
ಬೆಂಗಳೂರು(ಆ.26): 10 ಎಚ್‌ಪಿವರೆಗೆ ವಿದ್ಯುತ್ ಬಳಸುವ ಸಣ್ಣ ನೇಕಾರರ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್ ನೀಡುವ ಕುರಿತಂತೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 10 ಎಚ್‌ಪಿವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು ಈ ಭರವಸೆ ನೀಡಿದರು.
ಹೆಸ್ಕಾಂಗೆ ವಿವಿಧ ಇಲಾಖೆಯಿಂದ ₹885 ಕೋಟಿ ವಿದ್ಯುತ್ ಬಿಲ್ ಬಾಕಿ!
ಸಣ್ಣ ನೇಕಾರರ 10 ಎಚ್‌ಪಿವರೆಗಿನ ಮಗ್ಗಗಳಿಗೆ ಉಚಿತ ವಿದ್ಯುತ್ ನೀಡಬೇಕು ಎನ್ನುವ ಬೇಡಿಕೆ ಜೊತೆಗೆ 10 ಎಚ್‌ಪಿಗಿಂತ ಹೆಚ್ಚಿನ ವಿದ್ಯುತ್ ಬಳಸುವ ಮಗ್ಗಗಳ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಎರಡೂ ವಿಚಾರಗಳ ಬಗ್ಗೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಹಿಂದೆ ನೇಕಾರರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಭರವಸೆ ನೀಡಿದ್ದೆ. ಬಜೆಟ್‌ನಲ್ಲೂ ಘೋಷಿಸಲಾಗಿದೆ. ಇದರಿಂದ ಸಣ್ಣ ನೇಕಾರರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ