ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಆಸ್ಪತ್ರೆಗೆ ದಾಖಲು

Published : Jan 13, 2019, 08:19 AM IST
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಆಸ್ಪತ್ರೆಗೆ ದಾಖಲು

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು| ಹೃದಯ ಸಂಬಂಧಿ ಕಾಯಿಲೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು[ಜ.13]: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ (100) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದು ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಕ್ರವಾರ ರಾತ್ರಿ ಹೃದಯ ಸಮಸ್ಯೆ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ರಾತ್ರಿ ಎಲ್ಲಾ ಪರೀಕ್ಷೆಗಳನ್ನೂ ನಡೆಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಪ್ರಸ್ತುತ ಆರೋಗ್ಯ ಸ್ಥಿರವಾಗಿದ್ದು, ಸಾಮಾನ್ಯ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಆರೋಗ್ಯ ಸ್ಥಿತಿ ಪರಿಶೀಲಿಸಿ ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌, ಎಚ್‌.ಎಸ್‌.ದೊರೆಸ್ವಾಮಿ ಅವರಿಗೆ ಮೊದಲಿನಿಂದಲೂ ಹೃದಯದ ಒಂದು ವಾಲ್‌್ವನಲ್ಲಿ ಸೋರಿಕೆ ಸಮಸ್ಯೆ ಇದೆ. ಜತೆಗೆ ಕಳೆದ 8-10 ವರ್ಷದಿಂದ ವಯೋ ಸಹಜವಾಗಿ ಅಸ್ತಮಾ, ಅಧಿಕ ರಕ್ತದೊತ್ತಡ ಸೇರಿದಂತೆ ಕೆಲ ಅನಾರೋಗ್ಯ ಸಮಸ್ಯೆ ಇವೆ. ಪ್ರತಿ 2-3 ತಿಂಗಳಿಗೊಮ್ಮೆ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಾರೆ ಎಂದರು.

ಹೃದಯ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2028ರಲ್ಲಿ ಜೆಸಿಬಿ ಪಾರ್ಟಿಯಿಂದ ಸ್ಪರ್ಧೆ: ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ ಘೋಷಣೆ
ರಸ್ತೆ ಗ್ಯಾರಂಟಿ ಕೊಡುವಂತೆ ಬಿಜೆಪಿಯಿಂದ ಆಂದೋಲನ ಮಾಡಿ: ಸಂಸದ ಬೊಮ್ಮಾಯಿ