ಎಸ್ಸಿ ಎಸ್ಟಿ ಮಕ್ಕಳಿಗೆ ಉಚಿತ ‘ಕರ್ನಾಟಕ ದರ್ಶನ’ ಪ್ರವಾಸ

By Govindaraj SFirst Published Sep 17, 2022, 3:00 AM IST
Highlights

ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಎಸ್ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ‘ಕರ್ನಾಟಕ ದರ್ಶನ’ ಎಂಬ ಉಚಿತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲಾಗಿದೆ. 

ಬೆಂಗಳೂರು (ಸೆ.17): ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಎಸ್ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ‘ಕರ್ನಾಟಕ ದರ್ಶನ’ ಎಂಬ ಉಚಿತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲಾಗಿದೆ. ಕೋವಿಡ್‌ ಕಾರಣದಿಂದ ಕಳೆದ 2 ವರ್ಷದಿಂದ ಸ್ಥಗಿತಗೊಂಡಿದ್ದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಈ ವರ್ಷ ಮತ್ತೆ ಆರಂಭಿಸಲಾಗಿದೆ. ಪ್ರತಿ ತಾಲೂಕಿನಿಂದ 4 ದಿನಗಳ ಪ್ರವಾಸಕ್ಕೆ ಒಂದು ಬಸ್‌ ಸೌಲಭ್ಯ ಕಲ್ಪಿಸಲಾಗಿದ್ದು 50 ವಿದ್ಯಾರ್ಥಿಗಳು ಮತ್ತು ಅವರ ಜೊತೆ ಇಬ್ಬರು ಶಿಕ್ಷಕರು, ಅಧಿಕಾರಿಗಳು, ಡ್ರೈವರ್‌, ಗೈಡ್‌ ಸೇರಿ 55 ಜನರಿಗೆ ಅವಕಾಶ ನೀಡಲಾಗಿದೆ.

8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲ ಎಸ್ಸಿಎಸ್ಟಿಮಕ್ಕಳಿಗೂ ಈ ಉಚಿತ ಪ್ರವಾಸ ಯೋಜನೆ ಲಭ್ಯವಾಗುವುದಿಲ್ಲ. ಸೀಮಿತ ಸಂಖ್ಯೆಯ ಮಕ್ಕಳಿಗೆ ಮಾತ್ರ ಅವಕಾಶ ದೊರೆಯಲಿದೆ. ಪ್ರತಿ ಜಿಲ್ಲೆಯಲ್ಲಿ ಸುಮಾರು 200ರಿಂದ 300 ಮಕ್ಕಳನ್ನು ಮಾತ್ರ ಆಯ್ಕೆ ಮಾಡಲು ಸೂಚಿಸಲಾಗಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಪ್ರತಿಭಾ ಕಾರಂಜಿಯಲ್ಲಿ, ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಅವಕಾಶ ನೀಡಬೇಕು. 7ನೇ ತರಗತಿಯಲ್ಲಿ ಎ+, ಎ ಗ್ರೇಡ್‌ ಪಡೆದವರನ್ನು ಆಯ್ಕೆ ಪಟ್ಟಿಯಲ್ಲಿ ಪರಿಗಣಿಸಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕ್ರೈಸ್‌ ವಸತಿ ಶಾಲೆಗಳಲ್ಲಿ ಓದುತ್ತಿರುವ ಎಸ್ಸಿಎಸ್ಟಿಮಕ್ಕಳನ್ನೂ ಸೇರಿಸಿ ಪಟ್ಟಿತಯಾರಿಸಬೇಕೆಂದು ಸೂಚಿಸಲಾಗಿದೆ.

ಅ.2ರಂದು ಬದನವಾಳು ಗ್ರಾಮದಲ್ಲಿ ರಾಹುಲ್‌ಗಾಂಧಿ ನೇತೃತ್ವದಲ್ಲಿ ಗಾಂಧಿ ಜಯಂತಿ: ಡಿಕೆಶಿ

2019ರಲ್ಲೇ ವಿವಾದವಾಗಿತ್ತು: ಸರ್ಕಾರ ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಪ್ರವಾಸ ಕಾರ್ಯಕ್ರಮ ರೂಪಿಸಿರುವುದಕ್ಕೆ 2019ರಲ್ಲಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಎಚ್ಚೆತ್ತುಕೊಂಡಿದ್ದ ಸರ್ಕಾರ ಎಲ್ಲ ಸಮುದಾಯದ ಮಕ್ಕಳಿಗೂ ಕರ್ನಾಟಕ ದರ್ಶನ ಪ್ರವಾಸ ವಿಸ್ತರಿಸಿತ್ತು. ಮೂಲಗಳ ಪ್ರಕಾರ, ಬೆಂಗಳೂರು ನಗರದಿಂದ 361, ಬೆಂ.ಗ್ರಾಮಾಂತರ 100, ರಾಮನಗರ 198, ಚಿತ್ರದುರ್ಗ 332, ದಾವಣಗೆರೆ 215, ಕೋಲಾರ 253, ಚಿಕ್ಕಬಳ್ಳಾಪುರ 367, ತುಮಕೂರು 416 ಎಸ್ಸಿಎಸ್ಟಿಮಕ್ಕಳ ಆಯ್ಕೆಗೆ ಸೂಚಿಸಲಾಗಿದೆ. ಇದೇ ರೀತಿ ಇತರೆ ಜಿಲ್ಲೆಗಳಲ್ಲೂ ಮಕ್ಕಳ ಆಯ್ಕೆಗೆ ಅಲ್ಲಿನ ಡಿಡಿಪಿಐಗಳಿಗೆ ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ನ್ಯಾ. ನಾಗಮೋಹನದಾಸ್‌ ವರದಿ ಜಾರಿಗೆ ಆಗ್ರಹ: ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ ವರದಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಶಾಸಕ ಆರ್‌. ಬಸನಗೌಡ ತುರ್ವಿಹಾಳ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಅವರಿಗೆ ಎಸ್ಸಿ, ಎಸ್ಟಿಮೀಸಲಾತಿ ಹೋರಾಟ ಸಮಿತಿ ಮಸ್ಕಿ ಘಟಕದ ವತಿಯಿಂದ ಶನಿವಾರ ಮನವಿ ಸಲ್ಲಿಸಿ ಆಗ್ರಹಿಸಿದರು.

ಭಟ್ಕಳದಲ್ಲಿ ಭುಗಿಲೆದ್ದ ದೇವಸ್ಥಾನ ಮಹಾದ್ವಾರ V/s ಟಿಪ್ಪು ಗೇಟ್ ನಿರ್ಮಾಣ ವಿವಾದ

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನ ಪ್ರಿಡಮ್‌ ಪಾರ್ಕ್ನಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ 213 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. 2011ರ ಜನಗಣತಿ ಪ್ರಕಾರ ಪರಿಶಿಷ್ಟಜಾತಿಗೆ ಶೇ.17.15 ಹಾಗೂ ಪರಿಶಿಷ್ಟಪಂಗಡಕ್ಕೆ ಶೇ.7.5ರಷ್ಟುಮೀಸಲಾತಿ ಹೆಚ್ಚಳವಾಗಬೇಕು. ಆದರೆ, ಇದುವರೆಗೂ ಸರ್ಕಾರ ಮೀಸಲಾತಿ ಹೆಚ್ಚಿಸಿ ನ್ಯಾಯ ಕೊಡುವಲ್ಲಿ ವಿಳಂಭ ಮಾಡುತ್ತಿದೆ. ಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಹಾಗೂ ಸಂಪುಟದ ಸದಸ್ಯರ ಮೇಲೆ ಒತ್ತಡ ಹಾಕುವ ಜೊತೆಗೆ ಬರುವ ಅಧಿವೇಶನದಲ್ಲಿ ವಿಷಯ ಪ್ರಸ್ಥಾಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

click me!