African cheetahs: ಬನ್ನೇರುಘಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳು ಎಂಟ್ರಿ, ಯಾವಾಗ ನೋಡಬಹುದು? ನಾಲ್ಕು ದಿನ ಕ್ವಾರಂಟೈನ್‌ನಲ್ಲಿಡೋದ್ಯಾಕೆ ಗೊತ್ತಾ?

Kannadaprabha News   | Kannada Prabha
Published : Apr 19, 2026, 05:52 AM IST
Four African Cheetahs arrive at Bannerghatta bengaluru Do you know why they are kept in quarantine for few days

ಸಾರಾಂಶ

ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳನ್ನು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ತರಲಾಗಿದೆ. ಕ್ವಾರಂಟೈನ್‌ ಅವಧಿ ಮುಗಿದ ನಂತರ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿವೆ. ಈ ಮೂಲಕ ಬನ್ನೇರುಘಟ್ಟ ಮೃಗಾಲಯವು ತನ್ನ ಇತಿಹಾಸದಲ್ಲಿ ಮೊದಲ ಬಾರಿಗೆ ಚೀತಾಗಳಿಗೆ ಆಶ್ರಯ ನೀಡಿದಂತಾಗಿದೆ.

ಬೆಂಗಳೂರು (ಏ.19): ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ಕರೆತರಲಾಗುತ್ತಿರುವ ನಾಲ್ಕು ಚೀತಾಗಳು ಶುಕ್ರವಾರ ಮಧ್ಯರಾತ್ರಿ 1 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಆಗಮಿಸಿದ್ದು, ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವುಗಳನ್ನು ಸ್ವೀಕರಿಸಿ ಬನ್ನೇರಘಟ್ಟ ಮೃಗಾಲಯದ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ತನ್ಮೂಲಕ ಬನ್ನೇರುಘಟ್ಟ ಮೃಗಾಲಯ ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಚೀತಾಗಳಿಗೆ ಆಶ್ರಯ ನೀಡುತ್ತಿದೆ. ವನ್ಯಜೀವಿ (ರಕ್ಷಣೆ) ಕಾಯ್ದೆ ಅಡಿ ನಿಯಂತ್ರಕ ಅನುಮತಿ ಮತ್ತು ಪ್ರಾಣಿ ಕ್ವಾರಂಟೈನ್‌ ಅಧಿಕಾರಿಗಳ ಅನುಮೋದನೆ ನಂತರ ನಾಲ್ಕು ಆಫ್ರಿಕನ್‌ ಚೀತಾಗಳನ್ನು ಅರಣ್ಯ ಇಲಾಖೆ ತರಿಸಿಕೊಂಡಿದೆ. ಅವುಗಳನ್ನು ಬನ್ನೇರುಘಟ್ಟ ಮೃಗಾಲಯದಲ್ಲಿರಿಸಿ ಚೀತಾ ಪ್ರಭೇದವನ್ನು ಜನರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಕೆಲದಿನ ಕ್ವಾರಂಟೈನ್‌ನಲ್ಲಿಡಲು ವ್ಯವಸ್ಥೆ:

ಚೀತಾಗಳು ದಕ್ಷಿಣ ಆಫ್ರಿಕಾದಿಂದ ಬಂದಿರುವ ಕಾರಣದಿಂದಾಗಿ ಅವುಗಳ ಆರೋಗ್ಯ ತಪಾಸಣೆ ನಡೆಸಿ ಬನ್ನೇರುಘಟ್ಟದ ಮೃಗಾಲಯದಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಈ ವೇಳೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮತ್ತು ನಿಗದಿತ ಆಹಾರ ನೀಡಲಾಗುತ್ತದೆ. ಕ್ವಾರಂಟೈನ್‌ ಅವಧಿ ಮುಗಿದ ನಂತರ ಚೀತಾಗಳ ಆರೋಗ್ಯ ಆಧರಿಸಿ ಸಾರ್ವಜನಿಕ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ. ಚೀತಾಗಳ ಆಗಮನದ ಕುರಿತು ಪ್ರತಿಕ್ರಿಯಿಸಿರುವ ಈಶ್ವರ್‌ ಖಂಡ್ರೆ, ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ ಚೀತಾಗಳು ಇಲ್ಲಿನ ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳುವಂತೆ ಕ್ವಾರಂಟೈನ್‌ಗೆ ಸೂಚಿಸಲಾಗಿದೆ. ಆರೋಗ್ಯ ಸಮಸ್ಯೆ ಎದುರಾಗದಂತೆ ಸೂಕ್ತ ನಿಗಾವಹಿಸುವಂತೆ ನಿರ್ದೇಶಿಸಲಾಗಿದೆ.

ಕರ್ನಾಟಕದಲ್ಲಿದ್ದವು ಚೀತಾಗಳು:

ಒಂದು ಕಾಲದಲ್ಲಿ ಕರ್ನಾಟಕದ ಕಾಡಿನಲ್ಲೇ ಸಿವಂಗಿ ಎಂದು ಕರೆಸಿಕೊಳ್ಳುವ ಚೀತಾಗಳಿದ್ದವು. ಹಿಂದೆ ಸಿವಂಗಿ ಎಂದು ಕರೆಯಲ್ಪಡುತ್ತಿದ್ದ ಚೀತಾಗಳು (ಏಷ್ಯಾಟಿಕ್ ಚೀತಾ) ಕರ್ನಾಟಕದ ಅರಣ್ಯ ಪ್ರದೇಶದಲ್ಲೇ ಕಾಣಿಸಿಕೊಳ್ಳುತ್ತಿದ್ದವು. ಆದರೆ, ಬೇಟೆ, ಆವಾಸ ಸ್ಥಾನಗಳ ಅವನತಿಯಿಂದಾಗಿ ಅವು ಕಣ್ಮರೆಯಾದವು. ಸಿವಂಗಿಗಳಲ್ಲಿ ಎರಡು ಪ್ರಬೇಧಗಳಿದ್ದು, ಭಾರತದಲ್ಲಿದ್ದ ಸಿವಂಗಿಯನ್ನು ಏಷ್ಯಾಟಿಕ್ ಚೀತಾಗಳೆಂದು ಹಾಗೂ ಆಫ್ರಿಕಾದಲ್ಲಿ ಆಫ್ರಿಕನ್ ಚೀತಾ ಎಂದು ಗುರುತಿಸಲಾಗುತ್ತಿದೆ.

ಅವುಗಳನ್ನು ಈಗ ಸಾರ್ವಜನಿಕರಿಗೆ ಪರಿಚಯಿಸುವ ದೃಷ್ಟಿಯಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ತರಿಸಲಾಗಿದೆ. ಇಲ್ಲಿಗೆ ತರಲಾಗಿರುವ ಚೀತಾಗಳ ಸುರಕ್ಷತೆಗೆ ಆದ್ಯ ಗಮನ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರವಾನಗಿ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಂಕಷ್ಟ, ಭೂ ವ್ಯವಹಾರಕ್ಕೆ ಬಿದ್ದ ಬೀಗ! ಏನಿದು ಬಿಕ್ಕಟ್ಟು?
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಆಫ್ರಿಕಾದ 4 ಚೀತಾಗಳ ಆಗಮನ, 30 ದಿನ ಸೂಕ್ಷ್ಮ ನಿಗಾ