಟಿ ಕೊಡ್ಲಾ? ಎಂದ ಸಿಎಂ ಸಿದ್ದರಾಮಯ್ಯ

By Sathish Kumar KH  |  First Published Jul 29, 2024, 1:05 PM IST

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರಿಗೆ ಎಷ್ಟು ಸೈಟ್ ಹೋಗಿದೆ ಗೊತ್ತಿದ್ಯಾ. ಅವರ ಕುಟುಂಬಕ್ಕೆ ಎಷ್ಟು ಸೈಟ್ ಬರೆಸಿಕೊಂಡಿದ್ದಾರೆ ಎಂಬ ಪಟ್ಟಿಯನ್ನು ಕೊಡ್ಲಾ..?


ಮೈಸೂರು (ಜು.29): ಮೈಸೂರಿನ ಮುಡಾ ಹಗರಣ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ. ಇಲ್ಲದ ಹಗರಣವನ್ನ ಬಿಜೆಪಿ ಸೃಷ್ಟಿ ಮಾಡುತ್ತಿದೆ. ಇನ್ನು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರಿಗೆ ಎಷ್ಟು ಸೈಟ್ ಹೋಗಿದೆ ಗೊತ್ತಿದ್ಯಾ. ಅವರ ಕುಟುಂಬಕ್ಕೆ ಎಷ್ಟು ಸೈಟ್ ಬರೆಸಿಕೊಂಡಿದ್ದಾರೆ ಎಂಬ ಪಟ್ಟಿಯನ್ನು ಕೊಡ್ಲಾ..? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರಿಗೆ ಎಷ್ಟು ಸೈಟ್ ಹೋಗಿದೆ ಗೊತ್ತಿದ್ಯಾ.? ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟ್ ಬರೆಸಿಕೊಂಡಿದ್ದಾರೇ ಪಟ್ಟಿ ಕೊಡ್ಲಾ..? ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 40 ವರ್ಷದ ಹಿಂದೆ ಮುಡಾ ಸೈಟ್ ಪಡೆದಿದ್ದಾರೆ. ಅದರ ಸ್ವಾಧೀನ ಪತ್ರವೂ ಪಡೆದುಕೊಂಡಿದ್ದಾರೆ. ಆದರೆ, ಈಗ ಇಲ್ಲ ಎಂದು ಸುಳ್ಳು ಹೇಳಿದರೇ ಹೇಗೆ‌? ನಾನು ಸ್ವಾಧೀನ ಪತ್ರ ಪಡೆದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಿರುವುದು ಸುಳ್ಳು. ಇವರೆಲ್ಲಾ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದರು.

Latest Videos

undefined

ಮುಡಾ ಹಗರಣದಿಂದ ಸಿಎಂ ಪಾರಾಗಲು ದೇಸಾಯಿ ಆಯೋಗ ರಚನೆ: ಎಚ್.ಡಿ.ಕುಮಾರಸ್ವಾಮಿ

ಇನ್ನು  ಮುಡಾ ಹಗರಣ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ. ಇಲ್ಲದ ಹಗರಣವನ್ನ ಬಿಜೆಪಿ ಸೃಷ್ಟಿ ಮಾಡುತ್ತಿದೆ. ಬಿಜೆಪಿವರಿಗೆ ಯಾವ ಐಡಿಯಾಲಾಜಿ ಇಲ್ಲ. ಬಿಜೆಪಿ ಯಾವತ್ತು ನ್ಯಾಯಪರವಾಗಿಲ್ಲ. ಮುಡಾ ಹಗರಣವನ್ನ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇನೆ. ಇದಕ್ಕಿಂತ ಇನ್ನೇನು ಬೇಕು ಹೇಳಿ. ನ್ಯಾಯಾಂಗ ತನಿಖೆಯನ್ನ ಕೇಂದ್ರ ಸಚಿವರು ಅನುಮಾನದಿಂದ ನೋಡಿದರೇ ಅದರಲ್ಲಿ ಅರ್ಥ ಇದ್ಯಾ.? ಇವರ ಅವಧಿಯಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಗೊತ್ತಾ. ಒಂದು ಪ್ರಕರಣವನ್ನಾದರೂ ನ್ಯಾಯಾಂಗ ತನಿಖೆ ಮಾಡಿಸಿದ್ದಾರಾ. ಕೋವಿಡ್ ಸಮಯದಲ್ಲಿ ನಾಲ್ಕು ಸಾವಿರ ಕೋಟಿ ನುಂಗಿದರು. ಅದನ್ನ ತನಿಖೆ ಮಾಡಿದ್ರಾ? ನಾನು ಬಂದ ಮೇಲೆ ಏಳೆಂಟು ಹಗರಣ ಸಿಬಿಐಗೆ ಕೊಟ್ಟಿದ್ದೇನೆ. ಇವರ ಅವಧಿಯಲ್ಲಿ ಒಂದಾದ್ರು ಸಿಬಿಐಗೆ ಕೊಟ್ಟಿದ್ದಾರಾ.? ಸಿಬಿಐನ್ನ ಚೋರ್ ಬಜಾವ್ ಸಂಸ್ಥೆ ಎನ್ನುತ್ತಿದ್ದ ಬಿಜೆಪಿ ಈಗ ಸಿಬಿಐ ಸಿಬಿಐ ಎಂದು ಬಾಯಿ ಬಡಿಯುತ್ತಿದೆ ಎಂದು ಟೀಕೆ ಮಾಡಿದರು.

ಮುಡಾ ಹಗರಣ ಅರೊಪದ ವಿಚಾರದಲ್ಲಿ ನನಗೆ ಯಾವ ಬೇಸರವೂ ಆಗಿಲ್ಲ. ತಪ್ಪೇ ಮಾಡಿಲ್ಲ ಎನ್ನುವುದಾದರೇ ಬೇಸರ ಏಕೆ ಆಗುತ್ತದೆ. 40 ವರ್ಷದ ರಾಜಕಾರಣದಲ್ಲಿ ನನ್ನ ಮೇಲೆ ಇಂತಹ ಆರೋಪ ಪ್ರಕರಣ ಬಹಳ ನಡೆದವು. ಇದನ್ನ ರಾಜಕೀಯವಾಗಿ ಹೆದರಿಸುತ್ತೇನೆ. ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ. ಪಾದಯಾತ್ರೆ ಮಾಡುವುದಾರೇ ಮಾಡಲಿ. ಅದನ್ನ ರಾಜಕೀಯವಾಗಿ ಹೆದರಿಸಲು ನಾವು ಪಾದಯಾತ್ರೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಮನಗರ ಜಿಲ್ಲೆ ಹೆಸರು ಮರು ಸ್ಥಾಪನೆ ಮಾಡೇ ಮಾಡ್ತೀವಿ; ಡಿಕೆಶಿಗೆ ಸವಾಲೆಸೆದ ನಿಖಿಲ್ ಕುಮಾರಸ್ವಾಮಿ

ಮೈಸೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ಸಿದ್ದರಾಮಯ್ಯ ಕಾಲ್ಗುಣ ಸರಿ ಇಲ್ಲ ಅನ್ನುತ್ತಿದ್ದರು. ಅವರು ಬಂದರೇ ಮಳೆ ಬರಲ್ಲ ಎನ್ನುತ್ತಿದ್ದರು‌. ಈಗ ಏನಾಗಿದೆ ನೋಡಿ. ಎಲ್ಲಾ ಜಲಾಶಯಗಳು ಭರ್ತಿಯಾಗಿದೆ. ತಮಿಳುನಾಡಿಗೆ ಅಗತ್ಯಗಿಂತಲೂ ಹೆಚ್ಚು ನೀರು ಹೋಗಿದೆ. ತನಿಳುನಾಡು ಕರ್ನಾಟಕ ಇಬ್ಬರು ಸಂತೋಷವಾಗಿದ್ದಾರೆ. ಎರೆಡು ರಾಜ್ಯಗಳಲ್ಲಿ ಕೆರೆ ಕಟ್ಟೆ ತುಂಬಿವೆ‌. ಹೀಗಾಗಿ ಇಂದು ಭಾಗಿನ ಅರ್ಪಣೆ ಮಾಡುತ್ತಿದ್ದೇವೆ‌. ಶುಭಕಾರ್ಯದ ವೇಳೆ ರಾಜಕೀಯ ಮಾತನಾಡಲ್ಲ‌‌ ಎಂದು ಹೇಳಿದರು.

click me!