ರಾಜ್ಯಾದ್ಯಂತ ಲಾಕ್‌ಡೌನ್‌ಗೆ ದೇವೇಗೌಡರ ಆಗ್ರಹ

By Suvarna News  |  First Published Jul 13, 2020, 11:08 AM IST

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಸರ್ಕಾರದ ಈ ನಿಲುವನ್ನು ಸ್ವಾಗತಿಸುತ್ತಲೇ ರಾಜ್ಯಾದ್ಯಂತ ಲಾಕ್‌ಡೌನ್ ಮಾಡಲು ಆಗ್ರಹಿಸಿದ್ದಾರೆ. ಇದೇ ವೇಳೆ ಜೆಡಿಎಸ್ ಹಿರಿಯ ನಾಯಕ ಸರ್ಕಾರಕ್ಕೆ ಎಚ್ಚರಿಕೆಯ ಜತೆಗೆ ಕಿವಿ ಮಾತುಗಳನ್ನು ಆಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ಬೆಂಗಳೂರು(ಜು.13): ರಾಜ್ಯಾದ್ಯಂತ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದು ರಾಜ್ಯದ ಜನತೆಯನ್ನು ಆತಂಕಕ್ಕೆ ಈಡು ಮಾಡಿದೆ. ಇನ್ನು ಬೆಂಗಳೂರಿನಲ್ಲಂತೂ ಮಿಂಚಿನ ವೇಗದಲ್ಲಿ ಸೋಂಕು ಹಬ್ಬಲಾರಂಭಿಸಿದೆ. ಇಡೀ ರಾಜ್ಯದ್ದೇ ಒಂದು ಲೆಕ್ಕಾ ಎಂದಾದರೆ, ಬೆಂಗಳೂರಿನದ್ದು ಒಂದು ಲೆಕ್ಕಾ ಎನ್ನುವಂತಾಗಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಜುಲೈ 14ರ ರಾತ್ರಿ ಎಂಟು ಗಂಟೆಯಿಂದ ಮುಂದಿನ 9 ದಿನಗಳ ಕಾಲ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಲಾಕ್‌ಡೌನ್ ಜಾರಿಗೊಳಿಸಿದೆ.

"

Latest Videos

undefined

ಇದೀಗ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಸರ್ಕಾರದ ಈ ನಿಲುವನ್ನು ಸ್ವಾಗತಿಸುತ್ತಲೇ ರಾಜ್ಯಾದ್ಯಂತ ಲಾಕ್‌ಡೌನ್ ಮಾಡಲು ಆಗ್ರಹಿಸಿದ್ದಾರೆ. ಇದೇ ವೇಳೆ ಜೆಡಿಎಸ್ ಹಿರಿಯ ನಾಯಕ ಸರ್ಕಾರಕ್ಕೆ ಎಚ್ಚರಿಕೆಯ ಜತೆಗೆ ಕಿವಿ ಮಾತುಗಳನ್ನು ಆಡಿದ್ದಾರೆ.  

ರಾಜ್ಯದಲ್ಲಿ  ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ರಾಜ್ಯ ಸರ್ಕಾರವನ್ನು ನಾನು ಆಗ್ರಹಿಸುತ್ತೀನಿ.

ಬಯೋಕಾನ್‌ ಕೊರೋನಾ ಔಷಧಕ್ಕೆ 32 ಸಾವಿರ, ಒಬ್ಬ ರೋಗಿಗೆ 4 ಇಂಜೆಕ್ಷನ್ 

ರಾಜ್ಯದ ಜನತೆಯ ಜೊತೆಗೆ ನಮ್ಮ ಇಡಿ ದೇಶದ ಜನತೆಗೆ ನಾನು ಮನವಿ ಮಾಡಿಕೊಳ್ಳುತ್ತೀನಿ ನಮಗೆ ಆರೋಗ್ಯವೇ ಭಾಗ್ಯ ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ದಯವಿಟ್ಟು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈ ಅನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ, ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ 

ಇನ್ನೊಂದು ಪ್ರಮುಖವಾದ ವಿಷಯ ಈ ಮಹಾಮಾರಿ ವೈರಸ್ಸನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜುಗಳನ್ನು ಘೋಷಿಸಿದೆ ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರುಗಳು ಆಪಾದಿಸುತ್ತಿದ್ದಾರೆ ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆಮಾಡಲಿ ಈಗ ನಮಗೆ ಜನತೆಯ ಆರೋಗ್ಯ ಮುಖ್ಯ, ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ ಸರ್ಕಾರವು ಸಹ ಇದರ ನಿಟ್ಟಿನಲ್ಲಿ ಕೆಲಸ ಮಾಡಬೇಕು ನಾವೆಲ್ಲ ಜೊತೆಗಿದ್ದೀವಿ, ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ, ದಯವಿಟ್ಟು ಇನ್ನು ಮುಂದಾದರು ಎಚ್ಚೆತ್ತು ಕೆಲಸ ಮಾಡಿ ಎಂದು ಮನವಿ ಮಾಡುತ್ತೀನಿ ಎಂದು ಸರ್ಕಾರಕ್ಕೆ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
 

click me!