HD Chennamma passes away : ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

Published : Jul 18, 2026, 05:28 PM IST
HD Chennamma

ಸಾರಾಂಶ

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ಸಂಜೆ 4 ಗಂಟೆಗೆ ನಿಧನರಾಗಿದ್ದಾರೆ.

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ಸಂಜೆ 4 ಗಂಟೆಗೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಜುಲೈ 15ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚೆನ್ನಮ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪುತ್ರರಾದ ಮಾಜಿ ಸಚಿವ ಹೆಚ್‌ಡಿ ರೇವಣ್ಣ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ದೌಡಾಯಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಸಹ ಭೇಟಿ ನೀಡಿ ಚೆನ್ನಮ್ಮಾ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ವರ್ಷದಿಂದ ಆರೋಗ್ಯದಲ್ಲಿ ಸಣ್ಣಪುಟ್ಟ ವ್ಯತ್ಯಾಸ

ಕಳೆದ ಒಂದು ವರ್ಷದಿಂದ ಚೆನ್ನಮ್ಮ ಅವರ ಆರೋಗ್ಯದಲ್ಲಿ ಸಣ್ಣ ಪ್ರಮಾಣದ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿದ್ದವು. ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸುಮಾರು 25 ದಿನ ಚಿಕಿತ್ಸೆ ಪಡೆದುಕೊಂಡು ಮನೆಗೆ ಹಿಂದಿರುಗಿದ್ದರು. ಜುಲೈ 15ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಚ್‌ಡಿ ದೇವೇಗೌಡ ಮತ್ತು ಚೆನ್ನಮ್ಮಾ ದಂಪತಿಗೆ ಆರು ಮಕ್ಕಳಿದ್ದು, ರಾಜಕೀಯ-ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಹೆಚ್‌ಡಿ ರೇವಣ್ಣ (ಹಿರಿಯ ಮಗ) ಹೆಚ್‌ಡಿ ಕುಮಾರಸ್ವಾಮಿ (ಎರಡನೇ ಮಗ) ಕೇಂದ್ರ ಸಚಿವ ಹೆಚ್‌ಡಿ ಬಾಲಕೃಷ್ಣ (ಮೂರನೇ ಮಗ) ಉದ್ಯಮಿ ಹೆಚ್‌ಡಿ ರಮೇಶ್ (ನಾಲ್ಕನೇ ಮಗ) ವೈದ್ಯಕೀಯ ವಿಭಾಗ ಹೆಚ್‌ಡಿ ಅನುಸೂಯಾ (ಮಗಳು) ಹೆಚ್‌ಡಿ ಶೈಲಜಾ (ಮಗಳು)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೋನಮ್ ವಾಂಗ್ಚುಕ್‌ ಬೆಂಬಲಿಸಿ ಬೆಂವಿವಿ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ
ಕರ್ನಾಟಕ ಲೋಕಾಯುಕ್ತ ನೇಮಕಾತಿ 2026: ಕ್ಲರ್ಕ್, ಟೈಪಿಸ್ಟ್ ಹುದ್ದೆ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ!