ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹7 ಕೋಟಿ ವಂಚನೆ ಆರೋಪ; ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ!

By Ravi Janekal  |  First Published Sep 13, 2023, 8:31 AM IST

ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇಲೆ ಹಿಂದುತ್ವದ ಹೋರಾಟಗಾರ್ತಿ ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 


ಉಡುಪಿ (ಸೆ.13): ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇಲೆ ಹಿಂದುತ್ವದ ಹೋರಾಟಗಾರ್ತಿ ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ ಬೆಂಗಳೂರು ಸಿಸಿಬಿ ಪೊಲೀಸರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದರು.

Latest Videos

undefined

ಪ್ರತಿಯೊಬ್ಬರೂ ರಾಷ್ಟ್ರೀಯತೆ ಅಳವಡಿಸಿಕೊಳ್ಳಿ- ಚೈತ್ರಾ ಕುಂದಾಪುರ

ಸಮಾಜಸೇವಕರಾಗಿ ಗುರುತಿಸಿಕೊಂಡಿರುವ ಬೈಂದೂರಿನ ಉದ್ಯಮಿ, ಬಿಲ್ಲವ ನಾಯಕ ಗೋವಿಂದಬಾಬು ಪೂಜಾರಿ. ಈ ಬಾರಿ ಚುನಾವಣೆ ಸ್ಪರ್ಧಾಕಾಂಕ್ಷಿಯಾಗಿದ್ದರು. ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಉದ್ಯಮಿ. ಇದೇ ಅವಕಾಶ ಬಳಸಿಕೊಂಡು ಉದ್ಯಮಿಗೆ ಬೈಂದೂರು ಟಿಕೆಟ್ ಪಕ್ಕಾ ಕೊಡಿಸುವುದಾಗಿ ನಂಬಿಸಿರುವ ಚೈತ್ರಾ ಕುಂದಾಪುರ ಮತ್ತವರ ತಂಡ. ಕೇಂದ್ರದ ನಾಯಕರು, ಆರೆಸ್ಸೆಸ್ ನಾಯಕರು ಎಂಬಂತೆ ನಾಲ್ಕೈದು ಜನರ ತಂಡದಿಂದ ಬೃಹನ್ನಾಟಕ ನಡೆಸಿ ಗಣ್ಯರ ಹೆಸರಲ್ಲಿ ಪಂಗನಾಮ ಹಾಕಿರುವ ಗ್ಯಾಂಗ್. ಟಿಕೆಟ್ ಕೊಡಿಸುವುದಾಗಿ ಹಂತಹಂತವಾಗಿ 7ಕೋಟಿ ರೂಪಾಯಿ ಪೀಕಿದ್ದಾರೆಂದು ಆರೋಪಿಸಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ.

ಸದ್ಯ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ, ಗಗನ್ ಕಡೂರು,  ಶ್ರೀಕಾಂತ ನಾಯಕ್, ಪ್ರಸಾದ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿರುವ ಪೊಲೀಸರು. ಹೆಚ್ಚಿನ ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿರೋ ಸಿಸಿಬಿ ಪೊಲಿಸರು. 

ಹಿಂದೂಗಳೆಲ್ಲ ಒಂದಾಗುವ ಕಾಲ ಬಂದಿದೆ: ಚೈತ್ರಾ ಕುಂದಾಪುರ

click me!