
ಬೆಂಗಳೂರು : 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಾಜಭವನ ವೀಕ್ಷಣೆಗೆ ಆ. 16, 17 ಮತ್ತು 18ರಂದು ಸಂಜೆ 6 ರಿಂದ 7.30 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ.
ರಾಜಭವನಕ್ಕೆ ಪ್ರವೇಶ ಉಚಿತವಾಗಿದ್ದು, ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಸರ್ಕಾರ ನೀಡಿರುವ ಸ್ಪಷ್ಟವಾಗಿ ಭಾವಚಿತ್ರವಿರುವ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ರಾಜಭವನ ಪ್ರವೇಶದ ಸಂದರ್ಭದಲ್ಲಿ ಭದ್ರತಾ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿದೆ. ರಾಜಭವನದ ಆವರಣದೊಳಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟ ಸ್ಥಳಗಳನ್ನು ಬಿಟ್ಟು ಬೇರೆಡೆಗೆ ಪ್ರವೇಶಿಸಬಾರದು.
ಸಾರ್ವಜನಿಕರು ಪ್ರವೇಶದ ಸಂದರ್ಭದಲ್ಲಿ ಮತ್ತು ಪ್ರವೇಶಿಸಿದ ಬಳಿಕ ಭದ್ರತೆಯ ಅಧಿಕಾರಿ ಮತ್ತು ಸಿಬ್ಬಂದಿ ನೀಡುವ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಜಭವನದ ಆವರಣದೊಳಗೆ ಶಾಂತಿ ಕಾಪಾಡುವ ಮೂಲಕ ಸಹಕರಿಸಬೇಕು ಎಂದು ಕೋರಲಾಗಿದೆ.
ವಿಶೇಷ ಸೂಚನೆ: ರಾಜಭವನದ ಪ್ರವೇಶದ ಸಂದರ್ಭದಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕ್ಯಾಮೆರಾ ಮತ್ತು ಎಲ್ಲಾ ರೀತಿಯ ಎಲೆಕ್ಟ್ರಿಕಲ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚೂಪಾದ ವಸ್ತುಗಳು ಮತ್ತು ಎಲ್ಲ ರೀತಿಯ ಮೆಟಲ್ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತು, ಬೆಂಕಿಪೊಟ್ಟಣ, ಲೈಟರ್, ಎಲ್ಲಾ ರೀತಿಯ ಬ್ಯಾಗ್ ಮತ್ತು ಕೈ ಚೀಲಗಳನ್ನು, ತಂಬಾಕು ಮತ್ತು ಮಧ್ಯಪಾನ ಉತ್ಪನ್ನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜತೆಗೆ ಸಾರ್ವಜನಿಕರ ಎಲ್ಲಾ ರೀತಿಯ ವಾಹನಗಳನ್ನು ರಾಜಭವನದ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ರಾಜಭವನಕ್ಕೆ ಬರುವ ಸಾರ್ವಜನಿಕರು ಭದ್ರತಾ ಸಿಬ್ಬಂದಿ ನೀಡುವ ಸೂಚನೆಗಳನ್ನು ಪಾಲಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೇಶ ಹೇಗೆ
*ಎಲ್ಲರಿಗೂ ಉಚಿತ ಪ್ರವೇಶ
*ಯಾವಾಗ
ಆ.16, 17, 18ರಂದು ಅವಕಾಶ
ವೀಕ್ಷಣೆಗೆ ಸಮಯ
*ಸಂಜೆ 6ರಿಂದ 7.30ರವರೆಗೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ