
ಬೆಂಗಳೂರು, (ಮೇ.26): ಹೃದಯಾಘಾತದಿಂದ ಕೊನೆಯುಸಿರೆಳೆದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ಅಂತ್ಯಕ್ರಿಯೆ ಇಂದು (ಬುಧವಾರ) ಸಂಜೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.
ಬ್ರಾಹ್ಮಣರ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆದಿದ್ದು, ಅವರ ಪುತ್ರ ರಾಜು ದೊರೆಸ್ವಾಮಿ ವಿಧಿವಿಧಾನಗಳನ್ನ ನೆರವೇರಿಸಿದರು. ಸರ್ಕಾರದ ಸೂಚನೆ ಹಿನ್ನಲೆ ಸಕಲ ಸರ್ಕಾರಿ ಗೌರವಗಳೊಂದಿಗೆ ದೊರೆಸ್ವಾಮಿ ಅವರ ಅಂತ್ಯಕ್ರಿಯೆ ನಡೆಸಲಾಯ್ತು.
ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ವಿಧಿವಶ
ಪಾರ್ಥೀವ ಶರೀರ ಚಿತಾಗಾರಕ್ಕೆ ಆಗಮಿಸುತ್ತಲೇ ಬೆಂಬಲಿಗಲು ದೊರೆಸ್ವಾಮಿಯವರಿಗೆಎ ಜಯವಾಗಲಿ, ಅಮರವಾಗಲಿ ಎಂದು ಜೈಕಾರಗಳನ್ನು ಕೂಗಿದರು.
ದೊರೆಸ್ವಾಮಿಯವರ ಅಂತ್ಯಸಂಸ್ಕಾರದಲ್ಲಿ ಶಾಸಕ ಕೃಷ್ಣ ಭೈರೇಗೌಡ, ಶಾಸಕಿ ಸೌಮ್ಯ ರೆಡ್ಡಿ ಪಾಲ್ಗೊಂಡಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ