ಸುಳ್ವಾಡಿ ವಿಷ ದುರಂತ ಮಾಸುವ ಚಿತ್ರದುರ್ಗದಲ್ಲಿ ಮತ್ತೊಂದು ದುರಂತ!

Published : Aug 06, 2019, 12:30 PM IST
ಸುಳ್ವಾಡಿ ವಿಷ ದುರಂತ ಮಾಸುವ ಚಿತ್ರದುರ್ಗದಲ್ಲಿ ಮತ್ತೊಂದು ದುರಂತ!

ಸಾರಾಂಶ

ಸುಳ್ವಾಡಿ ವಿಷ ಪ್ರಸಾದ ದುರಮತ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ವಿಷವೂಟ ಸೇವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ[ಡಿ.21]: ಸುಳ್ವಾಡಿ ವಿಷ ಪ್ರಸಾದ ದುರಂತ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರೆ.

ಚಿತ್ರದುರ್ಗದ ಹಿರಿಯೂರು ತಾಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ಘಟನೆ ನಡೆದಿದ್ದು,ಮೃತರನ್ನು ಚಿತ್ತಪ್ಪ[80], ಶಶಿಧರ್[40], ಭಾಗ್ಯಮ್ಮ[35], ಹೇಮಲತಾ[35] ಎಂದು ಗುರುತಿಸಲಾಗಿದೆ. ಈ ಆಹಾರ ಸೇವಿಸಿದ ಇನ್ನೂ ನಾಲ್ವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ನಿನ್ನೆ ರಾತ್ರಿ ಜೋಳದ ಮುದ್ದಿ, ಕಾಳು ಸಾರು ಊಟ ಮಾಡಿದ್ದ ಚಿತ್ತಪ್ಪ ಕುಟುಂಬದ ಒಟ್ಟು 8 ಮಂದಿಗೆ ವಾಂತಿ ಭೇದಿಯಾಗಿದೆ. ಕೂಡಲೇ ಇವರೆಲ್ಲರನ್ನೂ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಾಕಲ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇನ್ನೂ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್