
ಬೆಂಗಳೂರು (ಜು.15): ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ರಾತ್ರಿ 10 ಗಂಟೆಯ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ಇಂದು ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ, ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚೆನ್ನಮ್ಮ ಅವರ ಆರೋಗ್ಯವನ್ನು ಪರೀಕ್ಷಿಸಿರುವ ವೈದ್ಯರು, ಮುಂದಿನ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ವೈದ್ಯಕೀಯ ಮೂಲಗಳು ಸ್ಪಷ್ಟಪಡಿಸಿವೆ. ಮುಂಜಾಗ್ರತಾ ಕ್ರಮವಾಗಿ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅವರ ಪುತ್ರ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ