
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಫೆ. 28ರಿಂದ ಮಾ. 17ರವರೆಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ.
ರಾಜ್ಯದಲ್ಲಿ ಫೆ. 28ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗುತ್ತಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ಹಿಂದಿರುಗಲು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಜತೆಗೆ ಪರೀಕ್ಷಾ ಪ್ರವೇಶ ಪತ್ರದ ಆಧಾರದಲ್ಲಿ ನಿರ್ವಾಹಕರು ಪರೀಕ್ಷಾ ಕೇಂದ್ರದ ಸಮೀಪ ಕೋರಿಕೆಯ ನಿಲುಗಡೆ ನೀಡಬೇಕು ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ